ಯೆಹೆಜ್ಕೇಲನು 3:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನಾನು ಎದ್ದು ಬಯಲು ಸೀಮೆಗೆ ಹೊರಟುಹೋದೆನು. ಯೆಹೋವನ ಮಹಿಮೆಯು ಅಲ್ಲಿ ನಿಂತಿತ್ತು. ಅದು ಕೆಬಾರ್ ನದಿಯ ಹತ್ತಿರ ನಾನು ನೋಡಿದ ಮಹಿಮೆಯ ಪ್ರಕಾರವಾಗಿತ್ತು. ಅದನ್ನು ಕಂಡು ಅಡ್ಡಬಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನಾನೆದ್ದು ಬಯಲು ಪ್ರದೇಶಕ್ಕೆ ಹೊರಟುಬಂದಾಗ, ಕೆಬಾರ್ ನದಿಯ ಹತ್ತಿರ ನನಗೆ ಮಹಿಮಾದ್ಭುತ ದರ್ಶನವು ಆದಂತೆ, ಇಗೋ ಅಲ್ಲಿಯೂ ಸರ್ವೇಶ್ವರನ ಮಹಿಮೆ ಪ್ರತ್ಯಕ್ಷವಾಯಿತು. ಅದನ್ನು ನೋಡಿ ಅಡ್ಡಬಿದ್ದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನಾನೆದ್ದು ಬೈಲುಸೀಮೆಗೆ ಹೊರಟುಹೋದಾಗ ಕೆಬಾರ್ ನದಿಯ ಹತ್ತಿರ ನನಗೆ ಮಹಿಮಾದ್ಭುತದರ್ಶನವು ಆದಂತೆ ಆಹಾ, ಅಲ್ಲಿಯೂ ಯೆಹೋವನ ಮಹಿಮೆಯು ಪ್ರತ್ಯಕ್ಷವಾಯಿತು. ಅದನ್ನು ನೋಡಿ ಅಡ್ಡಬಿದ್ದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ನಾನೆದ್ದು ಬಯಲು ಸೀಮೆಗೆ ಹೋದೆನು. ಕೆಬಾರ್ ನದಿಯ ಪಕ್ಕದಲ್ಲಿ ನಾನು ಕಂಡ ಮಹಿಮೆಯಂತಿದ್ದ ಯೆಹೋವನ ಮಹಿಮೆಯು ಅಲ್ಲಿ ಇತ್ತು. ನಾನು ನನ್ನ ಮುಖವನ್ನು ನೆಲಕ್ಕೆ ತಾಗಿಸಿ ಬಗ್ಗಿ ನಮಸ್ಕರಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆಮೇಲೆ ನಾನು ಎದ್ದು ಬಯಲುಸೀಮೆಯ ಕಡೆಗೆ ಹೋದೆನು. ಯೆಹೋವ ದೇವರ ಮಹಿಮೆಯು ಅಲ್ಲಿ ನಿಂತಿತ್ತು. ಅದು ಕೆಬಾರ್ ನದಿಯ ಹತ್ತಿರ ನಾನು ನೋಡಿದ ಮಹಿಮೆಯ ಪ್ರಕಾರವಾಗಿತ್ತು. ಅದನ್ನು ಕಂಡು ನಾನು ಅಡ್ಡ ಬಿದ್ದೆನು. ಅಧ್ಯಾಯವನ್ನು ನೋಡಿ |
ಆ ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕುಳಿತಾತನ ಪಾದಕ್ಕೆ ಅಡ್ಡಬಿದ್ದು, ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ, “ಕರ್ತನೇ ನಮ್ಮ ದೇವರೇ ನೀನು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯನಾಗಿದ್ದೀ, ಏಕೆಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಎಲ್ಲವೂ ನಿನ್ನ ಚಿತ್ತದಿಂದಲೇ ಇದ್ದವು ಮತ್ತು ನಿನ್ನ ಚಿತ್ತದಿಂದಲೇ ನಿರ್ಮಿತವಾದವು” ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಿದ್ದರು.