Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 3:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಜೀವಿಗಳ ರೆಕ್ಕೆಗಳು ಒಂದಕ್ಕೊಂದು ಬಡಿಯುವ ಸಪ್ಪಳ, ಅವುಗಳ ಪಕ್ಕದಲ್ಲಿ ಗರಗರನೆ ತಿರುಗುವ ಚಕ್ರಗಳ ಸದ್ದು, ಹೀಗೆ ಭೂಕಂಪದಂಥ ಮಹಾಶಬ್ದವು ನನ್ನ ಕಿವಿಗೆ ಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆ ಜೀವಿಗಳ ರೆಕ್ಕೆಗಳು ಒಂದಕ್ಕೊಂದು ಬಡಿದಾಡುವ ಸಪ್ಪಳ, ಅವುಗಳ ಪಕ್ಕದಲ್ಲಿ ಗರಗರನೆ ತಿರುಗುವ ಚಕ್ರಗಳ ಸದ್ದು ಹೀಗೆ ಭೂಕಂಪದಂಥ ಮಹಾಶಬ್ದ ನನ್ನ ಕಿವಿಗೆ ಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಜೀವಿಗಳ ರೆಕ್ಕೆಗಳು ಒಂದಕ್ಕೊಂದು ಬಡಿದಾಡುವ ಸಪ್ಪಳ, ಅವುಗಳ ಪಕ್ಕದಲ್ಲಿ ಗರಗರನೆ ತಿರುಗುವ ಚಕ್ರಗಳ ಸದ್ದು, ಹೀಗೆ ಬಿರ್ರನ್ನುವ ಮಹಾಶಬ್ದವು [ನನ್ನ ಕಿವಿಗೆ ಬಿತ್ತು].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅದು ಜೀವಿಗಳು ತಮ್ಮ ರೆಕ್ಕೆಗಳನ್ನು ಒಂದಕ್ಕೊಂದು ಬಡಿದಾಡುವ ಸಪ್ಪಳ ಮತ್ತು ಅವುಗಳ ಪಕ್ಕದಲ್ಲಿದ್ದ ಚಕ್ರಗಳ ಸಪ್ಪಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಾನು ಒಂದಕ್ಕೊಂದು ತಗಲುವ ಆ ಜೀವಿಗಳ ರೆಕ್ಕೆಗಳ ಶಬ್ದವನ್ನೂ, ಅವುಗಳ ಬಳಿಯಲ್ಲಿದ್ದ ಚಕ್ರಗಳ ಶಬ್ದವನ್ನೂ, ಮಹಾ ಘೋಷದ ಶಬ್ದವು ನುಗ್ಗಿ ಬರುತ್ತಿರುವುದನ್ನೂ ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 3:13
6 ತಿಳಿವುಗಳ ಹೋಲಿಕೆ  

ಅವು ಮುಂದೆ ಹೋಗುವಾಗ ಅವುಗಳ ರೆಕ್ಕೆಗಳ ಶಬ್ದವು ಜಲಪ್ರವಾಹದ ಘೋಷದಂತೆ ಸರ್ವಶಕ್ತನ ಧ್ವನಿಯಂತೆ, ಆರ್ಭಟಿಸುವ ಸೈನ್ಯದ ಕೋಲಾಹಲದಂತೆ ನನಗೆ ಕೇಳಿಸಿತು; ಅವು ನಿಂತಾಗ ರೆಕ್ಕೆಗಳನ್ನು ಮುದುರಿಕೊಳ್ಳುತ್ತಿದ್ದವು.


ಆಗ ಕೆರೂಬಿಗಳ ರೆಕ್ಕೆಗಳ ಶಬ್ದವು ಸರ್ವಶಕ್ತನಾದ ದೇವರು ಮಾತನಾಡುವ ಧ್ವನಿಯಷ್ಟು ಗಂಭೀರವಾಗಿ ಹೊರಗಣ ಅಂಗಳದವರೆಗೂ ಕೇಳಿಸಿತು.


ಇಗೋ, ನಾನು ಆ ಜೀವಿಗಳನ್ನು ನೋಡುತ್ತಿರಲಾಗಿ ಒಂದೊಂದು ಕಡೆಯಲ್ಲಿಯೂ ಜೀವಿಗಳ ಪಕ್ಕದಲ್ಲಿ ಭೂಮಿಯ ಮೇಲೆ ಒಂದು ಚಕ್ರವು ಕಾಣಿಸಿತು.


ಆ ಬಾಕಾ ಮರಗಳ ತುದಿಯಲ್ಲಿ ಹೆಜ್ಜೆಗಳ ಸಪ್ಪಳ ಕೇಳಿಸುವಾಗ ಯೆಹೋವನು ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವುದಕ್ಕೋಸ್ಕರ ನಿನ್ನ ಮುಂದಾಗಿ ಹೊರಟನೆಂದು ತಿಳಿದು ಅವರ ಮೇಲೆ ದಾಳಿಮಾಡು” ಎಂದನು.


ಪ್ರತಿಯೊಂದು ಪೀಠಕ್ಕೆ ನಾಲ್ಕು ತಾಮ್ರದ ಗಾಲಿಗಳೂ ಅಚ್ಚುಗಳೂ ಇದ್ದವು. ಪ್ರತಿಯೊಂದು ನಿಲುವುಪಟ್ಟಿಯ ಮೇಲಣ ತುದಿಯಲ್ಲಿ ಎರಕ ಹೊಯ್ದ ತಾಮ್ರದ ಹಿಡಿಗಳಿದ್ದವು. ಅವು ಪೀಠದ ಮೇಲಣ ಗಂಗಾಳವನ್ನು ಹಿಡಿಯುತ್ತಿದ್ದವು. ಅವುಗಳ ಹೊರಮೈಗೆ ತೋರಣ ಚಿತ್ರಗಳಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು