Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 3:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಾನು ದುಷ್ಟನಿಗೆ, ‘ನೀನು ಖಂಡಿತವಾಗಿ ಸಾಯುವೆ’ ಎಂದು ನುಡಿಯುವಾಗ ನೀನು ಅವನನ್ನು ಎಚ್ಚರಿಸದೆಯೂ, ಅವನು ತನ್ನ ಕೆಟ್ಟಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅವನಿಗೆ ಬುದ್ಧಿಹೇಳದೆಯೂ ಇದ್ದರೆ ಆ ದುಷ್ಟನು ತನ್ನ ಅಪರಾಧದಿಂದ ಸಾಯಬೇಕಾಗುವುದು; ಅವನ ಮರಣಕ್ಕೆ ನೀನು ಹೊಣೆಯಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನಾನು ದುಷ್ಟನಿಗೆ, “ನೀನು ಖಂಡಿತವಾಗಿ ಸಾಯುವೆ,” ಎಂದು ನುಡಿಯುವಾಗ ನೀನು ಅವನನ್ನು ಎಚ್ಚರಿಸದೆ ಹಾಗು ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅವನಿಗೆ ಬುದ್ಧಿಹೇಳದೆ ಇದ್ದರೆ, ಆ ದುಷ್ಟನು ತನ್ನ ಅಪರಾಧಕ್ಕಾಗಿ ಸಾಯಬೇಕಾಗುವುದು; ಅವನ ಮರಣಕ್ಕೆ ನೀನೆ ಹೊಣೆಯಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಾನು ದುಷ್ಟನಿಗೆ - ಸತ್ತೇ ಸಾಯುವಿ ಎಂದು ನುಡಿಯುವಾಗ ನೀನು ಅವನನ್ನು ಎಚ್ಚರಿಸದೆಯೂ ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅವನಿಗೆ ಬುದ್ಧಿಹೇಳದೆಯೂ ಇದ್ದರೆ ಆ ದುಷ್ಟನು ತನ್ನ ಅಪರಾಧದಿಂದ ಸಾಯಬೇಕಾಗುವದು; ಅವನ ಮರಣಕ್ಕಾಗಿ ನಿನಗೇ ಮುಯ್ಯಿತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಾನು ದುಷ್ಟನಿಗೆ, ‘ನೀನು ಸಾಯುವೆ’ ಎಂದು ಹೇಳುವಾಗ, ನೀನು ಅವನನ್ನು ಎಚ್ಚರಿಸಬೇಕು. ಅವನು ತನ್ನ ಪ್ರಾಣವನ್ನು ರಕ್ಷಿಸಿಕೊಳ್ಳುವದಕ್ಕಾಗಿ ತನ್ನ ಜೀವಿತವನ್ನು ಮಾರ್ಪಡಿಸಿಕೊಂಡು ದುಷ್ಕೃತ್ಯ ನಿಲ್ಲಿಸಬೇಕೆಂದು ನೀನು ಅವನಿಗೆ ಹೇಳಬೇಕು. ನೀನು ಅವನನ್ನು ಎಚ್ಚರಿಸದಿದ್ದರೆ ಅವನು ತನ್ನ ಪಾಪದ ದೆಸೆಯಿಂದ ಸಾಯುವನು. ಆದರೆ ಅವನ ಮರಣಕ್ಕೆ ನಾನು ನಿನ್ನನ್ನೇ ಹೊಣೆಗಾರನನ್ನಾಗಿ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಾನು ದುಷ್ಟನಿಗೆ, ‘ನೀನು ನಿಶ್ಚಯವಾಗಿ ಸಾಯುವೆ,’ ಎಂದು ಹೇಳುವಾಗ, ನೀನು ಅವನನ್ನು ಎಚ್ಚರಿಸದೆ, ಅವನು ತನ್ನ ದುರ್ಮಾರ್ಗಗಳನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ನೀನು ಅವನಿಗೆ ಬುದ್ಧಿಹೇಳದೆ ಹೋದರೆ, ಆ ದುಷ್ಟ ಮನುಷ್ಯನು ತನ್ನ ಪಾಪಗಳಿಂದಲೇ ಸಾಯಬೇಕಾಗುವದು; ಆದರೆ ಅವನ ಸಾವಿಗೆ ನಿನ್ನನ್ನೇ ಹೊಣೆಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 3:18
31 ತಿಳಿವುಗಳ ಹೋಲಿಕೆ  

ಆದರೆ ಕಾವಲುಗಾರನು ಬೀಳುವ ಖಡ್ಗವನ್ನು ನೋಡಿಯೂ, ಕೊಂಬನ್ನೂದದೆ, ಸ್ವಜನರನ್ನು ಎಚ್ಚರಿಸದೆ ಇದ್ದರೆ, ಖಡ್ಗವು ಬಿದ್ದು ಆ ಜನರೊಳಗೆ ಯಾರನ್ನೇ ಆಗಲಿ ನಾಶಮಾಡಿದರೆ, ತನ್ನ ಅಧರ್ಮದಲ್ಲೇ ನಾಶಗೊಂಡ ಆ ಮನುಷ್ಯನ ಮರಣಕ್ಕೆ ಕಾವಲುಗಾರನನ್ನೇ ಹೊಣೆಮಾಡುವೆನು.’


ಇದಲ್ಲದೆ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯಮಾಡುವವನಾದರೆ, ಆಗ ನಾನು ಅವನ ಮುಂದೆ ಅಡಚಣೆಯನ್ನು ಒಡ್ಡುವೆನು, ಎಡವಿದರೆ ಅವನು ಸಾಯುವನು; ನೀನು ಅವನನ್ನು ಎಚ್ಚರಿಸದೆ ಹೋದಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಒಳ್ಳೆಕಾರ್ಯಗಳು ಲೆಕ್ಕಕ್ಕೆ ಬರುವುದಿಲ್ಲ. ಆದರೆ ಅವನ ಮರಣಕ್ಕೆ ನೀನು ಹೊಣೆಯಾಗುವೆ.


ಬೇರೆ ಅನೇಕ ವಿಧವಾದ ಮಾತುಗಳಿಂದ ಅವನು ಖಂಡಿತವಾಗಿ ಸಾಕ್ಷಿನುಡಿದು, “ಈ ದುಷ್ಟ ಪೀಳಿಗೆಯಿಂದ ನಿಮ್ಮನ್ನು ಸಂರಕ್ಷಿಸಿಕೊಳ್ಳಿರಿ” ಎಂದು ಅವರನ್ನು ಎಚ್ಚರಿಸಿದನು.


ಹಾಗಲ್ಲವೆಂದು ನಿಮಗೆ ಹೇಳುತ್ತೇನೆ. ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ನಾಶವಾಗುವಿರಿ” ಎಂದು ಹೇಳಿದನು.


ನಿನ್ನ ವಿಷಯದಲ್ಲಿಯೂ ನಿನ್ನ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಈ ಕಾರ್ಯಗಳಲ್ಲಿ ನಿರತನಾಗಿರು, ಆಗ ನೀನು ನಿನ್ನನ್ನೂ ಮತ್ತು ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.


ಯೇಸು ತಿರುಗಿ ಅವರಿಗೆ, “ನಾನು ಹೋಗುತ್ತೇನೆ, ನೀವು ನನ್ನನ್ನು ಹುಡುಕುವಿರಿ ಮತ್ತು ನೀವು ನಿಮ್ಮ ಪಾಪದಲ್ಲೇ ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ” ಎಂದನು.


ಪಾಪ ಮಾಡುವವನೇ ಸಾಯುವನು; ಮಗನು ತಂದೆಯ ದೋಷಫಲವನ್ನು ಅನುಭವಿಸನು; ಶಿಷ್ಟನ ಶಿಷ್ಟತನದ ಫಲವು ಶಿಷ್ಟನದೇ, ದುಷ್ಟನ ದುಷ್ಟತನದ ಫಲವು ದುಷ್ಟನದೇ.


ಆದುದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ನಿಮಗೆ ನಾನು ಹೇಳಿದೆನು. ನೀವು ನನ್ನನ್ನು ಯಾರೆಂದು ನಂಬದೆ ಹೋದರೆ ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ” ಎಂದು ಹೇಳಿದನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನನ್ನ ಜೀವದಾಣೆ, ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ; ಅವರು ನನ್ನ ಕುರಿಗಳ ಲೆಕ್ಕವನ್ನು ನನಗೆ ಒಪ್ಪಿಸಬೇಕು; ನನ್ನ ಕುರಿಗಳನ್ನು ಮೇಯಿಸುವ ಕೆಲಸದಿಂದ ಅವರನ್ನು ತೆಗೆದುಬಿಡುವೆನು; ಆ ಕುರುಬರು ಇನ್ನು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳುವುದಿಲ್ಲ; ನನ್ನ ಕುರಿಗಳು ಆಹಾರವಾಗಿ, ಅವರ ಬಾಯಿಗೆ ಬೀಳದಂತೆ ಅವುಗಳನ್ನು ರಕ್ಷಿಸುವೆನು.”


ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನ ಅಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.


ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು, ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.


ಅವಸರದಿಂದ ಯಾರ ತಲೆಯ ಮೇಲೆಯಾದರೂ ಹಸ್ತವನ್ನಿಟ್ಟು ಸಭೆಯ ನಾಯಕತ್ವಕ್ಕೆ ನೇಮಿಸಬೇಡ. ಮತ್ತೊಬ್ಬರು ಮಾಡಿದ ಪಾಪದಲ್ಲಿ ನೀನು ಪಾಲುಗಾರನಾಗದೆ, ನೀನು ಶುದ್ಧನಾಗಿರುವ ಹಾಗೆ ನೋಡಿಕೋ.


ಆದುದರಿಂದ ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ಹಾಗೆ ತಿರುಗಿದರೆ ಕರ್ತನ, ಸನ್ನಿಧಾನದಿಂದ


ಹಾಗೆ ಭಾವಿಸಕೂಡದೆಂದು ನಿಮಗೆ ಹೇಳುತ್ತೇನೆ. ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ನಾಶವಾಗುವಿರಿ.


ಅಸಹ್ಯಕಾರ್ಯವನ್ನು ಮಾಡಿ, ಸಾಲಕ್ಕೆ ಬಡ್ಡಿತೆಗೆದು, ಲಾಭಕ್ಕೆ ಹಣಕೊಟ್ಟು, ಬಲಾತ್ಕಾರಿಯೂ ಮತ್ತು ರಕ್ತಸುರಿಸುವವನೂ ಆಗಿದ್ದರೆ ಜೀವಿಸುವನೇ? ಖಂಡಿತ ಜೀವಿಸುವುದಿಲ್ಲ; ಈ ದುರಾಚಾರಗಳನ್ನೆಲ್ಲಾ ನಡೆಸಿದನಲ್ಲವೇ? ಅವನು ಸಾಯುವುದು ಖಂಡಿತ; ತನ್ನ ಮರಣ ದಂಡನೆಗೆ ತಾನೇ ಕಾರಣ.


ದುಷ್ಟರ ಗತಿಯನ್ನು ಏನು ಹೇಳಲಿ! ಅವರ ಕಾರ್ಯಗಳಿಗೆ ತಕ್ಕ ಪ್ರತಿಫಲವು ಅವರಿಗೆ ದೊರಕುವುದು.


ಅಹಜ್ಯನು ತಾನು ಹತ್ತಿ ಮಲಗಿದ ಮಂಚದಿಂದ ಇಳಿಯದೆ ಸಾಯಲೇ ಬೇಕು’ ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂಬುದಾಗಿ ಹೇಳು ಎಂದು ಆಜ್ಞಾಪಿಸಿದನು. ಎಲೀಯನು ಹಾಗೆಯೇ ಮಾಡಿದನು.


ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ಈ ಮರದ ಹಣ್ಣನ್ನು ಮಾತ್ರ ತಿನ್ನಬಾರದು. ತಿಂದ ದಿನವೇ ಸತ್ತು ಹೋಗುವೆ” ಎಂದು ಆಜ್ಞಾಪಿಸಿದನು.


ಮಹಾ ದುಷ್ಟರಾದ ನೀವು ನೀತಿವಂತನ ಮನೆಯೊಳಗೆ ನುಗ್ಗಿ, ಅವನನ್ನು ಅವನ ಮಂಚದ ಮೇಲೆಯೇ ಕೊಂದು ಹಾಕಿದ ಮೇಲೆ, ಆ ರಕ್ತಾಪರಾಧಕ್ಕಾಗಿ ನಿಮಗೆ ಮುಯ್ಯಿ ತೀರಿಸುವುದು ಎಷ್ಟೋ ಅಗತ್ಯವಾಗಿದೆ. ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿದ ಯೆಹೋವನಾಣೆ, ನಿಮ್ಮನ್ನು ಭೂಲೋಕದಿಂದ ತೆಗೆದು ಬಿಡುವೆನು” ಎಂದು ಹೇಳಿ,


ಅವರೆಲ್ಲರೂ ಅರಣ್ಯದಲ್ಲಿಯೇ ಸಾಯುವರೆಂದು ಯೆಹೋವನು ಅವರ ವಿಷಯದಲ್ಲಿ ಹೇಳಿದ್ದನು. ಆದುದರಿಂದ ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ.


ಅದಕ್ಕೆ ರೂಬೇನನು, “ಆ ಹುಡುಗನಿಗೆ ಏನೂ ಕೇಡು ಮಾಡಬೇಡಿರಿ ಎಂದು ನಾನು ಹೇಳಿದೆನಲ್ಲವೆ. ನೀವು ಕೇಳಲಿಲ್ಲ. ಆದುದರಿಂದ ಅವನಿಗಾದ ಪ್ರಾಣ ಹಾನಿಯ ವಿಷಯದಲ್ಲಿ ನಾವು ಈಗ ಉತ್ತರ ಹೇಳಬೇಕಾಗಿ ಬಂದಿದೆ” ಎಂದನು.


ನೀನು ಈಗ ಅವರು ಕೇಳಿಕೊಂಡಂತೆ ಮಾಡು; ಆದರೆ ಅವರ ಮೇಲೆ ರಾಜರಿಗಿರುವ ಅಧಿಕಾರ ಎಷ್ಟೆಂಬುದನ್ನು ಅವರಿಗೆ ತಿಳಿಸಿ, ಎಚ್ಚರಿಸು” ಎಂದು ಹೇಳಿದನು.


ನರಪುತ್ರನೇ, ನಿನ್ನ ಜನರಿಗೆ ಹೀಗೆ ಹೇಳು, “ನೀತಿವಂತನು ದ್ರೋಹಮಾಡಿದ್ದಲ್ಲಿ ಅವನ ನೀತಿಯು ಅವನನ್ನು ಉದ್ಧರಿಸುವುದಿಲ್ಲ; ದುಷ್ಟನು ತನ್ನ ದುಷ್ಟತನವನ್ನು ಬಿಟ್ಟಲ್ಲಿ, ಅವನ ಪಾಪವು ಅವನನ್ನು ಬೀಳಿಸುವುದಿಲ್ಲ; ನೀತಿವಂತನು ಪಾಪಮಾಡಿದಲ್ಲಿ ಅವನ ನೀತಿಯು ಅವನನ್ನು ಬದುಕಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು