Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 29:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಐಗುಪ್ತದ ಅರಸನಾದ ಫರೋಹನೇ, ನಿನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು, ‘ಈ ನದಿ ನನ್ನದೇ, ನನಗಾಗಿಯೇ ಅದನ್ನು ಮಾಡಿಕೊಂಡಿದ್ದೇನೆ’ ಎಂದು ಹೇಳಿಕೊಳ್ಳುವ ದೊಡ್ಡ ಮೊಸಳೆಯೇ, ಇಗೋ, ನಾನು ನಿನ್ನ ವಿರುದ್ಧವಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಈಜಿಪ್ಟಿನ ಅರಸ ಫರೋಹನೇ, ನದೀಶಾಖೆಗಳ ನಡುವೆ ಒರಗಿಕೊಂಡು ‘ಈ ನದಿ ನನ್ನದೇ. ನನಗಾಗಿಯೇ ಮಾಡಿಕೊಂಡಿದ್ದೇನೆ’ ಎಂದುಕೊಳ್ಳುವ ದೊಡ್ಡ ಮೊಸಳೆ ನೀನು. ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಐಗುಪ್ತದ ಅರಸನಾದ ಫರೋಹನೇ, ನಿನ್ನ ನದೀ ಶಾಖೆಗಳ ನಡುವೆ ಒರಗಿಕೊಂಡು - ಈ ನದಿಯು ನನ್ನದೇ, ನನಗಾಗಿಯೇ ಮಾಡಿಕೊಂಡದು ಅಂದುಕೊಳ್ಳುವ ಪೇರ್ಮೊಸಳೆಯೇ, ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ‘ನನ್ನ ಒಡೆಯನಾದ ಯೆಹೋವನು ಹೀಗೆ ಹೇಳಿದ್ದಾನೆ ಎಂದು ಅವರಿಗೆ ತಿಳಿಸು, “‘ಈಜಿಪ್ಟಿನ ರಾಜನಾದ ಫರೋಹನೇ, ನಾನು ನಿನಗೆ ವಿರುದ್ಧವಾಗಿದ್ದೇನೆ. ನೀನು ನೈಲ್ ನದಿಯ ದಡದಲ್ಲಿ ಮಲಗಿರುವ ಪೇರ್ಮೊಸಳೆ, “ಇದು ನಾನು ನಿರ್ಮಿಸಿದ ಹೊಳೆ” ಎಂದು ನೀನು ಹೇಳಿಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನೀನು ಮಾತನಾಡಿ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಈಜಿಪ್ಟಿನ ಅರಸನಾದ ಫರೋಹನೇ, ತನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು ಈ ನೈಲ್ ನದಿ ನನ್ನದು, ನಾನೇ ಅದನ್ನು ನನಗೋಸ್ಕರ ಮಾಡಿಕೊಂಡಿದ್ದೇನೆಂದು ಹೇಳಿಕೊಂಡ ದೊಡ್ಡ ಘಟಸರ್ಪವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 29:3
25 ತಿಳಿವುಗಳ ಹೋಲಿಕೆ  

“ನರಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನ ವಿಷಯವಾಗಿ ಶೋಕ ಗೀತೆಯನ್ನು ಹಾಡಿ ಅವನಿಗೆ ಹೀಗೆ ನುಡಿ, ‘ನೀನು ಜನಾಂಗಗಳಲ್ಲಿ ಸಿಂಹದ ಮರಿಗೆ ಸಮನಾಗಿರುವೆ ಮತ್ತು ಸಮುದ್ರಗಳಲ್ಲಿರುವ ತಿಮಿಂಗಿಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇದಿಸಿಕೊಂಡು ಬಂದು, ನೀರನ್ನು ನಿನ್ನ ಕಾಲುಗಳಿಂದ ಕಲಕಿ, ಜನಾಂಗಗಳ ಹೊಳೆಗಳನ್ನೂ ತುಳಿದು ಬದಿಮಾಡಿದೆ.’”


ಆ ದಿನದಲ್ಲಿ ಯೆಹೋವನು ಕಠಿಣವೂ, ಮಹತ್ವವೂ, ಬಲವೂ ಆಗಿರುವ ತನ್ನ ಖಡ್ಗದಿಂದ ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನೂ, ಡೊಂಕಾಗಿ ಹರಿಯುವ ಸರ್ಪವಾದ ಲೆವಿಯಾತಾನವನ್ನೂ, ಮತ್ತು ಮಹಾನದಿಯಲ್ಲಿ ಘಟಸರ್ಪವನ್ನೂ ಕೊಂದುಹಾಕುವನು.


ಅದೇನೆಂದರೆ, ಇಗೋ ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಪ್ರಾಣ ಹುಡುಕುತ್ತಿದ್ದ ಶತ್ರುವಾದ ನೆಬೂಕದ್ನೆಚ್ಚರನೆಂಬ ಬಾಬೆಲಿನ ಅರಸನ ಕೈಗೆ ಕೊಟ್ಟಂತೆ ಐಗುಪ್ತದ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣ ಹುಡುಕುವ ಶತ್ರುಗಳ ಕೈಗೆ ಕೊಡುವೆನು; ಇದು ಯೆಹೋವನಾದ ನನ್ನ ನುಡಿ’” ಎಂಬುದೇ.


ಆತನ ಸಿಟ್ಟಿಗೆ ಯಾರು ಎದುರು ನಿಲ್ಲಲು ಸಾಧ್ಯ? ಆತನ ರೋಷಾಗ್ನಿಯ ಎದುರು ಯಾರು ನಿಂತಾರು? ಆತನ ರೌದ್ರವು ಜ್ವಾಲಾಪ್ರವಾಹದಂತೆ ಹರಿಯುತ್ತದೆ. ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ಚೀದೋನೇ, ನಾನು ನಿನ್ನ ವಿರುದ್ಧವಾಗಿ ನಿನ್ನ ಮಧ್ಯದಲ್ಲಿ ಪ್ರಖ್ಯಾತಿಗೊಳ್ಳುವೆನು; ನಾನು ಈ ಪಟ್ಟಣದಲ್ಲಿ ನ್ಯಾಯ ತೀರಿಸಿ, ನಾನು ಮಹಿಮೆಯನ್ನು ಹೊಂದುವಾಗ ನಾನೇ ಯೆಹೋವನು’ ಎಂದು ಎಲ್ಲರಿಗೂ ಗೊತ್ತಾಗುವುದು.


“ನರಪುತ್ರನೇ, ನೀನು ತೂರಿನ ಅರಸನಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನೇ ದೇವರು, ಸಮುದ್ರ ಮಧ್ಯದಲ್ಲಿ ದೇವರ ಸ್ಥಾನದಲ್ಲಿ ಕುಳಿತುಕೊಂಡಿರುವೆನು’ ಎಂದು ಹೇಳಿಕೊಂಡಿದ್ದೀ; ನೀನು ದೇವರಲ್ಲ, ಮನುಷ್ಯನೇ. ಆದರೂ ನಿನ್ನನ್ನು ನೀನೇ ದೇವರಿಗೆ ಸಮಾನನೆಂದು ಭಾವಿಸಿಕೊಂಡಿರುವಿ.


ನೀನು ಮಹಾಶಕ್ತಿಶಾಲಿ; ನೀನು ಸಿಟ್ಟುಗೊಂಡಾಗ ನಿನ್ನ ಮುಂದೆ ಯಾರು ನಿಂತಾರು?


ನಿಮ್ಮ ಮನಸ್ಸಿನೊಳಗೆ, “ಈ ಭಾಗ್ಯವು ನಮ್ಮ ಸಾಮರ್ಥ್ಯ ಮತ್ತು ಸಾಹಸಗಳಿಂದಲೇ ನಮಗುಂಟಾಯಿತು” ಎಂದು ಅಂದುಕೊಂಡೀರಿ.


ಅವನು ಪಿಶಾಚಿಯೂ ಸೈತಾನನೂ ಆಗಿರುವ ಪುರಾತನ ಸರ್ಪವೆಂಬ ಘಟಸರ್ಪವನ್ನು ಹಿಡಿದು ಸಾವಿರ ವರ್ಷ ಬಂಧನದಲ್ಲಿಟ್ಟನು.


ಆಗ ಘಟಸರ್ಪದ ಬಾಯಿಂದ, ಮೃಗದ ಬಾಯಿಂದ ಮತ್ತು ಸುಳ್ಳುಪ್ರವಾದಿಯ ಬಾಯಿಂದ ಕಪ್ಪೆಗಳಂತಿದ್ದ ಮೂರು ಅಶುದ್ಧಾತ್ಮಗಳು ಬರುವುದನ್ನು ಕಂಡೆನು.


ಮತ್ತೊಂದು ಮೃಗವು ಭೂಮಿಯೊಳಗಿಂದ ಬರುವುದನ್ನು ಕಂಡೆನು. ಇದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು, ಅದು ಘಟಸರ್ಪದಂತೆ ಮಾತನಾಡಿತು.


ಘಟಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವನಾದ್ದರಿಂದ ಅವರು ಆ ಘಟಸರ್ಪನಿಗೆ ಆರಾಧನೆ ಮಾಡಿದರು. ಇದಲ್ಲದೆ ಆ ಮೃಗಕ್ಕೂ ಆರಾಧನೆ ಮಾಡಿ, “ಈ ಮೃಗಕ್ಕೆ ಸಮಾನರು ಯಾರು? ಇದರ ವಿರುದ್ಧ ಯುದ್ಧ ಮಾಡುವುದಕ್ಕೆ ಯಾರು ಶಕ್ತರು?” ಎಂದರು.


ನಾನು ಕಂಡ ಮೃಗವು ಚಿರತೆಯಂತಿತ್ತು ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಿಯಂತೆಯೂ ಇದ್ದವು. ಅದಕ್ಕೆ ಘಟಸರ್ಪನು ಶಕ್ತಿಯನ್ನೂ, ಸಿಂಹಾಸನವನ್ನೂ, ಮಹಾ ಅಧಿಕಾರವನ್ನೂ ಕೊಟ್ಟನು.


ಯೆಹೋವನ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಂಡು, ಬಲವನ್ನು ತಂದುಕೋ! ಪೂರ್ವಕಾಲದಲ್ಲಿ, ತಲಾಂತರಗಳಲ್ಲಿ, ಎಚ್ಚರಗೊಂಡಂತೆ ಈಗಲೂ ಎಚ್ಚೆತ್ತುಕೋ, ರಹಬನ್ನು ಛೇದಿಸಿ ಘಟಸರ್ಪವನ್ನು ತಿವಿದುಬಿಟ್ಟವನು ನೀನಲ್ಲವೋ?


ಆಪಿನೊಳಗೆ ವಾಸಿಸುವ ನೀರಾನೆ, ಕರುಗಳ ಸಹಿತವಾದ ಹೋರಿಗಳ ಗುಂಪು, ಇವುಗಳಂತಿರುವ ಶತ್ರುಜನಾಂಗಗಳನ್ನು ಬೆದರಿಸು. ಅವು ಬೆಳ್ಳಿಗಟ್ಟಿಗಳನ್ನು ತಂದು ನಿನಗೆ ಅಡ್ಡಬೀಳಲಿ. ಯುದ್ಧಾಸಕ್ತ ಜನಾಂಗಗಳನ್ನು ಚದುರಿಸಿಬಿಡು.


ನಾನು ನದಿಗಳನ್ನು ಒಣಗಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು. ಹೌದು, ದೇಶವನ್ನೂ, ಅದರಲ್ಲಿನ ಸಮಸ್ತವನ್ನೂ ಅನ್ಯರ ಕೈಯಿಂದ ಹಾಳುಮಾಡಿಸುವೆನು. ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.”


ಆದುದರಿಂದ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಐಗುಪ್ತದ ಅರಸನಾದ ಫರೋಹನಿಗೆ ವಿರುದ್ಧವಾಗಿ ಅವನ ಕೈಗಳನ್ನು, ಅಂದರೆ ಸರಿಯಾಗಿರುವುದನ್ನೂ, ಮುರಿದದ್ದನ್ನೂ ತೀರಾ ಮುರಿದು ಬಿಟ್ಟು, ಖಡ್ಗವು ಅವನ ಕೈಯೊಳಗಿಂದ ಬೀಳುವಂತೆ ಮಾಡುವೆನು.


ಆದಕಾರಣ, ಅರಸನೇ, ಈ ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ, ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು” ಎಂದು ಅರಿಕೆ ಮಾಡಿದನು.


ನೀವು ಲೋ ದೆಬಾರ್ ಪಟ್ಟಣದಲ್ಲಿ ಉಲ್ಲಾಸಪಡುವವರೇ, ಸ್ವಬಲದಿಂದ ಕರ್ನಾಯಿಮ್ ಪಟ್ಟಣವನ್ನು ಪಡೆದುಕೊಂಡಿಲ್ಲವೇ ಎಂದುಕೊಳ್ಳುವವರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು