Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 29:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿನ್ನನ್ನೂ, ನಿನ್ನ ನದಿಯ ಎಲ್ಲಾ ಮೀನುಗಳನ್ನೂ ಅರಣ್ಯದ ಪಾಲು ಮಾಡುವೆನು; ನೀನು ಬಯಲುಗಳ ಮೇಲೆ ಬಿದ್ದಿರುವಿ; ನಿನ್ನನ್ನು ಯಾರೂ ಹೂಣಿಡುವುದೂ ಇಲ್ಲ, ಸೇರಿಸುವುದೂ ಇಲ್ಲ; ನಾನು ನಿನ್ನನ್ನು ಭೂಜಂತುಗಳಿಗೂ, ಆಕಾಶದ ಪಕ್ಷಿಗಳಿಗೂ ಆಹಾರ ಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿನ್ನನ್ನೂ ನಿನ್ನ ಎಲ್ಲ ಮೀನುಗಳನ್ನೂ ಕಾಡುಪಾಲು ಮಾಡುವೆನು; ನೀನು ಬಯಲಿನಲ್ಲಿ ಬಿದ್ದಿರುವೆ; ನಿನ್ನನ್ನು ಯಾರೂ ಹೊರರು, ಹೂಣಿಡರು; ನಿನ್ನನ್ನು ಭೂಜಂತುಗಳಿಗೂ ಆಕಾಶದ ಪಕ್ಷಿಗಳಿಗೂ ಆಹಾರ ಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿನ್ನನ್ನೂ ನಿನ್ನ ನದಿಯ ಎಲ್ಲಾ ಮೀನುಗಳನ್ನೂ ಕಾಡಿನ ಪಾಲುಮಾಡುವೆನು; ನೀನು ಬೈಲಿನಲ್ಲಿ ಬಿದ್ದಿರುವಿ; ನಿನ್ನನ್ನು ಯಾರೂ ಹೊರರು, ಹೂಣಿಡರು; ನಾನು ನಿನ್ನನ್ನು ಭೂಜಂತುಗಳಿಗೂ ಆಕಾಶಪಕ್ಷಿಗಳಿಗೂ ಆಹಾರ ಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಾನು ನಿನ್ನನ್ನೂ ನಿನ್ನ ಮೀನುಗಳನ್ನೂ ನೀರಿನೊಳಗಿಂದ ಹೊರಕ್ಕೆತ್ತಿ ಒಣನೆಲದ ಮೇಲೆ ಹಾಕುವೆನು. ನೀನು ನೆಲದ ಮೇಲೆ ಬೀಳುವೆ. ಯಾರೂ ನಿನ್ನನ್ನು ಮೇಲಕ್ಕೆ ಎತ್ತುವುದೂ ಇಲ್ಲ ಹೂಣಿಡುವುದೂ ಇಲ್ಲ. ನಾನು ನಿನ್ನನ್ನು ಕಾಡುಪ್ರಾಣಿಗಳಿಗೂ ಪಕ್ಷಿಗಳಿಗೂ ಕೊಡುವೆನು. ಅವರಿಗೆ ನೀನು ಆಹಾರವಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿನ್ನನ್ನೂ ನಿನ್ನ ನದಿಗಳ ಮೀನುಗಳನ್ನೂ ಅರಣ್ಯದಲ್ಲಿ ಹಾಕುವೆನು. ನೀನು ಬಯಲುಗಳ ಮೇಲೆ ಬಿದ್ದಿರುವೆ; ನಿನ್ನನ್ನು ಯಾರೂ ಹೊರುವುದೂ ಇಲ್ಲ, ಸೇರಿಸುವುದೂ ಇಲ್ಲ. ನಿನ್ನನ್ನೂ ನಿನ್ನ ನದಿಯ ಎಲ್ಲಾ ಮೀನುಗಳನ್ನೂ ಕಾಡಿನ ಪಾಲುಮಾಡುವೆನು. ಭೂಮಿಯ ಮೇಲಿರುವ ಮೃಗಗಳಿಗೂ ಆಕಾಶದ ಪಕ್ಷಿಗಳಿಗೂ ನಿನ್ನನ್ನು ಆಹಾರವನ್ನಾಗಿ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 29:5
15 ತಿಳಿವುಗಳ ಹೋಲಿಕೆ  

ಕರುವಿನ ಹೋಳುಗಳ ನಡುವೆ ಹಾದುಹೋದ ದೇಶದ ಸಕಲ ಜನರು, ಇವರೆಲ್ಲರನ್ನೂ ಇವರ ಪ್ರಾಣವನ್ನು ಹುಡುಕುವ ಶತ್ರುಗಳ ಕೈಗೆ ಕೊಡುವೆನು; ಇವರ ಹೆಣಗಳು ಆಕಾಶ ಪಕ್ಷಿಗಳಿಗೂ, ಭೂಜಂತುಗಳಿಗೂ ಆಹಾರವಾಗುವವು.


ಅನಂತರ ಅವರು ಅದನ್ನು ತಾವು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ ಪೂಜಿಸಿದ ಸೂರ್ಯ, ಚಂದ್ರ ತಾರಾಗಣಗಳ ಎದುರಿಗೆ ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಹೂಣಿಡುವುದಿಲ್ಲ; ಅವು ಭೂಮಿಯ ಮೇಲೆ ಗೊಬ್ಬರವಾಗುವವು.


ಈ ಜನರ ಹೆಣಗಳು ಆಕಾಶದ ಪಕ್ಷಿಗಳಿಗೂ ಹಾಗು ಭೂಜಂತುಗಳಿಗೂ ಆಹಾರವಾಗುವವು; ಅವುಗಳನ್ನು ಬೆದರಿಸುವವರು ಯಾರೂ ಇರುವುದಿಲ್ಲ.


ಆ ದಿನದಲ್ಲಿ ಯೆಹೋವನಿಂದ ಹತರಾದವರು ಲೋಕದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೂ ಬಿದ್ದಿರುವರು; ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಅವರನ್ನು ಯಾರೂ ಒಟ್ಟುಗೂಡಿಸುವುದಿಲ್ಲ, ಯಾರು ಹೂಣಿಡುವುದಿಲ್ಲ, ಅವರು ಭೂಮಿಯ ಮೇಲೆ ಗೊಬ್ಬರವಾಗುವರು.


“ಇಂಥಾ ವೈಭವದಿಂದಲೂ, ಮಹಿಮೆಯಿಂದಲೂ ಕೂಡಿದ ನೀನು ಏದೆನಿನ ವೃಕ್ಷಗಳಲ್ಲಿ ಯಾವುದಕ್ಕಿಂತ ಕಡಿಮೆಯಾಗಿರುವೆ? ಆದರೂ ನೀನು ಏದೆನಿನ ವೃಕ್ಷಗಳೊಂದಿಗೆ ಅಧೋಲೋಕಕ್ಕೆ ತಳ್ಳಲ್ಪಟ್ಟು, ಸುನ್ನತಿಹೀನರ ನಡುವೆ ಖಡ್ಗದಿಂದ ಹತರಾದವರ ಸಂಗಡ ಮಲಗುವಿ. ಫರೋಹನೂ, ಅವನ ಎಲ್ಲಾ ಪ್ರಜೆಗಳೂ ಇದೇ ಗತಿಯನ್ನು ಹೊಂದುವರು ಎಂಬುದು ಕರ್ತನಾದ ಯೆಹೋವನ ನುಡಿ.”


ಅವರು ಘೋರವಾದ ಮರಣಕ್ಕೆ ಗುರಿಯಾಗುವರು, ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಅವರನ್ನು ಯಾರೂ ಹೂಣಿಡುವುದಿಲ್ಲ; ಅವರು ಭೂಮಿಯ ಮೇಲೆ ಗೊಬ್ಬರವಾಗುವರು. ಖಡ್ಗವೂ, ಕ್ಷಾಮವೂ ಅವರನ್ನು ನಿರ್ಮೂಲ ಮಾಡುವವು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಮತ್ತು ಭೂಜಂತುಗಳಿಗೂ ಆಹಾರವಾಗುವವು” ಎಂಬುದೇ.


ಲಿವ್ಯಾತಾನನ ಶಿರಚ್ಛೇದನೆಮಾಡಿ, ಅಡವಿಯ ಮೃಗಸಮುದಾಯಕ್ಕೆ ಆಹಾರ ಕೊಟ್ಟವನು ನೀನು.


“ಇಲ್ಲಿ ಬಾ, ನಿನ್ನ ಮಾಂಸವನ್ನು ಮೃಗ ಪಕ್ಷಿಗಳಿಗೆ ಹಂಚಿಕೊಡುತ್ತೇನೆ” ಅಂದನು.


ಆಗ ನಾನು ನೋಡಲು ಇಗೋ, ನಸು ಹಸಿರು ಬಣ್ಣದ ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಹೆಸರು ಮೃತ್ಯು ಎಂದು. ಮೃತ್ಯುಲೋಕ ಅವನನ್ನು ಹಿಂಬಾಲಿಸುತ್ತಿತ್ತು. ಅವನಿಗೆ ಭೂಮಿಯ ನಾಲ್ಕನೇ ಒಂದು ಭಾಗವನ್ನು ಕತ್ತಿಯಿಂದಲೂ, ಕ್ಷಾಮದಿಂದಲೂ, ಅಂಟುರೋಗದಿಂದಲೂ, ಭೂಮಿಯ ಕಾಡುಮೃಗಗಳಿಂದಲೂ ಕೊಂದುಹಾಕುವುದಕ್ಕೆ ಅಧಿಕಾರ ಕೊಡಲಾಗಿತ್ತು.


ಅದರ ಬುಡದ ಮೇಲೆ ಎಲ್ಲಾ ಆಕಾಶದ ಪಕ್ಷಿಗಳು ಕುಳಿತುಕೊಳ್ಳುವವು; ಅದರ ಕೊಂಬೆಗಳಲ್ಲಿ ಸಮಸ್ತ ಭೂಜಂತುಗಳು ಇರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು