Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 28:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀನು ನಿನ್ನನ್ನು ಸಂಹರಿಸುವವರ ಎದುರಿಗೆ ನಾನು ದೇವರು ಎಂದು ಹೇಳುವೆಯೋ? ನಿನ್ನನ್ನು ಸಂಹರಿಸುವವನ ಕೈಯಲ್ಲಿ ನೀನು ದೇವರಲ್ಲ, ನರಪ್ರಾಣಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಿನ್ನನ್ನು ಸಂಹರಿಸುವವನೆದುರಿಗೆ ನಿಂತು, ‘ನಾನು ದೇವರು’ ಎಂದು ಹೇಳಬಲ್ಲೆಯಾ? ಹತಿಸುವವನ ಕೈಗೆ ನೀನು ಎಂದಿಗೂ ದೇವರಲ್ಲ, ನರಪ್ರಾಣಿಯೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀನು ನಿನ್ನನ್ನು ಸಂಹರಿಸುವವನೆದುರಿಗೆ ನಾನು ದೇವರು ಎಂದು ಹೇಳುವಿಯಾ? ಹತಿಸುವವನ ಕೈಗೆ ನೀನು ಎಂದಿಗೂ ದೇವರಲ್ಲ, ನರಪ್ರಾಣಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆ ಮನುಷ್ಯನು ನಿನ್ನನ್ನು ಕೊಂದುಹಾಕುವನು. ಆಗಲೂ ನೀನು “ನಾನು ದೇವರು” ಎಂದು ಹೇಳುವಿಯಾ? ಇಲ್ಲ. ಅವನು ನಿನ್ನನ್ನು ತನ್ನ ಅಧಿಕಾರದಲ್ಲಿರಿಸುವನು. ಆಗ ನೀನು “ಕೇವಲ ಮನುಷ್ಯನೇ” ಎಂದು ತಿಳಿಯುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಿನ್ನನ್ನು ಕೊಲ್ಲಲು ಬರುವವನ ಮುಂದೆ ಇನ್ನು, “ನಾನು ದೇವರು,” ಎಂದು ಹೇಳುವೆಯೋ? ನಿನ್ನನ್ನು ಕೊಲ್ಲುವವನ ಕೈಯಲ್ಲಿ ನೀನು ದೇವರಲ್ಲ ನರಪ್ರಾಣಿಯೇ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 28:9
10 ತಿಳಿವುಗಳ ಹೋಲಿಕೆ  

“ನರಪುತ್ರನೇ, ನೀನು ತೂರಿನ ಅರಸನಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನೇ ದೇವರು, ಸಮುದ್ರ ಮಧ್ಯದಲ್ಲಿ ದೇವರ ಸ್ಥಾನದಲ್ಲಿ ಕುಳಿತುಕೊಂಡಿರುವೆನು’ ಎಂದು ಹೇಳಿಕೊಂಡಿದ್ದೀ; ನೀನು ದೇವರಲ್ಲ, ಮನುಷ್ಯನೇ. ಆದರೂ ನಿನ್ನನ್ನು ನೀನೇ ದೇವರಿಗೆ ಸಮಾನನೆಂದು ಭಾವಿಸಿಕೊಂಡಿರುವಿ.


ಐಗುಪ್ತ್ಯರು ಮನುಷ್ಯ ಮಾತ್ರದವರೇ, ದೇವರಲ್ಲ. ಅವರ ಅಶ್ವಗಳು ಆತ್ಮವಲ್ಲ, ಮಾಂಸಮಯವಾದವುಗಳು. ಯೆಹೋವನು ತನ್ನ ಕೈ ಚಾಚುವಾಗ ಸಹಾಯ ಮಾಡಿದವನು ಮತ್ತು ಸಹಾಯಪಡೆದವನು ಬಿದ್ದುಹೋಗುವನು. ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.


ಆದರೂ ನರರಂತೆ ಸತ್ತೇ ಹೋಗುವಿರಿ, ಪ್ರತಿಯೊಬ್ಬ ಪ್ರಭುವಿನಂತೆ ನೀವೆಲ್ಲರೂ ಬಿದ್ದು ಹೋಗುವಿರಿ” ಎಂದು ನಾನು ಹೇಳಿದೆನು.


ಸೊದೋಮೆಂಬ ನಿನ್ನ ತಂಗಿಯ ದೋಷವನ್ನು ನೋಡು; ಹೆಮ್ಮೆಪಡುವುದು, ಹೊಟ್ಟೆತುಂಬಿಸಿಕೊಳ್ಳುವುದು, ಸ್ವಂತ ಸುಖದಲ್ಲಿ ಮುಳುಗಿರುವುದು, ಇವು ಆಕೆಯಲ್ಲಿಯೂ ಮತ್ತು ಆಕೆಯ ಕುಮಾರ್ತೆಯರಲ್ಲಿಯೂ ಇದ್ದವು. ಅಲ್ಲದೆ ಆಕೆಯು ದೀನದರಿದ್ರರಿಗೆ ಬೆಂಬವಾಗಿರಲಿಲ್ಲ.


“ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು; ಸಮುದ್ರದ ಮಧ್ಯದಲ್ಲಿ ಹತರಾದವರ ಹಾಗೆ ನೀನು ಸಾಯುವಿ.


ನೀನು ಅನ್ಯರ ಕೈಯಿಂದ ಸುನ್ನತಿಹೀನರ ಮರಣಕ್ಕೆ ಗುರಿಯಾಗುವಿ; ಏಕೆಂದರೆ ನಾನೇ ಇದನ್ನು ನುಡಿದಿದ್ದೇನೆ” ಎಂದು ಕರ್ತನಾದ ಯೆಹೋವನು ಹೇಳಿದ್ದಾನೆ.


ಈ ನಿನವೆಯು ಮೊದಲು ಉಲ್ಲಾಸದ ನಗರಿಯಾಗಿ ನೆಮ್ಮದಿಯಿಂದ ನೆಲೆಗೊಂಡಿದ್ದು ತನ್ನ ಹೃದಯದೊಳಗೆ, “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ” ಅಂದುಕೊಳ್ಳುತ್ತಿತ್ತು; ಅಯ್ಯೋ, ಎಷ್ಟೋ ಹಾಳಾಗಿ ಹೋಗಿ ಮೃಗಗಳು ತಂಗುವ ಕೊಟ್ಟಿಗೆಯ ಬೀಡಾಗಿದೆ! ಅದರ ಮುಂದೆ ಹಾದುಹೋಗುವವರೆಲ್ಲರು ಸಿಳ್ಳು ಹಾಕಿ ಅಪಹಾಸ್ಯ ಮಾಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು