Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 29:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಹತ್ತನೆಯ ವರ್ಷದ, ಹತ್ತನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಹತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 [ಯೆಹೋಯಾಖೀನನು ಸೆರೆಯಾದ] ಹತ್ತನೆಯ ವರುಷದ ಹತ್ತನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸೆರೆ ಒಯ್ಯಲ್ಪಟ್ಟ ಹತ್ತನೇ ವರ್ಷದ ಹತ್ತನೇ ತಿಂಗಳಿನ, ಹನ್ನೆರಡನೇ ದಿವಸದಲ್ಲಿ ನನ್ನ ಒಡೆಯನಾದ ಯೆಹೋವನ ಸಂದೇಶ ನನಗೆ ಬಂದಿತು. ಆತನು ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಹತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹನ್ನೆರಡನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 29:1
13 ತಿಳಿವುಗಳ ಹೋಲಿಕೆ  

ಇಪ್ಪತ್ತೇಳನೆಯ ವರ್ಷದ, ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,


ಹನ್ನೊಂದನೆಯ ವರ್ಷದ, ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,


ಏಳನೆಯ ವರ್ಷದ, ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಯೆಹೋವನನ್ನು ಪ್ರಶ್ನೆ ಕೇಳುವುದಕ್ಕೆ ಬಂದು ನನ್ನ ಮುಂದೆ ಕುಳಿತುಕೊಂಡರು.


ನಾವು ಸೆರೆಯಾದ ಇಪ್ಪತ್ತೈದನೆಯ ವರ್ಷದ, ಮೊದಲನೆಯ ತಿಂಗಳಿನ, ಹತ್ತನೆಯ ದಿನದಲ್ಲಿ, ಪಟ್ಟಣವು ಹಾಳಾದ ಮೇಲೆ ಹದಿನಾಲ್ಕನೆಯ ವರ್ಷದ ಆ ದಿನದಲ್ಲೇ ಯೆಹೋವನ ಹಸ್ತಸ್ಪರ್ಶದಿಂದ ನಾನು ಪರವಶನಾಗಲು, ಆತನು ನನ್ನನ್ನು ಅಲ್ಲಿಗೆ ಬರಮಾಡಿದನು.


ಯೆಹೋಯಾಖೀನನು ಸೆರೆಯಾದ ಆರನೆಯ ವರ್ಷದ, ಆರನೆಯ ತಿಂಗಳಿನ, ಐದನೆಯ ದಿನದಲ್ಲಿ ನಾನೂ ಮತ್ತು ಯೆಹೂದದ ಹಿರಿಯರೂ ನನ್ನ ಮನೆಯೊಳಗೆ ಎದುರಾಗಿ ಕುಳಿತಿರಲು ಕರ್ತನಾದ ಯೆಹೋವನ ಹಸ್ತಸ್ಪರ್ಶದಿಂದ ನಾನು ಪರವಶನಾದೆನು.


ಅರಸನಾದ ಯೆಹೋಯಾಖೀನನು ಸೆರೆಯಾದ ಐದನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ,


ಅವನು ಆರೋನನಿಗೆ, “ನೀನು ದೋಷಪರಿಹಾರ ಯಜ್ಞಕ್ಕಾಗಿ ಪೂರ್ಣಾಂಗವಾದ ಹೋರಿಕರುವನ್ನು ಮತ್ತು ಸರ್ವಾಂಗಹೋಮಕ್ಕಾಗಿ ಪೂರ್ಣಾಂಗವಾದ ಟಗರನ್ನು ನಿನಗೋಸ್ಕರ ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು.


ಐಗುಪ್ತವನ್ನು ಕುರಿತದ್ದು; ಐಗುಪ್ತದ ಅರಸನಾದ ಫರೋಹ ನೆಕೋವಿನ ಸೈನ್ಯವು ಯೂಫ್ರೆಟಿಸ್ ನದಿಯ ಬಳಿ ಕರ್ಕೆಮೀಷಿನಲ್ಲಿರುವಾಗ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಆ ಸೈನ್ಯವನ್ನು ಹೊಡೆದ ವಿಷಯ:


ಹನ್ನೊಂದನೆಯ ವರ್ಷದ, ಮೊದಲನೆಯ ತಿಂಗಳಿನ ಏಳನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,


ಅ ದಿನದಲ್ಲಿ ಐಗುಪ್ತ ದೇಶದ ಮಧ್ಯದಲ್ಲಿ ಯೆಹೋವನಿಗೆ ಒಂದು ಯಜ್ಞಪೀಠವು, ದೇಶದ ಮೇರೆಯಲ್ಲಿ ಯೆಹೋವನಿಗೆ ಒಂದು ಸ್ತಂಭವೂ ಇರುವುದು.


ಯೆರೆಮೀಯನು ತಹಪನೇಸಿನಲ್ಲಿರುವಾಗ ಯೆಹೋವನು ಈ ವಾಕ್ಯವನ್ನು ಅವನಿಗೆ ದಯಪಾಲಿಸಿದನು.


ಯೆಹೋವನು ಜನಾಂಗಗಳ ವಿಷಯವಾಗಿ ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ.


“ಇಗೋ, ಜೀವಲೋಕದಲ್ಲಿ ನಾನು ನನ್ನ ಭಯವನ್ನು ಹುಟ್ಟಿಸಿದ್ದೇನೆ; ಫರೋಹನೂ ಮತ್ತು ಅವನ ಸಮಸ್ತ ಪ್ರಜೆಯೂ ಸುನ್ನತಿಹೀನರ ಮಧ್ಯೆ, ಖಡ್ಗದಿಂದ ಹತರಾದವರ ನಡುವೆ ಮಲಗುವರು” ಎಂಬುದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು