Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 29:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನರಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನ ಕಡೆಗೆ ಮುಖಮಾಡಿ ಅವನ ವಿಷಯದಲ್ಲಿಯೂ, ಐಗುಪ್ತ್ಯರೆಲ್ಲರ ವಿಷಯದಲ್ಲಿಯೂ ಹೀಗೆ ಪ್ರವಾದಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನರಪುತ್ರನೇ, ನೀನು ಈಜಿಪ್ಟಿನ ಅರಸ ಫರೋಹನ ಕಡೆಗೆ ಮುಖಮಾಡಿ ಅವನನ್ನು ಹಾಗು ಈಜಿಪ್ಟಿನವರೆಲ್ಲರನ್ನು ಕುರಿತು ಹೀಗೆ ನುಡಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನರಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನ ಕಡೆಗೆ ಮುಖಮಾಡಿ ಅವನ ವಿಷಯದಲ್ಲಿಯೂ ಐಗುಪ್ತ್ಯರೆಲ್ಲರ ವಿಷಯದಲ್ಲಿಯೂ ಹೀಗೆ ನುಡಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನರಪುತ್ರನೇ, ಈಜಿಪ್ಟಿನ ರಾಜನಾದ ಫರೋಹನ ಕಡೆಗೆ ಮುಖಮಾಡು. ಅವನಿಗೂ ಈಜಿಪ್ಟಿಗೂ ವಿರುದ್ಧವಾಗಿ ನನ್ನ ಪರವಾಗಿ ಮಾತನಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನರಪುತ್ರನೇ, ನೀನು ಈಜಿಪ್ಟಿನ ಅರಸನಾದ ಫರೋಹನ ಕಡೆಗೆ ಮುಖಮಾಡಿ ಅವನಿಗೂ ಸಮಸ್ತ ಈಜಿಪ್ಟಿಗೂ ವಿರೋಧವಾಗಿ ಪ್ರವಾದಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 29:2
17 ತಿಳಿವುಗಳ ಹೋಲಿಕೆ  

“ನರಪುತ್ರನೇ, ಇಸ್ರಾಯೇಲಿನ ಬೆಟ್ಟಗಳಿಗೆ ಅಭಿಮುಖನಾಗಿ ನಿಂತು, ಅವುಗಳನ್ನು ಕುರಿತು ಪ್ರವಾದಿಸು.


ಅದೇನೆಂದರೆ, ಇಗೋ ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಪ್ರಾಣ ಹುಡುಕುತ್ತಿದ್ದ ಶತ್ರುವಾದ ನೆಬೂಕದ್ನೆಚ್ಚರನೆಂಬ ಬಾಬೆಲಿನ ಅರಸನ ಕೈಗೆ ಕೊಟ್ಟಂತೆ ಐಗುಪ್ತದ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣ ಹುಡುಕುವ ಶತ್ರುಗಳ ಕೈಗೆ ಕೊಡುವೆನು; ಇದು ಯೆಹೋವನಾದ ನನ್ನ ನುಡಿ’” ಎಂಬುದೇ.


ಐಗುಪ್ತ್ಯವು ಹಾಳಾಗುವುದು, ಎದೋಮ್, ಹಾಳಾದ ಬೆಂಗಾಡಾಗುವುದು, ಏಕೆಂದರೆ ಅವರು ಯೆಹೂದ್ಯರನ್ನು ಹಿಂಸಿಸಿ, ಅವರ ದೇಶದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸಿದ್ದಾರೆ.


ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,


“ನರಪುತ್ರನೇ, ನೀನು ಅಮ್ಮೋನಿಗೆ ವಿರುದ್ಧವಾಗಿ, ಅದರ ವಿಷಯದಲ್ಲಿ ದೈವಸಂಕಲ್ಪವನ್ನು ಪ್ರವಾದಿಸುತ್ತಾ ಅದಕ್ಕೆ ಹೀಗೆ ನುಡಿ,


“ನರಪುತ್ರನೇ, ನೀನು ಯೆರೂಸಲೇಮಿನ ಅಭಿಮುಖನಾಗಿ ಅಲ್ಲಿನ ಪವಿತ್ರ ಸ್ಥಾನಗಳ ಕಡೆಗೆ ಮಾತನಾಡುತ್ತಾ ಇಸ್ರಾಯೇಲ್ ದೇಶ ಕುರಿತು ಪ್ರವಾದಿಸಿ,


“ನರಪುತ್ರನೇ, ನೀನು ದಕ್ಷಿಣಾಭಿಮುಖನಾಗಿ ಆ ಕಡೆಗೆ ಮಾತನಾಡುತ್ತಾ ದಕ್ಷಿಣ ಸೀಮೆಯ ವನದ ಪ್ರಸ್ತಾಪವನ್ನೆತ್ತಿ,


ಓಹೋ, ಕೂಷಿನ ನದಿಗಳ ಆಚೆಯಲ್ಲಿರುವ ಸೀಮೆ, ರೆಕ್ಕೆಗಳನ್ನು ಪಟಪಟನೆ ಬಡಿಯುವ ನಾಡು,


ಐಗುಪ್ತದ ವಿಷಯವಾದ ದೈವೋಕ್ತಿ. ಇಗೋ, ಯೆಹೋವನು ವೇಗವಾದ ಮೇಘವಾಹನವಾಗಿ ಐಗುಪ್ತಕ್ಕೆ ಬರುವನು. ಆತನು ಅವರಿಗೆ ಎದುರಾದಾಗ ಐಗುಪ್ತದ ವಿಗ್ರಹಗಳು ನಡುಗುವವು. ಐಗುಪ್ತರ ಹೃದಯವು ತಮ್ಮೊಳಗೆ ಕರಗಿ ನೀರಾಗುವುದು.


ಆಗ ನಾನು ಯೆಹೋವನ ಕೈಯಿಂದ ಆ ಪಾತ್ರೆಯನ್ನು ತೆಗೆದುಕೊಂಡು ಯೆಹೋವನು ಯಾವ ಜನಾಂಗಗಳ ಬಳಿಗೆ ನನ್ನನ್ನು ಕಳುಹಿಸಿದನೋ, ಆ ಸಕಲ ಜನಾಂಗಗಳು ಅದರಲ್ಲಿ ಕುಡಿಯುವಂತೆ ಮಾಡಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು