ಯೆಹೆಜ್ಕೇಲನು 28:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅಲ್ಲಿ ನಿರ್ಭಯವಾಗಿ ವಾಸಿಸುವರು, ಮನೆಗಳನ್ನು ಕಟ್ಟಿಕೊಂಡು, ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಸುಖವಾಗಿ ವಾಸಿಸುವರು; ಅವರನ್ನು ಆಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ನಿರ್ಭಯವಾಗಿ ವಾಸಿಸುವರು. ಆಗ ಯೆಹೋವನಾದ ನಾನೇ ಅವರ ದೇವರು ಎಂದು ಅವರಿಗೆ ನಿಶ್ಚಯವಾಗುವುದು.’” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅಲ್ಲಿ ನಿರ್ಭಯವಾಗಿರುವರು; ಮನೆಗಳನ್ನು ಕಟ್ಟಿಕೊಂಡು, ತೋಟಗಳನ್ನು ಮಾಡಿಕೊಂಡು, ಸುಖವಾಗಿ ವಾಸಿಸುವರು; ಅವರನ್ನು ಹೀನೈಸುವ ನೆರೆಹೊರೆಯವರನ್ನು ನಾನು ದಂಡಿಸಿದ ಮೇಲೆ ನಾನೇ ತಮ್ಮ ದೇವರಾದ ಸರ್ವೇಶ್ವರ ಎಂದು ಅವರಿಗೆ ನಿಶ್ಚಯವಾಗುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅಲ್ಲಿ ನಿರ್ಭಯವಾಗಿರುವರು, ಮನೆಗಳನ್ನು ಕಟ್ಟಿಕೊಂಡು ತೋಟಗಳನ್ನು ಮಾಡಿಕೊಂಡು ಸುಖವಾಗಿ ವಾಸಿಸುವರು; ಅವರನ್ನು ಹೀನೈಸುವ ನೆರೆಹೊರೆಯವರಿಗೆ ನಾನು ದಂಡನೆಮಾಡಿದ ಮೇಲೆ ನಾನೇ ತಮ್ಮ ದೇವರಾದ ಯೆಹೋವನು ಎಂದು ಅವರಿಗೆ ನಿಶ್ಚಯವಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆ ದೇಶದಲ್ಲಿ ಅವರು ಸುರಕ್ಷಿತವಾಗಿ ವಾಸಿಸುವರು; ಮನೆಗಳನ್ನು ಕಟ್ಟಿ ದ್ರಾಕ್ಷಿತೋಟಗಳನ್ನು ಮಾಡುವರು. ಅವರನ್ನು ದ್ವೇಷಿಸಿದ ರಾಜ್ಯಗಳನ್ನು ದಂಡಿಸುವೆನು. ಆಗ ಇಸ್ರೇಲ್ ಜನರು ಸುರಕ್ಷಿತವಾಗಿ ಜೀವಿಸುವರು; ನಾನೇ ದೇವರಾದ ಯೆಹೋವನು ಎಂದು ತಿಳಿದುಕೊಳ್ಳುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅವರು ನಿರ್ಭಯವಾಗಿ ಅಲ್ಲಿ ವಾಸಿಸುವರು. ಮನೆಗಳನ್ನು ಕಟ್ಟುವರು; ದ್ರಾಕ್ಷಿತೋಟಗಳನ್ನು ನೆಡುವರು. ಹೌದು, ಅವರ ಸುತ್ತಲೂ ಅವರನ್ನು ಅಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ಅವರು ನಿರ್ಭಯವಾಗಿ ವಾಸಿಸುವರು, ಆಗ ಯೆಹೋವನಾದ ನಾನೇ ಅವರ ದೇವರೆಂದು ತಿಳಿಯುವರು.’ ” ಅಧ್ಯಾಯವನ್ನು ನೋಡಿ |