Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 3:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಆತನು ನನಗೆ, “ನರಪುತ್ರನೇ, ನಾನು ಕೊಡುವ ಈ ಸುರುಳಿಯನ್ನು ತಿಂದು ಹೊಟ್ಟೆ ತುಂಬಿಸಿಕೋ” ಎಂದು ಹೇಳಲು ಅದನ್ನು ತಿಂದುಬಿಟ್ಟೆನು; ಅದು ನನ್ನ ಬಾಯಿಯಲ್ಲಿ ಜೇನಿನಂತೆ ಸಿಹಿಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ತಿನ್ನಿಸುತ್ತಾ, “ನರಪುತ್ರನೇ, ನಾನು ಕೊಡುವ ಈ ಸುರುಳಿಯನ್ನು ತಿಂದು ಹೊಟ್ಟೆ ತುಂಬಿಸಿಕೋ,” ಎಂದರು. ನಾನು ಅದನ್ನು ತಿಂದುಬಿಟ್ಟೆ; ಅದು ನನ್ನ ಬಾಯಿಗೆ ಜೇನಿನಂತೆ ಸಿಹಿಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಆತನು ನನಗೆ - ನರಪುತ್ರನೇ, ನಾನು ಕೊಡುವ ಈ ಸುರಳಿಯನ್ನು ತಿಂದು ಹೊಟ್ಟೆ ತುಂಬಿಸಿಕೋ ಎಂದು ಹೇಳಲು ಅದನ್ನು ತಿಂದುಬಿಟ್ಟೆನು; ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಗ ದೇವರು ಹೇಳಿದ್ದೇನೆಂದರೆ, “ನರಪುತ್ರನೇ, ನಾನು ಈ ಸುರುಳಿಯನ್ನು ನಿನಗೆ ಕೊಡುತ್ತೇನೆ. ಇದನ್ನು ನುಂಗು. ಇದು ನಿನ್ನ ಹೊಟ್ಟೆಯನ್ನು ತುಂಬಲಿ.” ಆಗ ನಾನು ಆ ಸುರುಳಿಯನ್ನು ತಿಂದೆನು. ಅದು ನನ್ನ ಬಾಯಲ್ಲಿ ಜೇನುತುಪ್ಪದ ಸಿಹಿಯಂತೆ ರುಚಿಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಅವರು ನನಗೆ ಹೇಳಿದ್ದೇನೆಂದರೆ, “ಮನುಷ್ಯಪುತ್ರನೇ, ನಾನು ಕೊಡುವ ಈ ಸುರುಳಿಯನ್ನು ತಿಂದು, ಹೊಟ್ಟೆಯನ್ನು ತುಂಬಿಸಿಕೋ,” ಎಂದರು. ಆಗ ನಾನು ಅದನ್ನು ತಿಂದೆನು. ಅದು ನನ್ನ ಬಾಯಲ್ಲಿ ಜೇನಿನ ಹಾಗೆ ಸಿಹಿಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 3:3
18 ತಿಳಿವುಗಳ ಹೋಲಿಕೆ  

ನನಗೆ ದೊರೆತ ನಿನ್ನ ಮಾತುಗಳನ್ನು ಆಹಾರಮಾಡಿಕೊಂಡೆನು, ನಿನ್ನ ನುಡಿಗಳು ನನಗೆ ಹರ್ಷವೂ, ಹೃದಯಾನಂದವೂ ಆದವು. ಸೇನಾಧೀಶ್ವರನಾದ ದೇವರೇ, ಯೆಹೋವನೇ, ನಾನು ನಿನ್ನ ಹೆಸರಿನವನಲ್ಲವೇ!


ನಿನ್ನ ನುಡಿಗಳು ನನ್ನ ನಾಲಿಗೆಗೆ ಎಷ್ಟೋ ರುಚಿಯಾಗಿವೆ, ಅವು ನನ್ನ ಬಾಯಿಗೆ ಜೇನು ತುಪ್ಪಕ್ಕಿಂತಲೂ ಸಿಹಿಯಾಗಿವೆ.


ಅವು ಬಂಗಾರಕ್ಕಿಂತಲೂ, ಅಪರಂಜಿರಾಶಿಗಿಂತಲೂ ಅಪೇಕ್ಷಿಸತಕ್ಕವುಗಳು. ಅವು ಜೇನಿಗಿಂತಲೂ, ಶೋಧಿಸಿದ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ.


ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ.


ನಿನ್ನ ಧರ್ಮಶಾಸ್ತ್ರವು ನನಗೆ ಎಷ್ಟೋ ಪ್ರಿಯವಾಗಿದೆ, ದಿನವೆಲ್ಲಾ ಅದೇ ನನ್ನ ಧ್ಯಾನ.


ನಿನಗೆ ವಿರುದ್ಧವಾಗಿ ಪಾಪಮಾಡದಂತೆ, ನಿನ್ನ ನುಡಿಗಳನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡಿದ್ದೇನೆ.


ಶಾಸ್ತ್ರದಲ್ಲಿ ಹೇಳಿರುವ ಪ್ರಕಾರ ನನ್ನಲ್ಲಿ ಯಾವನು ನಂಬಿಕೆಯಿಡುವನೋ ಅವನೊಳಗಿನಿಂದ ಜೀವಕರವಾದ ನೀರಿನ ಬುಗ್ಗೆಗಳು ಹರಿಯುವವು” ಎಂದು ಕೂಗಿ ಹೇಳಿದನು.


ಆತನು ಆ ಸುರುಳಿಯನ್ನು ನನ್ನೆದುರಿನಲ್ಲಿ ಬಿಚ್ಚಿದನು; ಅದರ ಎರಡು ಪಕ್ಕಗಳಲ್ಲಿಯೂ ಬರೆದಿತ್ತು; ಅದರಲ್ಲಿ ಬರೆದದ್ದು ಪ್ರಲಾಪ, ಗೋಳಾಟ, ಶೋಕ ಇವುಗಳೇ.


“ನಾನು ಯೆಹೋವನ ವಿಷಯವನ್ನು ಪ್ರಕಟಿಸುವುದಿಲ್ಲ, ಆತನ ಹೆಸರಿನಲ್ಲಿ ಇನ್ನು ಮಾತನಾಡುವುದಿಲ್ಲ” ಎಂದುಕೊಂಡರೆ, ಉರಿಯುವ ಬೆಂಕಿಯು ನನ್ನ ಎಲುಬುಗಳಲ್ಲಿ ಅಡಕವಾಗಿದೆಯೋ ಎಂಬಂತೆ ನನ್ನ ಹೃದಯದಲ್ಲಿ ಸಂಕಟವಾಗುತ್ತದೆ, ಸಹಿಸಿ ಸಹಿಸಿ ಆಯಾಸಗೊಂಡಿದ್ದೇನೆ, ಇನ್ನು ಸಹಿಸಲಾರೆ.


ಆದಕಾರಣ ಯೆಹೋವನ ರೋಷವು ನನ್ನಲ್ಲಿ ತುಂಬಿ ತುಳುಕುತ್ತದೆ; ತಡೆದು ತಡೆದು ನನಗೆ ಸಾಕಾಯಿತು. ಬೀದಿಯಲ್ಲಿನ ಮಕ್ಕಳ ಮೇಲೂ, ಯುವಕರ ಸಂಘದ ಮೇಲೂ ಅದನ್ನು ಹೊಯ್ದು ಬಿಡಬೇಕು. ಗಂಡನೂ, ಹೆಂಡತಿಯೂ, ಮುದುಕನೂ, ಮುಪ್ಪಿನ ಮುದುಕನೂ ಅಂತು ಎಲ್ಲರೂ ಅಪಹರಿಸಲ್ಪಡುವರು.


ಆತನ ತುಟಿಗಳಿಂದ ಹೊರಟ ನಿಯಮಗಳಿಗೆ ನಾನು ಹಿಂದೆಗೆಯಲಿಲ್ಲ, ಆತನ ಬಾಯಿಂದ ಬಂದ ಮಾತುಗಳನ್ನು ಎದೆಯಲ್ಲಿ ನಿಧಿಯನ್ನಾಗಿ ಬಚ್ಚಿಟ್ಟುಕೊಂಡಿದ್ದೇನೆ.


ಇದಲ್ಲದೆ ಆತನು, “ನರಪುತ್ರನೇ, ನಾನು ನಿನಗೆ ಹೇಳುವ ಮಾತನ್ನು ಕೇಳು; ಅವಿಧೇಯರಾದ ಆ ವಂಶದವರಂತೆ ನೀನು ಅವಿಧೇಯನಾಗಬೇಡ; ನಾನು ಕೊಡುವುದನ್ನು ಬಾಯಿದೆರೆದು ತಿಂದುಬಿಡು” ಅಂದನು.


ಆಮೇಲೆ ಆತನು ನನಗೆ ಹೀಗೆಂದನು, “ನರಪುತ್ರನೇ, ನೀನು ಇಸ್ರಾಯೇಲ್ ವಂಶದವರ ಬಳಿಗೆ ಹೋಗಿ ನಾನು ತಿಳಿಸುವ ಮಾತುಗಳನ್ನು ಅವರಿಗೆ ಹೇಳು.


ಅವುಗಳ ಮೂಲಕ ನಿನ್ನ ದಾಸನಿಗೆ ವಿವೇಚನೆ ಉಂಟಾಗುತ್ತದೆ; ಅವುಗಳನ್ನು ಕೈಕೊಳ್ಳುವುದರಿಂದ ಬಹಳ ಫಲ ದೊರೆಯುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು