Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 3:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಮೇಲೆ ಆತನು ನನಗೆ ಹೀಗೆಂದನು, “ನರಪುತ್ರನೇ, ನೀನು ಇಸ್ರಾಯೇಲ್ ವಂಶದವರ ಬಳಿಗೆ ಹೋಗಿ ನಾನು ತಿಳಿಸುವ ಮಾತುಗಳನ್ನು ಅವರಿಗೆ ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆಮೇಲೆ ಸರ್ವೇಶ್ವರ ನನಗೆ ಹೀಗೆಂದರು: “ನರಪುತ್ರನೇ, ನೀನು ಇಸ್ರಯೇಲ್ ವಂಶದವರ ಬಳಿಗೆ ಹೋಗಿ ನಾನು ತಿಳಿಸುವ ಮಾತುಗಳನ್ನು ಅವರಿಗೆ ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಮೇಲೆ ಆತನು ನನಗೆ ಹೀಗೆ ಹೇಳಿದನು - ನರಪುತ್ರನೇ, ನೀನು ಇಸ್ರಾಯೇಲ್ ವಂಶದವರ ಬಳಿಗೆ ಹೋಗಿ ನಾನು ತಿಳಿಸುವ ಮಾತುಗಳನ್ನು ಅವರಿಗೆ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ದೇವರು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಇಸ್ರೇಲ್ ವಂಶದವರ ಬಳಿಗೆ ಹೋಗಿ ನನ್ನ ಮಾತುಗಳನ್ನು ಅವರಿಗೆ ತಿಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನನಗೆ ಅವರು, “ಮನುಷ್ಯಪುತ್ರನೇ, ಹೋಗು; ಇಸ್ರಾಯೇಲಿನ ಜನರ ಬಳಿಗೆ ಹೋಗಿ, ನನ್ನ ಮಾತುಗಳನ್ನು ಅವರಿಗೆ ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 3:4
12 ತಿಳಿವುಗಳ ಹೋಲಿಕೆ  

ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಅಂದನು.


ಆದರೆ ಯೇಸು ಹೇಳಿದ್ದೇನೆಂದರೆ “ಕಳೆದುಹೋದ ಕುರಿಗಳಂತಿರುವ ಇಸ್ರಾಯೇಲ್ ಮನೆತನದವರ ಬಳಿಗೇ ಹೊರತು ಮತ್ತಾರ ಬಳಿಗೂ ನಾನು ಕಳುಹಿಸಲ್ಪಟ್ಟವನಲ್ಲ” ಅಂದನು.


ಸೆರೆಯಾಗಿರುವ ನಿನ್ನ ಸ್ವಂತ ಜನರ ಬಳಿಗೆ ಹೋಗಿ ಅವರು ಕೇಳಿದರೂ, ಕೇಳದೆ ಹೋದರೂ ಅವರನ್ನು ಉದ್ದೇಶಿಸಿ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ಅವರಿಗೆ ಸಾರು.”


ಅವರು ಕೇಳಿದರೂ, ಕೇಳದೆ ಹೋದರೂ ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿ ದ್ರೋಹಿಗಳೇ.”


ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ನನ್ನ ವಿರುದ್ಧವಾಗಿ ತಿರುಗಿಬಿದ್ದು ದ್ರೋಹಮಾಡಿದ ಜನಾಂಗದವರಾದ ಇಸ್ರಾಯೇಲರ ಬಳಿಗೆ ನಿನ್ನನ್ನು ಕಳುಹಿಸುತ್ತೇನೆ; ಈ ದಿನದವರೆಗೆ ಅವರೂ, ಅವರ ಪೂರ್ವಿಕರೂ ನನ್ನ ವಿರುದ್ಧವಾಗಿ ಪಾಪಮಾಡುತ್ತಲೇ ಇದ್ದಾರೆ.


ಆಗ ಆತನು ನನಗೆ, “ನರಪುತ್ರನೇ, ನಾನು ಕೊಡುವ ಈ ಸುರುಳಿಯನ್ನು ತಿಂದು ಹೊಟ್ಟೆ ತುಂಬಿಸಿಕೋ” ಎಂದು ಹೇಳಲು ಅದನ್ನು ತಿಂದುಬಿಟ್ಟೆನು; ಅದು ನನ್ನ ಬಾಯಿಯಲ್ಲಿ ಜೇನಿನಂತೆ ಸಿಹಿಯಾಗಿತ್ತು.


ನಾನು ನಿನ್ನನ್ನು ಇಸ್ರಾಯೇಲ್ ವಂಶದವರ ಬಳಿಗೆ ಕಳುಹಿಸುತ್ತೇನೆಯೇ ಹೊರತು ಕಷ್ಟಕರವಾದ ಅನ್ಯಭಾಷೆಯ ಜನರ ಬಳಿಗೆ ಕಳುಹಿಸುವುದಿಲ್ಲ.


ಆದಕಾರಣ, ನರಪುತ್ರನೇ, ನೀನು ಇವರ ವಿಷಯವಾಗಿ ಅಹಿತವನ್ನು ನುಡಿ, ತಪ್ಪದೆ ನುಡಿ” ಎಂದು ಆಜ್ಞಾಪಿಸಿದನು.


ಯೆಹೋವನು ತೋರಿಸಿದ ಎಲ್ಲವುಗಳನ್ನು ಕೂಡಲೆ ಸೆರೆಯವರಿಗೆ ತಿಳಿಸಿದೆನು.


ಹೀಗಿರಲು, “ನರಪುತ್ರನೇ, ಇಸ್ರಾಯೇಲ್ ವಂಶದವರಿಗೆ ಈ ಮಾತನ್ನು ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ಪೂರ್ವಿಕರು ಇನ್ನೂ ಒಂದು ದ್ರೋಹವನ್ನು ಮಾಡಿ ನನ್ನನ್ನು ದೂಷಿಸಿದ್ದಾರೆ.


“ನಾನು ಯಾವ ಸಂತಾನದವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಆ ಸಂತಾನದವರು ನಾಚಿಕೆಗೆಟ್ಟವರೂ, ಹಟಗಾರರೂ ಆಗಿರುತ್ತಾರೆ; ನೀನು ಅವರಿಗೆ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು