Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 28:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ‘ನಾನು ಅದರಲ್ಲಿ ವ್ಯಾಧಿಯನ್ನೂ, ಅದರ ಚೌಕಗಳಲ್ಲಿ ಸಂಹಾರವನ್ನೂ ಉಂಟು ಮಾಡುವೆನು, ಖಡ್ಗವು ಸುತ್ತುಮುತ್ತಲೂ ಅದರ ಮೇಲೆ ಬೀಸುತ್ತಿರುವಾಗ ಪ್ರಜೆಗಳು ಅದರ ನಡುವೆ ಹತರಾಗಿ ಬೀಳುವರು; ಆಗ ನಾನೇ ಯೆಹೋವನು’ ಎಂದು ಅವರಿಗೆ ತಿಳಿದು ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನಾನು ಅದರಲ್ಲಿ ವ್ಯಾಧಿಯನ್ನೂ ಅದರ ಚೌಕಗಳಲ್ಲಿ ಸಂಹಾರವನ್ನೂ ಉಂಟುಮಾಡುವೆನು; ಖಡ್ಗವು ಸುತ್ತುಮುತ್ತಲು ಅದರ ಮೇಲೆ ಬೀಸುತ್ತಿರುವಾಗ ಪ್ರಜೆಗಳು ಅದರ ನಡುವೆ ಹತರಾಗಿ ಬೀಳುವರು; ಆಗ ನಾನೇ ಸರ್ವೇಶ್ವರ ಎಂದು ಅವರಿಗೆ ತಿಳಿದುಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನಾನು ಅದರಲ್ಲಿ ವ್ಯಾಧಿಯನ್ನೂ ಅದರ ಚೌಕಗಳಲ್ಲಿ ಸಂಹಾರವನ್ನೂ ಉಂಟುಮಾಡುವೆನು; ಖಡ್ಗವು ಸುತ್ತುಮುತ್ತಲು ಅದರ ಮೇಲೆ ಬೀಸುತ್ತಿರಲು ಪ್ರಜೆಗಳು ಅದರ ನಡುವೆ ಹತರಾಗಿ ಬೀಳುವರು; ಆಗ ನಾನೇ ಯೆಹೋವನು ಎಂದು ಅವರಿಗೆ ತಿಳಿದುಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಚೀದೋನಿಗೆ ನಾನು ರೋಗಮರಣಗಳನ್ನು ಕಳುಹಿಸುವೆನು. ನಗರದೊಳಗೆ ವಾಸಿಸುವ ಅನೇಕ ಮಂದಿ ಸಾಯುವರು. ನಗರದ ಹೊರಗೆ ಖಡ್ಗವು ಅನೇಕರನ್ನು ಕೊಲ್ಲುವದು, ಆಗ ಅವರು ನಾನು ಯೆಹೋವನೆಂದು ತಿಳಿಯುವರು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಾನು ಅದರಲ್ಲಿ ವ್ಯಾಧಿಯನ್ನೂ ಅದರ ಚೌಕಗಳಲ್ಲಿ ಸಂಹಾರವನ್ನೂ ಉಂಟುಮಾಡುವೆನು, ಖಡ್ಗವು ಸುತ್ತುಮುತ್ತಲು ಅದರ ಮೇಲೆ ಬೀಸುತ್ತಿರುವಾಗ ಪ್ರಜೆಗಳು ಅದರ ನಡುವೆ ಹತರಾಗಿ ಬೀಳುವರು, ಆಗ ನಾನೇ ಯೆಹೋವ ದೇವರು ಎಂದು ಅವರಿಗೆ ತಿಳಿದುಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 28:23
13 ತಿಳಿವುಗಳ ಹೋಲಿಕೆ  

ನಾನು ಗೋಗನ ಸಂಗಡ ವ್ಯಾಜ್ಯಮಾಡುತ್ತಾ ಅವನನ್ನು ವ್ಯಾಧಿಗೂ, ಸಾವಿಗೂ ಗುರಿಮಾಡಿ, ನಾನು ಅವನ ಮೇಲೆಯೂ, ಅವನ ದಂಡುಗಳ ಮೇಲೆಯೂ, ಅವನೊಂದಿಗಿರುವ ಅನೇಕ ಜನಾಂಗಗಳ ಮೇಲೆಯೂ ವಿಪರೀತ ಮಳೆ, ದೊಡ್ಡ ಆನೆಕಲ್ಲು, ಬೆಂಕಿ, ಗಂಧಕ, ಇವುಗಳನ್ನು ಸುರಿಸುವೆನು.


ಬಯಲು ಭೂಮಿಯಲ್ಲಿನ ಅದರ ಕುಮಾರ್ತೆಯರು ಖಡ್ಗದಿಂದ ಹತರಾಗುವರು. ಆಗ ನಾನೇ ಯೆಹೋವನು” ಎಂದು ಎಲ್ಲರಿಗೂ ಗೊತ್ತಾಗುವುದು.


ಅವರೆಲ್ಲರನ್ನು ಬಲವಾಗಿ ಖಂಡಿಸಿ ಮುಯ್ಯಿಗೆಮುಯ್ಯಿ ತೀರಿಸುವೆನು; ಹೀಗೆ ಪ್ರತಿಕಾರಮಾಡುವುದರಿಂದ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.”


ಮೋವಾಬ್ಯರಿಗೂ ದಂಡನೆಗಳನ್ನು ವಿಧಿಸಿ ತೀರಿಸುವೆನು. ಆಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.”


ಆದುದರಿಂದ ಇಗೋ, ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನನ್ನು ಸುಲಿಗೆಗಾಗಿ ಮ್ಲೇಚ್ಛರಿಗೆ ವಶಪಡಿಸಿ, ಜನಾಂಗಗಳೊಳಗಿಂದ ಕಿತ್ತುಬಿಟ್ಟು, ದೇಶಗಳೊಳಗಿಂದ ನಿನ್ನ ಹೆಸರನ್ನು ಅಳಿಸಿ, ನಿನ್ನನ್ನು ಹಾಳುಮಾಡುವೆನು; ಆಗ ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವುದು.”


ನಿನ್ನಲ್ಲಿನ ಮೂರನೆಯ ಒಂದು ಭಾಗದವರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲಿ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲೂ ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.


ಅವರು, ‘ನಾವು ಎಲ್ಲಿಗೆ ಹೋಗೋಣ?’ ಎಂದು ನಿನ್ನನ್ನು ಕೇಳಲು ನೀನು ಅವರಿಗೆ, ‘ಮರಣ ವ್ಯಾಧಿಗೆ ನೇಮಿತರಾದವರು ಮರಣವ್ಯಾಧಿಗೆ, ಖಡ್ಗಕ್ಕೆ ನೇಮಿತರಾದವರು ಖಡ್ಗಕ್ಕೆ ಬಲಿಯಾಗಲಿ. ಕ್ಷಾಮಕ್ಕೆ ನೇಮಿತರಾದವರು ಕ್ಷಾಮಕ್ಕೆ, ಸೆರೆಗೆ ನೇಮಿತರಾದವರು ಸೆರೆಗೆ ಗುರಿಯಾಗಿ ಹೋಗಲಿ; ಇದೇ ಯೆಹೋವನ ನುಡಿ’” ಎಂದು ಹೇಳು.


ಹೀಗಿರಲು ಯೆಹೋವನು ಇಂತೆನ್ನುತ್ತಾನೆ, ‘ಇಗೋ, ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ; ಆಗ ಆ ದೇಶದಲ್ಲೆಲ್ಲಾ ಗಾಯಪಟ್ಟವರು ನರಳಾಡುವರು.


ನಾನು ಕಳುಹಿಸುವ ಕ್ಷಾಮದಿಂದಲೂ, ದುಷ್ಟಮೃಗಗಳಿಂದಲೂ ನಿನಗೆ ಪುತ್ರಶೋಕವು ಉಂಟಾಗುವುದು; ವ್ಯಾಧಿಯೂ, ರಕ್ತ ಪ್ರವಾಹವೂ ನಿನ್ನಲ್ಲಿ ವ್ಯಾಪಿಸುವವು; ನಿನ್ನನ್ನು ಖಡ್ಗಕ್ಕೆ ತುತ್ತು ಮಾಡುವೆನು” ಇದು ಯೆಹೋವನಾದ ನನ್ನ ನುಡಿ.


ನರಪುತ್ರನೇ, ನೀನು ದೈವೋಕ್ತಿಯನ್ನು ಸಾರಿ ಚಪ್ಪಾಳೆ ಹೊಡಿ; ಖಡ್ಗವು ಎರಡರಷ್ಟು, ಮೂರರಷ್ಟು ಸಂಹರಿಸಲಿ! ಪ್ರಜೆಯನ್ನು ಹತಿಸುವ ಖಡ್ಗ! ಸುತ್ತಲು ಬೀಸಿ, ಅಧಿಪತಿಯನ್ನು ಹತಿಸುವ ಖಡ್ಗ!


ಖಡ್ಗವೇ, ಏಕಾಗ್ರವಾಗಿ ಬಲಕ್ಕೆ ಹೋಗು, ಸಿದ್ಧವಾಗಿ ಎಡಕ್ಕೆ ಸಾಗು, ನಿನ್ನ ಖಡ್ಗದ ಮೊನೆಯಿದ್ದ ಕಡೆಗೇ ಹೊರಡು.


ಖಡ್ಗವು ಐಗುಪ್ತದ ಮೇಲೆ ಬೀಳುವುದು; ಅಲ್ಲಿನ ಪ್ರಜೆಗಳು ಹತರಾಗಲು ಕೂಷಿನಲ್ಲಿಯೂ ಸಂಕಟವಾಗುವುದು; ಐಗುಪ್ತದ ಜನಸಮೂಹವು ಒಯ್ಯಲ್ಪಡುವುದು, ಅದರ ಅಸ್ತಿವಾರವು ಮುರಿದು ಹಾಳಾಗುವುದು.


“ಉತ್ತರ ದೇಶದ ಸಕಲ ಪ್ರಭುಗಳೂ ಸಮಸ್ತ ಮತ್ತು ಚೀದೋನ್ಯರೂ ಸಂಹೃತರೊಂದಿಗೆ ಇಳಿದು ಅಲ್ಲಿದ್ದಾರೆ; ಭಯಂಕರವಾಗಿದ್ದ ತಮ್ಮ ಶೌರ್ಯಕ್ಕೆ ನಾಚಿಕೊಂಡು ಖಡ್ಗದಿಂದ ಹತರಾದವರ ಮಧ್ಯೆ ಸುನ್ನತಿಹೀನರಾಗಿ ಬಿದ್ದು, ಪ್ರೇತಗಳ ಸಂಗಡ ಸೇರಿ ನಿಂದೆಯನ್ನು ಹೊತ್ತುಕೊಂಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು