Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 28:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದುದರಿಂದ ನಾನು ನಿನ್ನ ಮೇಲೆ ಭಯಂಕರವಾದ ಜನಾಂಗದವರಾದ ಮ್ಲೇಚ್ಛರನ್ನು ಬೀಳಮಾಡುವೆನು; ಅವರು ನಿನ್ನ ಜ್ಞಾನದ ಸೊಬಗಿನ ವಿರುದ್ಧವಾಗಿ ಕತ್ತಿಯನ್ನು ಹಿರಿಯುವರು; ನಿನ್ನ ಪ್ರಕಾಶವನ್ನು ಕೆಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ‘ಆದುದರಿಂದ ನಾನು ಅತಿಭಯಂಕರ ಜನಾಂಗದವರಾದ ಮ್ಲೇಚ್ಛರನ್ನು ನಿನ್ನ ಮೇಲೆ ಬೀಳಮಾಡುವೆನು; ಅವರು ನಿನ್ನ ಜ್ಞಾನದ ಸೊಬಗಿನ ಮೇಲೆ ಕತ್ತಿ ಹಿರಿದು, ನಿನ್ನ ಹೊಳಪನ್ನು ಹೊಲಸುಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾನು ನಿನ್ನ ಮೇಲೆ ಅತಿ ಭಯಂಕರ ಜನಾಂಗದವರಾದ ಮ್ಲೇಚ್ಫರನ್ನು ಬೀಳಮಾಡುವೆನು; ಅವರು ನಿನ್ನ ಜ್ಞಾನದ ಸೊಬಗಿನ ಮೇಲೆ ಕತ್ತಿಹಿರಿದು ನಿನ್ನ ಹೊಳಪನ್ನು ಹೊಲಸುಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಿನಗೆ ವಿರುದ್ಧವಾಗಿ ಯುದ್ಧ ಮಾಡಲು ಅಪರಿಚಿತರನ್ನು ಕರೆತರುವೆನು. ಅವರು ಎಲ್ಲಾ ಜನಾಂಗಗಳವರಿಗಿಂತ ಕ್ರೂರರು, ಅವರು ತಮ್ಮ ಖಡ್ಗವನ್ನು ಎಳೆದು ನಿನ್ನ ಜ್ಞಾನದಿಂದ ಕೊಂಡುಕೊಂಡಿದ್ದ ಎಲ್ಲಾ ಬೆಲೆಬಾಳುವ ಅಪೂರ್ವ ವಸ್ತುಗಳನ್ನು ನಾಶಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದ್ದರಿಂದ ಭಯಂಕರ ಜನಾಂಗದವರಾದ ವಿದೇಶಿಯರನ್ನು ನಾನು ನಿನ್ನ ಮೇಲೆ ಬೀಳಮಾಡುವೆನು. ಅವರು ನಿನ್ನ ಸೌಂದರ್ಯ ಮತ್ತು ಜ್ಞಾನದ ವಿರುದ್ಧವಾಗಿ ಖಡ್ಗವನ್ನು ಹಿರಿಯುವರು; ನಿನ್ನ ಹೊಳೆಯುವ ವೈಭವವನ್ನು ಕೆಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 28:7
14 ತಿಳಿವುಗಳ ಹೋಲಿಕೆ  

“ಜನಾಂಗಗಳಲ್ಲಿ ಭಯಂಕರವಾದ ಅನ್ಯರು ಅದನ್ನು ಕಡಿದುಹಾಕಿ ಬಿಟ್ಟಿದ್ದಾರೆ. ಅದರ ರೆಂಬೆಗಳು ಗುಡ್ಡಗಳಲ್ಲಿಯೂ, ಎಲ್ಲಾ ಹಳ್ಳಕೊಳ್ಳಗಳಲ್ಲಿಯೂ ಬಿದ್ದಿವೆ; ಅದರ ಕೊಂಬೆಗಳು ದೇಶದ ಎಲ್ಲಾ ಹಳ್ಳಗಳ ಹತ್ತಿರ ಮುರಿದುಹಾಕಲ್ಪಟ್ಟಿವೆ; ಲೋಕದ ಸಮಸ್ತ ಜನಾಂಗಗಳು ಅದರ ನೆರಳಿನಿಂದ ದೂರ ಸರಿದು ಅದನ್ನು ಬಿಟ್ಟುಬಿಟ್ಟಿದೆ.


ನಾನು ನಿನ್ನ ಪ್ರಜೆಯನ್ನು ಅತಿಭಯಂಕರ ಜನಾಂಗದವರಾದ ಬಲಿಷ್ಠರ ಕತ್ತಿಗಳಿಂದ ಸಂಹರಿಸುವೆನು. ಅವರು ಐಗುಪ್ತದ ಮಹತ್ತನ್ನು ನಾಶ ಮಾಡುವರು. ಅದರ ಜನ ಸಮೂಹವೆಲ್ಲಾ ನಿರ್ನಾಮವಾಗುವುದು.


ಆ ದೇಶವನ್ನು ನಾಶಪಡಿಸಲಿಕ್ಕೆ ಅವನನ್ನು ಅತಿಭಯಂಕರ ಜನಾಂಗದವರಾದ ಅವನ ಸೈನಿಕರೊಡನೆ ಬರಮಾಡುವೆನು; ಅವರು ಐಗುಪ್ತದ ಮೇಲೆ ಕತ್ತಿ ಹಿರಿದು ದೇಶವನ್ನು ಹತರಾದವರಿಂದ ತುಂಬಿಸುವರು.


ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವುದಿಲ್ಲವೋ? ಯೆಹೋವನಿಂದಲ್ಲದೆ ಪಟ್ಟಣಕ್ಕೆ ವಿಪತ್ತು ಸಂಭವಿಸುವುದೋ?


ನಾನು ರಾತ್ರಿ ಕಂಡ ಕನಸಿನಲ್ಲಿ ಸ್ವಲ್ಪ ಹೊತ್ತಿನ ಮೇಲೆ ಆಹಾ, ನಾಲ್ಕನೆಯ ಮೃಗವು ಕಾಣಿಸಿತು; ಅದು ಭಯಂಕರವಾಗಿತ್ತು, ಹೆದರಿಸುವಂಥದಾಗಿತ್ತು, ಅಧಿಕ ಬಲವುಳ್ಳದ್ದಾಗಿತ್ತು. ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ನುಂಗುತ್ತಾ, ಚೂರುಚೂರು ಮಾಡುತ್ತಾ ಉಳಿದದ್ದನ್ನು ಕಾಲುಗಳಿಂದ ತುಳಿಯುತ್ತಾ ಇತ್ತು. ಅದು ಹಿಂದಿನ ಎಲ್ಲಾ ಮೃಗಗಳಿಗಿಂತ ವಿಲಕ್ಷಣವಾಗಿತ್ತು. ಅದಕ್ಕೆ ಹತ್ತು ಕೊಂಬುಗಳಿದ್ದವು.


ಅವನ ವೈಭವವನ್ನು ತಡೆದುಬಿಟ್ಟಿದ್ದೀ; ಅವನ ಸಿಂಹಾಸನವನ್ನು ನೆಲಕ್ಕುರುಳಿಸಿದ್ದೀ.


ಹೀಗಿರಲು ನಾನು ಅತಿ ದುಷ್ಟ ಜನಾಂಗಗಳನ್ನು ಬರಮಾಡುವೆನು, ಅವು ನನ್ನ ಜನರ ಮನೆಗಳನ್ನು ವಶಮಾಡಿಕೊಳ್ಳುವುದು; ನಾನು ಬಲಿಷ್ಠರ ಸೊಕ್ಕನ್ನು ಅಡಗಿಸುವೆನು, ಅವರ ಪವಿತ್ರ ಸ್ಥಾನಗಳು ಹೊಲೆಗೆಡುವವು.


“‘ನಿನ್ನ ಸೌಂದರ್ಯದ ನಿಮಿತ್ತ ನಿನ್ನ ಹೃದಯವು ಉಬ್ಬಿಕೊಂಡಿತು; ನಿನ್ನ ಪ್ರಕಾಶದ ನಿಮಿತ್ತ ನಿನ್ನ ಬುದ್ಧಿಯನ್ನು ಹಾಳು ಮಾಡಿಕೊಂಡೆ; ನಾನು ನಿನ್ನನ್ನು ನೆಲಕ್ಕೆ ಹಾಕಿ, ನಿನ್ನನ್ನು ಅರಸರು ನೋಡುವಂತೆ ಅವರ ಕಣ್ಣ ಮುಂದೆ ಹಾಕುವೆನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಿಂದ ಐಗುಪ್ತದ ಅಸಂಖ್ಯಾತ ಪ್ರಜೆಯನ್ನು ಕೊನೆಗಾಣಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು