Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 29:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ನಾನು ನಿನ್ನ ದವಡೆಗಳಿಗೆ ಗಾಳ ಹಾಕಿ, ನಿನ್ನ ನದಿಗಳ ಮೀನುಗಳನ್ನು ನಿನ್ನ ಬೆನ್ನು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡಿ, ಆ ಮೀನುಗಳ ಸಹಿತ ನಿನ್ನನ್ನು ನೈಲ್ ನದಿಯ ಮಧ್ಯದೊಳಗಿಂದ ಹೊರಗೆ ಎಳೆದು ಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಾನು ನಿನ್ನ ದವಡೆಗಳಿಗೆ ಗಾಳಹಾಕುವೆನು; ನಿನ್ನ ನದಿಯ ಮೀನುಗಳು ನಿನ್ನ ಬೆನ್ನು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡುವೆನು. ಅಂಟಿಕೊಂಡಿರುವ ಆ ಮೀನುಗಳ ಸಹಿತ ನಿನ್ನನ್ನು ನಿನ್ನ ನದಿಯ ಮಧ್ಯೆಯಿಂದ ಈಚೆಗೆ ಎಳೆಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನು ನಿನ್ನ ದವಡೆಗಳಿಗೆ ಗಾಳಹಾಕಿ ನಿನ್ನ ನದಿಯ ಮೀನುಗಳು ನಿನ್ನ ಬೆನ್ನುಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡಿ ಅಂಟಿಕೊಂಡಿರುವ ಆ ಮೀನುಗಳ ಸಹಿತ ನಿನ್ನನ್ನು ನಿನ್ನ ನದಿಯ ಮಧ್ಯದೊಳಗಿಂದ ಈಚೆಗೆ ಎಳೆದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “‘ಆದರೆ ನಾನು ನಿನ್ನ ದವಡೆಗಳಿಗೆ ಕೊಂಡಿಗಳನ್ನು ಸಿಕ್ಕಿಸುವೆನು. ನೈಲ್ ನದಿಯ ಮೀನುಗಳು ನಿನ್ನ ಪೊರೆಗಳಿಗೆ ಸಿಲುಕಿಕೊಳ್ಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ನಿನ್ನ ದವಡೆಗಳಲ್ಲಿ ಗಾಳಗಳನ್ನು ಹಾಕಿ, ನಿನ್ನ ನದಿಗಳ ಮೀನುಗಳನ್ನು ನಿನ್ನ ಬೆನ್ನು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡಿ ನಿನ್ನನ್ನು ನಿನ್ನ ನದಿಯೊಳಗಿಂದ ಮೇಲೆ ಎಳೆದು ನಿನ್ನ ಮೀನುಗಳು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 29:4
7 ತಿಳಿವುಗಳ ಹೋಲಿಕೆ  

ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ, ನಿನ್ನ ದವಡೆಗಳಲ್ಲಿ ಕೊಕ್ಕೆಗಳನ್ನು ಹಾಕಿ, ನಿನ್ನ ಎಲ್ಲಾ ಸೈನ್ಯವನ್ನೂ, ಕುದರೆಗಳನ್ನೂ ಮತ್ತು ಕುದರೆ ಸವಾರರನ್ನೂ ಮುಂದೆ ತರುವೆನು. ಇವರೆಲ್ಲರೂ ನಾನಾ ತರವಾದ ಆಯುಧಗಳನ್ನು ತೊಟ್ಟಿರುವರು, ಇವರೊಂದಿಗೆ ಖೇಡ್ಯ ಮತ್ತು ಗುರಾಣಿಗಳುಳ್ಳ ಮಹಾಸಮೂಹವನ್ನು ತರುವೆನು. ಇವರೆಲ್ಲರೂ ಖಡ್ಗವನ್ನು ಹಿಡಿದಿರುವರು.


ನೀನು ನನಗೆ ವಿರುದ್ಧವಾಗಿ ಉಬ್ಬಿಕೊಂಡಿರುವುದೂ, ಕೋಪವುಳ್ಳವನಾಗಿರುವುದೂ ನನಗೆ ತಿಳಿದು ಬಂದಿದೆ. ಆದುದರಿಂದ ನಿನ್ನ ಮೂಗಿಗೂ, ನಿನ್ನ ಬಾಯಿಗೂ ಕಡಿವಾಣವನ್ನೂ ಹಾಕಿ, ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು” ಎಂಬುದಾಗಿ ಹೇಳಿದ್ದಾನೆ.


ಕರ್ತನಾದ ಯೆಹೋವನು ತನ್ನ ಪರಿಶುದ್ಧತ್ವದ ಮೇಲೆ ಆಣೆಯಿಟ್ಟು: “ಇಗೋ ನಿಮ್ಮನ್ನು ಕೊಂಡಿಗಳಿಂದಲೂ, ನಿಮ್ಮಲ್ಲಿ ಉಳಿದವರನ್ನು ಮೀನುಗಾಳಗಳಿಂದಲೂ, ಎಳೆದುಕೊಂಡು ಹೋಗುವ ದಿನಗಳು ನಿಮಗೆ ಬರುತ್ತವೆ ಎಂದು ಪ್ರಮಾಣ ಮಾಡಿದ್ದಾನೆ.


ಏಕೆಂದರೆ ನೀನು ನನ್ನ ವಿರುದ್ಧ ಕೋಪಗೊಂಡಿರುವುದೂ, ಅಸಮಾಧಾನವಾಗಿರುವುದೂ ನನಗೆ ತಿಳಿದುಬಂತು. ಆದುದರಿಂದ ನಿನಗೆ ಮೂಗುದಾರವನ್ನೂ, ಕಡಿವಾಣವನ್ನೂ ಹಾಕಿ ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು” ಎಂಬುದಾಗಿ ಹೇಳಿದ್ದಾನೆ.


ಆ ದಿನದಲ್ಲಿ ಯೆಹೋವನಿಂದ ಹತರಾದವರು ಲೋಕದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೂ ಬಿದ್ದಿರುವರು; ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಅವರನ್ನು ಯಾರೂ ಒಟ್ಟುಗೂಡಿಸುವುದಿಲ್ಲ, ಯಾರು ಹೂಣಿಡುವುದಿಲ್ಲ, ಅವರು ಭೂಮಿಯ ಮೇಲೆ ಗೊಬ್ಬರವಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು