Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 29:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಈ ನದಿಯು ನನ್ನದೇ, ನಾನೇ ಅದನ್ನು ನಿರ್ಮಿಸಿದವನೆಂದು ಅಂದುಕೊಂಡ ಕಾರಣ ಐಗುಪ್ತ ದೇಶವು ಹಾಳಾಗುವುದು. ಆಗ ನಾನೇ ಯೆಹೋವನು’ ಎಂದು ಅವರಿಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಫರೋಹನು, - ‘ಈ ನದಿ ನನ್ನದೇ, ನಾನೇ ಮಾಡಿಕೊಂಡೆ’ ಎಂದುಕೊಂಡನು. ಈ ಕಾರಣ ಈಜಿಪ್ಟ್ ದೇಶ ಹಾಳುಪಾಳಾಗುವುದು; ಆಗ ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಫರೋಹನು - ಈ ನದಿಯು ನನ್ನದೇ, ನಾನೇ ಮಾಡಿಕೊಂಡದು ಅಂದುಕೊಂಡ ಕಾರಣ ಐಗುಪ್ತದೇಶವು ಹಾಳುಪಾಳಾಗುವದು; ಆಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಈಜಿಪ್ಟ್ ನಿಶ್ಯೇಷವಾಗಿ ನಾಶವಾಗುವದು. ಆಗ ಅವರು ನಾನೇ ದೇವರಾದ ಯೆಹೋವನು ಎಂದು ತಿಳಿದುಕೊಳ್ಳುವರು.” ದೇವರು ಹೀಗೆಂದನು, “ನಾನು ಯಾಕೆ ಹೀಗೆ ಮಾಡುತ್ತಿದ್ದೇನೆ. ಯಾಕೆಂದರೆ ನೀನು, ‘ಇದು ನನ್ನ ನದಿ, ಇದನ್ನು ನಾನು ಮಾಡಿದೆನು’ ಎಂದು ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನೀನು, “ಆ ನೈಲ್ ನದಿಯು ನನ್ನದೇ, ನಾನೇ ಅದನ್ನು ನಿರ್ಮಿಸಿದವನೆಂದು,” ಹೇಳಿಕೊಂಡದ್ದರಿಂದ, “ ‘ಈಜಿಪ್ಟ್ ದೇಶವು ಹಾಳು ಮರುಭೂಮಿಯಾಗುವುದು. ಆಗ ನಾನೇ ಯೆಹೋವ ದೇವರೆಂದು ಅವರು ತಿಳಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 29:9
12 ತಿಳಿವುಗಳ ಹೋಲಿಕೆ  

“ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಐಗುಪ್ತದ ಅರಸನಾದ ಫರೋಹನೇ, ನಿನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು, ‘ಈ ನದಿ ನನ್ನದೇ, ನನಗಾಗಿಯೇ ಅದನ್ನು ಮಾಡಿಕೊಂಡಿದ್ದೇನೆ’ ಎಂದು ಹೇಳಿಕೊಳ್ಳುವ ದೊಡ್ಡ ಮೊಸಳೆಯೇ, ಇಗೋ, ನಾನು ನಿನ್ನ ವಿರುದ್ಧವಾಗಿದ್ದೇನೆ.


ಭಂಗಕ್ಕೆ ಮೊದಲು ಗರ್ವದ ಹೃದಯ, ಮಾನಕ್ಕೆ ಮುಂಚೆ ದೀನತೆ.


ಗರ್ವದಿಂದ ಭಂಗ, ಉಬ್ಬಿನಿಂದ ದೊಬ್ಬು.


ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ತರುವುದು, ದೀನಮನಸ್ಸುಳ್ಳವನು ಮಾನವನ್ನು ಪಡೆಯುವನು.


ನಾನು ನದಿಗಳನ್ನು ಒಣಗಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು. ಹೌದು, ದೇಶವನ್ನೂ, ಅದರಲ್ಲಿನ ಸಮಸ್ತವನ್ನೂ ಅನ್ಯರ ಕೈಯಿಂದ ಹಾಳುಮಾಡಿಸುವೆನು. ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.”


“ನರಪುತ್ರನೇ, ನೀನು ತೂರಿನ ಅರಸನಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನೇ ದೇವರು, ಸಮುದ್ರ ಮಧ್ಯದಲ್ಲಿ ದೇವರ ಸ್ಥಾನದಲ್ಲಿ ಕುಳಿತುಕೊಂಡಿರುವೆನು’ ಎಂದು ಹೇಳಿಕೊಂಡಿದ್ದೀ; ನೀನು ದೇವರಲ್ಲ, ಮನುಷ್ಯನೇ. ಆದರೂ ನಿನ್ನನ್ನು ನೀನೇ ದೇವರಿಗೆ ಸಮಾನನೆಂದು ಭಾವಿಸಿಕೊಂಡಿರುವಿ.


ಆದಕಾರಣ, ಅರಸನೇ, ಈ ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ, ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು” ಎಂದು ಅರಿಕೆ ಮಾಡಿದನು.


ನೀವು ಲೋ ದೆಬಾರ್ ಪಟ್ಟಣದಲ್ಲಿ ಉಲ್ಲಾಸಪಡುವವರೇ, ಸ್ವಬಲದಿಂದ ಕರ್ನಾಯಿಮ್ ಪಟ್ಟಣವನ್ನು ಪಡೆದುಕೊಂಡಿಲ್ಲವೇ ಎಂದುಕೊಳ್ಳುವವರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು