Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 3:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಯಿತು. ನಾನು ಚಿಂತೆಯಿಂದ ಮನಸ್ತಾಪಪಡುತ್ತಾ ಹೋದೆನು. ಆದರೆ ಯೆಹೋವನ ಕೈ ನನ್ನ ಮೇಲೆ ಬಲವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ದೇವರಾತ್ಮ ನನ್ನನ್ನು ಎತ್ತಿಕೊಂಡುಹೋಯಿತು. ಸರ್ವೇಶ್ವರನ ಹಸ್ತಸ್ಪರ್ಶದಿಂದ ನಾನು ಅತಿ ಪರವಶನಾಗಿದ್ದು ವ್ಯಥೆಗೊಳ್ಳುತ್ತಾ ಮನಸ್ತಾಪಪಡುತ್ತಾ ಮುನ್ನಡೆದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಯಿತು. ನಾನು ಯೆಹೋವನ ಹಸ್ತಸ್ಪರ್ಶದಿಂದ ತುಂಬಾ ಪರವಶನಾಗಿದ್ದು ವ್ಯಥೆಗೊಳ್ಳುತ್ತಾ ಮನಸ್ತಾಪಪಡುತ್ತಾ ನಡೆದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆತ್ಮವು ನನ್ನನ್ನು ಅಲ್ಲಿಂದ ಎತ್ತಿಕೊಂಡು ಹೋಯಿತು. ನಾನು ಆಗ ದುಃಖಗೊಂಡು ನನ್ನ ಆತ್ಮದಲ್ಲಿ ತತ್ತರಗೊಂಡೆನು. ಆದರೆ ಯೆಹೋವನ ಶಕ್ತಿಯು ನನ್ನನ್ನು ಸಂಪೂರ್ಣವಾಗಿ ತನ್ನ ಅಧೀನಕ್ಕೆ ತೆಗೆದುಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಹೀಗೆ ದೇವರಾತ್ಮರು ನನ್ನನ್ನು ಎತ್ತಿಕೊಂಡು ಹೋದರು. ನಾನು ಕಹಿತನ ಮತ್ತು ಕೋಪದ ಆತ್ಮದಿಂದ ಮುನ್ನಡೆದೆನು. ಆದರೆ ಯೆಹೋವ ದೇವರ ಕೈ ನನ್ನ ಮೇಲೆ ಬಲವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 3:14
22 ತಿಳಿವುಗಳ ಹೋಲಿಕೆ  

ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಲು, ಆತನು ತನ್ನ ಆತ್ಮದ ಮೂಲಕ ನನ್ನನ್ನು ಒಯ್ದು ಎಲುಬುಗಳಿಂದ ತುಂಬಿದ್ದ ಒಂದು ಕಣಿವೆಯಲ್ಲಿ ಇಳಿಸಿದನು.


ಈಗ, ಒಬ್ಬ ವಾದ್ಯಗಾರನನ್ನು ನನ್ನ ಹತ್ತಿರ ಕರೆದುಕೊಂಡು ಬನ್ನಿರಿ” ಎಂದು ಹೇಳಿದನು. ವಾದ್ಯಗಳ ಸ್ವರವನ್ನು ಕೇಳುವಾಗಲೆಲ್ಲಾ ಎಲೀಷನಲ್ಲಿ ಯೆಹೋವನ ಬಲವು ಬರುತ್ತಿತ್ತು.


ಆಗ ಆ ತೇಜೋರೂಪಿಯು ಮನುಷ್ಯ ಹಸ್ತದಂಥ ಹಸ್ತವನ್ನು ಚಾಚಿ ನನ್ನ ತಲೆಯ ಕೂದಲಿನಿಂದ ಹಿಡಿಯಲು ದೇವರಾತ್ಮವು ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಯೆರೂಸಲೇಮಿನವರೆಗೆ ಒಯ್ದು, ಒಳಗಣ ಪ್ರಾಕಾರದ ಉತ್ತರ ಬಾಗಿಲ ಮುಂದೆ, ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ಆ ದೇವದರ್ಶನದಲ್ಲಿ ನನಗೆ ಕಂಡು ಬಂದಿತು.


ಯೆಹೋವನ ವಾಕ್ಯವು ಕಸ್ದೀಯ ದೇಶದೊಳಗೆ ಕೆಬಾರ್ ನದಿಯ ಹತ್ತಿರ ಬೂಜಿಯ ಮಗನೂ, ಯಾಜಕನೂ ಆದ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಕೇಳಿಸಿತು; ಅಲ್ಲಿ ಯೆಹೋವನ ಹಸ್ತಸ್ಪರ್ಶದಿಂದ ಅವನು ಪರವಶನಾದನು.


ಅನಂತರ ಅವರು ಅವನಿಗೆ, “ನಿನ್ನ ಸೇವಕರಾದ ನಮ್ಮಲ್ಲಿ ಐವತ್ತು ಮಂದಿ ಬಲಿಷ್ಠಜನರಿದ್ದಾರೆ. ನಿನ್ನ ಯಜಮಾನನ್ನು ಹುಡುಕುವುದಕ್ಕೆ ಅವರಿಗೆ ಅಪ್ಪಣೆಯಾಗಲಿ ಯೆಹೋವನ ಆತ್ಮವು ಅವನನ್ನು ಎತ್ತಿಕೊಂಡು ಹೋಗಿ ಒಂದು ಬೆಟ್ಟದ ಮೇಲಾಗಲಿ ತಗ್ಗಿನಲ್ಲಾಗಲಿ ಇಟ್ಟಿರಬಹುದು” ಎಂದು ಹೇಳಿದರು. ಅವನು ಅವರಿಗೆ, “ನೀವು ಅವರನ್ನು ಕಳುಹಿಸಬೇಡಿರಿ” ಎಂದನು.


ಆಮೇಲೆ ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಗಲಾಗಿ, “ಮಹಿಮೆಯುಳ್ಳ ಯೆಹೋವನಿಗೆ ಆತನ ವಾಸಸ್ಥಾನದಲ್ಲಿ ಸ್ತೋತ್ರವಾಗಲಿ” ಎಂಬ ಮಹಾಶಬ್ದವು ನನ್ನ ಹಿಂದೆ ಕೇಳಿಸಿತು.


ಆ ಸಮಾರ್ಯದ ಸ್ತ್ರೀಯು ಆತನಿಗೆ, “ಯೆಹೂದ್ಯನಾದ ನೀನು ಸಮಾರ್ಯದವಳಾದ ನನ್ನನ್ನು ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವುದಾದರೂ ಹೇಗೆ?” ಎಂದು ಹೇಳಿದಳು. ಏಕೆಂದರೆ ಯೆಹೂದ್ಯರಿಗೂ ಸಮಾರ್ಯದವರಿಗೂ ಹೊಕ್ಕುಬಳಕೆ ಇರಲಿಲ್ಲ.


ಆತನು ಯೂದಾಯವನ್ನು ಬಿಟ್ಟು ತಿರುಗಿ ಗಲಿಲಾಯಕ್ಕೆ ಹೊರಟು ಹೋದನು.


ಯೇಸು ಯೋಹಾನನಿಗಿಂತ ಹೆಚ್ಚು ಶಿಷ್ಯರನ್ನು ಮಾಡಿಕೊಂಡು ಅವರಿಗೆ ದೀಕ್ಷಾಸ್ನಾನ ಮಾಡಿಸುತ್ತಾನೆಂಬ ಸುದ್ದಿಯನ್ನು ಫರಿಸಾಯರು ಕೇಳಿದರೆಂದು ಕರ್ತನಿಗೆ ತಿಳಿದಾಗ,


ಯೆಹೋಯಾಖೀನನು ಸೆರೆಯಾದ ಆರನೆಯ ವರ್ಷದ, ಆರನೆಯ ತಿಂಗಳಿನ, ಐದನೆಯ ದಿನದಲ್ಲಿ ನಾನೂ ಮತ್ತು ಯೆಹೂದದ ಹಿರಿಯರೂ ನನ್ನ ಮನೆಯೊಳಗೆ ಎದುರಾಗಿ ಕುಳಿತಿರಲು ಕರ್ತನಾದ ಯೆಹೋವನ ಹಸ್ತಸ್ಪರ್ಶದಿಂದ ನಾನು ಪರವಶನಾದೆನು.


ಆದಕಾರಣ ಯೆಹೋವನ ರೋಷವು ನನ್ನಲ್ಲಿ ತುಂಬಿ ತುಳುಕುತ್ತದೆ; ತಡೆದು ತಡೆದು ನನಗೆ ಸಾಕಾಯಿತು. ಬೀದಿಯಲ್ಲಿನ ಮಕ್ಕಳ ಮೇಲೂ, ಯುವಕರ ಸಂಘದ ಮೇಲೂ ಅದನ್ನು ಹೊಯ್ದು ಬಿಡಬೇಕು. ಗಂಡನೂ, ಹೆಂಡತಿಯೂ, ಮುದುಕನೂ, ಮುಪ್ಪಿನ ಮುದುಕನೂ ಅಂತು ಎಲ್ಲರೂ ಅಪಹರಿಸಲ್ಪಡುವರು.


ಯೆಹೋವನ ಹಸ್ತವು ಎಲೀಯನ ಸಂಗಡ ಇದ್ದುದರಿಂದ ಅವನು ನಡುಕಟ್ಟಿಕೊಂಡು ಅಹಾಬನ ಮುಂದೆ ಓಡುತ್ತಾ ಇಜ್ರೇಲನ್ನು ಸೇರಿದನು.


ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮ ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಆ ಕಂಚುಕಿಯು ಫಿಲಿಪ್ಪನನ್ನು ಪುನಃ ಕಾಣಲಿಲ್ಲ. ಅವನು ಸಂತೋಷವುಳ್ಳವನಾಗಿ ತನ್ನ ಪ್ರಯಾಣವನ್ನು ಮುಂದುವರಿಸಿದನು.


ನಾನು ನಿನ್ನನ್ನು ಬಿಟ್ಟು ಹೊರಟ ಕೂಡಲೆ ಯೆಹೋವನ ಆತ್ಮವು ನಿನ್ನನ್ನು ನನಗೆ ಗೊತ್ತಿಲ್ಲದ ಬೇರೊಂದು ಸ್ಥಳಕ್ಕೆ ಒಯ್ಯುವುದು. ನಾನು ಹೋಗಿ ಅಹಾಬನಿಗೆ ಹೇಳುವಷ್ಟರಲ್ಲಿ ನೀನು ಅವನಿಗೆ ಸಿಕ್ಕದೆ ಹೋದರೆ ಅವನು ನನ್ನನ್ನು ಕೊಂದು ಹಾಕುವನು. ನಾನು ಬಾಲ್ಯಾರಭ್ಯ ಯೆಹೋವನಲ್ಲಿ ಭಯಭಕ್ತಿಯುಳ್ಳವನಲ್ಲವೇ?


ಯೆಹೋವನು ನನ್ನ ಮೇಲೆ ಬಲವಾಗಿ ಕೈಯನ್ನಿಟ್ಟು, ಈ ಜನರ ಮಾರ್ಗದಲ್ಲಿ ನಡೆಯಬಾರದೆಂದು ನನಗೆ ಉಪದೇಶಿಸುತ್ತಾ ಹೀಗೆಂದನು,


ಆ ಮೇಲೆ ದೇವರಾತ್ಮವು ನನ್ನನ್ನು ಎತ್ತಿ ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಯೆಹೋವನ ಆಲಯದ ಮೂಡಣ ಬಾಗಿಲಿಗೆ ತಂದುಬಿಟ್ಟಿತು; ಇಗೋ, ಬಾಗಿಲ ಮುಂದೆ ಇಪ್ಪತ್ತೈದು ಜನರು ನಿಂತಿದ್ದರು; ಅವರ ಮಧ್ಯದಲ್ಲಿ ಅಜ್ಜೂರನ ಮಗನಾದ ಯಾಜನ್ಯ, ಬೆನಾಯನ ಮಗನಾದ ಪೆಲತ್ಯ ಎಂಬ ಜನನಾಯಕರನ್ನು ನಾನು ನೋಡಿದೆ.


ನಾವು ಸೆರೆಯಾದ ಇಪ್ಪತ್ತೈದನೆಯ ವರ್ಷದ, ಮೊದಲನೆಯ ತಿಂಗಳಿನ, ಹತ್ತನೆಯ ದಿನದಲ್ಲಿ, ಪಟ್ಟಣವು ಹಾಳಾದ ಮೇಲೆ ಹದಿನಾಲ್ಕನೆಯ ವರ್ಷದ ಆ ದಿನದಲ್ಲೇ ಯೆಹೋವನ ಹಸ್ತಸ್ಪರ್ಶದಿಂದ ನಾನು ಪರವಶನಾಗಲು, ಆತನು ನನ್ನನ್ನು ಅಲ್ಲಿಗೆ ಬರಮಾಡಿದನು.


ದೇವರಾತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಅಂಗಳಕ್ಕೆ ಕರೆದು ತಂದಿತು. ಆಗ ಯೆಹೋವನ ಮಹಿಮೆಯು ಆಲಯವನ್ನು ತುಂಬಿಕೊಂಡಿತು.


ಆಗ ನಾನು ಆ ಚಿಕ್ಕ ಸುರುಳಿಯನ್ನು ಆ ದೂತನ ಕೈಯಿಂದ ತೆಗೆದುಕೊಂಡು ತಿಂದುಬಿಟ್ಟೆನು. ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು, ಅದನ್ನು ತಿಂದ ನಂತರ ನನ್ನ ಹೊಟ್ಟೆಯು ಕಹಿಯಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು