ಯೆಹೆಜ್ಕೇಲನು 29:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಐಗುಪ್ತ ದೇಶವನ್ನು ಕೊಡುತ್ತೇನೆ; ಅವನು ಅದರ ಜನಸಮೂಹವನ್ನೂ, ಅದರ ಕೊಳ್ಳೆಯನ್ನೂ, ಅದರ ಸುಲಿಗೆಯನ್ನೂ ಸೂರೆಮಾಡುವನು; ಇದೇ ಅವನ ಸೈನ್ಯಕ್ಕೆ ಸಿಕ್ಕುವ ಪ್ರತಿಫಲವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಗೋ, ನಾನು ಬಾಬಿಲೋನಿನ ಅರಸ ನೆಬೂಕದ್ನೆಚ್ಚರನಿಗೆ ಈಜಿಪ್ಟ್ ದೇಶವನ್ನು ಕೊಡುವೆನು; ಅವನು ಅದರ ಜನರನ್ನೂ ಆಸ್ತಿಪಾಸ್ತಿಯನ್ನೂ ಒಯ್ದು, ಆ ದೇಶವನ್ನು ಸೂರೆಮಾಡಿ ಕೊಳ್ಳೆಹೊಡೆಯುವನು; ಅದೇ ಅವನ ಸೈನ್ಯಕ್ಕೆ ಸಿಕ್ಕುವ ಸಂಬಳ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಐಗುಪ್ತದೇಶವನ್ನು ಕೊಡುವೆನು; ಅವನು ಅದರ ಜನ ಯಾವತ್ತನ್ನು ಒಯ್ದು ಆ ದೇಶವನ್ನು ಸೂರೆಮಾಡಿ ಕೊಳ್ಳೆಹೊಡೆಯುವನು; ಅದೇ ಅವನ ಸೈನ್ಯಕ್ಕೆ ಸಂಬಳ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ರಾಜನಾದ ನೆಬೂಕದ್ನೆಚ್ಚರನಿಗೆ ನಾನು ಈಜಿಪ್ಟ್ ದೇಶವನ್ನು ಕೊಡುವೆನು. ನೆಬೂಕದ್ನೆಚ್ಚರನು ಈಜಿಪ್ಟಿನವರನ್ನು ಸೆರೆಹಿಡಿದು ಕೊಂಡೊಯ್ವನು. ಈಜಿಪ್ಟಿನ ಬೆಲೆಬಾಳುವ ವಸ್ತುಗಳನ್ನೆಲ್ಲಾ ದೋಚುವನು. ಇದು ಅವನ ಸೈನಿಕರ ಸಂಬಳವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಗೆ ಈಜಿಪ್ಟ್ ದೇಶವನ್ನು ಕೊಡುತ್ತೇನೆ, ಅವನು ಅದರ ಜನಸಮೂಹವನ್ನೂ ಅದರ ಕೊಳ್ಳೆಯನ್ನೂ ಅದರ ಸುಲಿಗೆಯನ್ನೂ ಸೂರೆಮಾಡುವನು. ಇದೇ ಅವನ ದಂಡು ಪಟ್ಟ ಶ್ರಮಕ್ಕೆ ಪ್ರತಿಫಲವಾಗುವುದು. ಅಧ್ಯಾಯವನ್ನು ನೋಡಿ |