Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 3:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಮೇಲೆ ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಗಲಾಗಿ, “ಮಹಿಮೆಯುಳ್ಳ ಯೆಹೋವನಿಗೆ ಆತನ ವಾಸಸ್ಥಾನದಲ್ಲಿ ಸ್ತೋತ್ರವಾಗಲಿ” ಎಂಬ ಮಹಾಶಬ್ದವು ನನ್ನ ಹಿಂದೆ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆಮೇಲೆ ದೇವರಾತ್ಮ ನನ್ನನ್ನು ಎತ್ತಿಕೊಂಡುಹೋಯಿತು. “ಮಹಿಮಾಭರಿತ ಸರ್ವೇಶ್ವರ ಸ್ವಾಮಿಗೆ ಆತನಾಲಯದಲ್ಲಿ ಸ್ತೋತ್ರ; ಸ್ತೋತ್ರ;” ಎಂಬ ಮಹಾಶಬ್ದ ನನ್ನ ಹಿಂದೆ ಭರಭರನೆ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆಮೇಲೆ ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಗಲಾಗಿ ಮಹಿಮೆಯಿಂದ ಕೂಡಿದ ಯೆಹೋವನಿಗೆ ಆತನ ವಾಸಸ್ಥಾನದಲ್ಲಿ ಸ್ತೋತ್ರವಾಗಲಿ ಎಂಬ ಮಹಾಶಬ್ದವು ನನ್ನ ಹಿಂದೆ ಭರಭರನೆ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಗ ದೇವರಾತ್ಮವು ನನ್ನನ್ನು ಮೇಲಕ್ಕೆ ಎತ್ತಿತು. ಯೆಹೋವನ ಮಹಿಮೆಯು ತನ್ನ ಸ್ಥಳದಿಂದ ಮೇಲೇರಿದಾಗ ನನ್ನ ಹಿಂಭಾಗದಲ್ಲಿ ಮಹಾ ಗುಡುಗುವ ಶಬ್ದವನ್ನು ಕೇಳಿದೆನು. ಅದು ಯೆಹೋವನಿಗೆ ಆತನ ನಿವಾಸದಲ್ಲಿ ಸ್ತೋತ್ರವಾಗಲಿ ಎಂಬ ವಾಣಿಯೊಂದಿಗೆ ಕೇಳಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಮೇಲೆ ದೇವರಾತ್ಮರು ನನ್ನನ್ನು ಎತ್ತಿಕೊಂಡು ಹೋದರು. ಮಹಿಮೆಯಿಂದ ಕೂಡಿದ ಯೆಹೋವ ದೇವರ ಮಹಿಮೆಯು ಅವರ ವಾಸಸ್ಥಾನದಲ್ಲಿ ಸ್ತೋತ್ರವಾಗಲಿ ಎಂಬ ಮಹಾಶಬ್ದವು ನನ್ನ ಹಿಂದೆ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 3:12
27 ತಿಳಿವುಗಳ ಹೋಲಿಕೆ  

ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮ ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಆ ಕಂಚುಕಿಯು ಫಿಲಿಪ್ಪನನ್ನು ಪುನಃ ಕಾಣಲಿಲ್ಲ. ಅವನು ಸಂತೋಷವುಳ್ಳವನಾಗಿ ತನ್ನ ಪ್ರಯಾಣವನ್ನು ಮುಂದುವರಿಸಿದನು.


ಆಗ ಆ ತೇಜೋರೂಪಿಯು ಮನುಷ್ಯ ಹಸ್ತದಂಥ ಹಸ್ತವನ್ನು ಚಾಚಿ ನನ್ನ ತಲೆಯ ಕೂದಲಿನಿಂದ ಹಿಡಿಯಲು ದೇವರಾತ್ಮವು ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಯೆರೂಸಲೇಮಿನವರೆಗೆ ಒಯ್ದು, ಒಳಗಣ ಪ್ರಾಕಾರದ ಉತ್ತರ ಬಾಗಿಲ ಮುಂದೆ, ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ಆ ದೇವದರ್ಶನದಲ್ಲಿ ನನಗೆ ಕಂಡು ಬಂದಿತು.


ಆ ಮೇಲೆ ದೇವರಾತ್ಮವು ನನ್ನನ್ನು ಎತ್ತಿ ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಯೆಹೋವನ ಆಲಯದ ಮೂಡಣ ಬಾಗಿಲಿಗೆ ತಂದುಬಿಟ್ಟಿತು; ಇಗೋ, ಬಾಗಿಲ ಮುಂದೆ ಇಪ್ಪತ್ತೈದು ಜನರು ನಿಂತಿದ್ದರು; ಅವರ ಮಧ್ಯದಲ್ಲಿ ಅಜ್ಜೂರನ ಮಗನಾದ ಯಾಜನ್ಯ, ಬೆನಾಯನ ಮಗನಾದ ಪೆಲತ್ಯ ಎಂಬ ಜನನಾಯಕರನ್ನು ನಾನು ನೋಡಿದೆ.


ಆಗ ಬಿರುಗಾಳಿ ಬೀಸುತ್ತಿದೆಯೋ ಎಂಬಂತೆ ಫಕ್ಕನೆ ಆಕಾಶದೊಳಗಿಂದ ಒಂದು ಶಬ್ದವುಂಟಾಗಿ ಅವರು ಕುಳಿತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.


ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಯಿತು. ನಾನು ಚಿಂತೆಯಿಂದ ಮನಸ್ತಾಪಪಡುತ್ತಾ ಹೋದೆನು. ಆದರೆ ಯೆಹೋವನ ಕೈ ನನ್ನ ಮೇಲೆ ಬಲವಾಗಿತ್ತು.


ತರುವಾಯ ಬಹುದೊಡ್ಡ ಜನರ ಸಮೂಹದ ಶಬ್ದವು ಜಲಪ್ರವಾಹದ ಘೋಷದಂತೆಯೂ ಭಯಂಕರವಾದ ಗುಡುಗಿನ ಶಬ್ದದಂತೆಯೂ ಇದ್ದ ಒಂದು ಸ್ವರವನ್ನು ಕೇಳಿದೆನು. ಅದು, “ಹಲ್ಲೆಲೂಯಾ, ಸರ್ವಶಕ್ತನಾಗಿರುವ ನಮ್ಮ ದೇವರಾದ ಕರ್ತನು ಆಳುತ್ತಾನೆ.


ಆತನ ಪಾದಗಳು ಕುಲುಮೆಯಲ್ಲಿ ಕಾಯಿಸಿದ ತಾಮ್ರದಂತೆಯೂ, ಆತನ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು.


ನಾನು ಕರ್ತನ ದಿನದಲ್ಲಿ ದೇವರಾತ್ಮವಶನಾಗಿರಲು, ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುತ್ತೂರಿಯ ನಾದದಂತಿತ್ತು.


ಇದಲ್ಲದೆ ಯೆಹೋವನ ತೇಜಸ್ಸು ಕೆರೂಬಿಗಳನ್ನು ಬಿಟ್ಟು ಮೇಲಕ್ಕೇರಿ ದೇವಾಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತು; ದೇವಾಲಯದಲ್ಲಿಯೂ ಮೇಘವು ತುಂಬಿತ್ತು; ಯೆಹೋವನ ತೇಜಸ್ಸಿನ ಅದ್ಭುತಕಾಂತಿಯು ಅಂಗಳದಲ್ಲೆಲ್ಲಾ ವ್ಯಾಪಿಸಿತ್ತು.


ಇಷ್ಟರಲ್ಲಿ ಇಸ್ರಾಯೇಲಿನ ದೇವರ ತೇಜಸ್ಸು ತನ್ನ ವಾಹನವಾದ ಕೆರೂಬಿಯನ್ನು ಬಿಟ್ಟು ಮೇಲಕ್ಕೇರಿ ಆಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತ್ತು; ಆಗ ನಾರಿನ ಬಟ್ಟೆಯನ್ನು ಹೊದ್ದುಕೊಂಡು, ಲೇಖಕನ ಮಸಿಕೊಂಬನ್ನು ನಡುವಿಗೆ ಕಟ್ಟಿಕೊಂಡಿರುವ ಪುರುಷನನ್ನು ಕಂಡನು.


ಆತನು ಈ ಮಾತನ್ನು ಹೇಳುವಾಗ ದೇವರಾತ್ಮವು ನನ್ನೊಳಗೆ ಪ್ರವೇಶಿಸಿ, ನಾನು ಎದ್ದು ನಿಂತುಕೊಳ್ಳುವಂತೆ ಮಾಡಿತು; ಆಗ ನನ್ನೊಡನೆ ಮಾತನಾಡಿದಾತನ ನುಡಿಯನ್ನು ಕೇಳಿದೆನು.


ಆಗ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ” ಎಂದು ಕೂಗಿ ಹೇಳಿದನು.


ಆತನ ಎಲ್ಲಾ ದೂತರೇ, ಆತನನ್ನು ಸ್ತುತಿಸಿರಿ, ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ.


ಅನಂತರ ಅವರು ಅವನಿಗೆ, “ನಿನ್ನ ಸೇವಕರಾದ ನಮ್ಮಲ್ಲಿ ಐವತ್ತು ಮಂದಿ ಬಲಿಷ್ಠಜನರಿದ್ದಾರೆ. ನಿನ್ನ ಯಜಮಾನನ್ನು ಹುಡುಕುವುದಕ್ಕೆ ಅವರಿಗೆ ಅಪ್ಪಣೆಯಾಗಲಿ ಯೆಹೋವನ ಆತ್ಮವು ಅವನನ್ನು ಎತ್ತಿಕೊಂಡು ಹೋಗಿ ಒಂದು ಬೆಟ್ಟದ ಮೇಲಾಗಲಿ ತಗ್ಗಿನಲ್ಲಾಗಲಿ ಇಟ್ಟಿರಬಹುದು” ಎಂದು ಹೇಳಿದರು. ಅವನು ಅವರಿಗೆ, “ನೀವು ಅವರನ್ನು ಕಳುಹಿಸಬೇಡಿರಿ” ಎಂದನು.


ನಾನು ನಿನ್ನನ್ನು ಬಿಟ್ಟು ಹೊರಟ ಕೂಡಲೆ ಯೆಹೋವನ ಆತ್ಮವು ನಿನ್ನನ್ನು ನನಗೆ ಗೊತ್ತಿಲ್ಲದ ಬೇರೊಂದು ಸ್ಥಳಕ್ಕೆ ಒಯ್ಯುವುದು. ನಾನು ಹೋಗಿ ಅಹಾಬನಿಗೆ ಹೇಳುವಷ್ಟರಲ್ಲಿ ನೀನು ಅವನಿಗೆ ಸಿಕ್ಕದೆ ಹೋದರೆ ಅವನು ನನ್ನನ್ನು ಕೊಂದು ಹಾಕುವನು. ನಾನು ಬಾಲ್ಯಾರಭ್ಯ ಯೆಹೋವನಲ್ಲಿ ಭಯಭಕ್ತಿಯುಳ್ಳವನಲ್ಲವೇ?


ಸೆರೆಯಾಗಿರುವ ನಿನ್ನ ಸ್ವಂತ ಜನರ ಬಳಿಗೆ ಹೋಗಿ ಅವರು ಕೇಳಿದರೂ, ಕೇಳದೆ ಹೋದರೂ ಅವರನ್ನು ಉದ್ದೇಶಿಸಿ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ಅವರಿಗೆ ಸಾರು.”


ಯೆಹೋವನೇ, ನಿನ್ನ ನಿವಾಸವು ನನಗೆ ಎಷ್ಟೋ ಪ್ರಿಯ; ನಿನ್ನ ಪ್ರಭಾವ ಸ್ಥಾನವು ನನಗೆ ಇಷ್ಟ.


ಆಗ ಯೆಹೋವನ ಮಹಿಮೆಯು ಪೂರ್ವದಿಕ್ಕಿಗೆ ಅಭಿಮುಖವಾಗಿದ್ದ ಬಾಗಿಲಿನ ಮಾರ್ಗವಾಗಿ ಆಲಯವನ್ನು ಪ್ರವೇಶಿಸಿತು.


ದೇವರಾತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಅಂಗಳಕ್ಕೆ ಕರೆದು ತಂದಿತು. ಆಗ ಯೆಹೋವನ ಮಹಿಮೆಯು ಆಲಯವನ್ನು ತುಂಬಿಕೊಂಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು