ಯೆಹೆಜ್ಕೇಲನು 30:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಾನು ನದಿಗಳನ್ನು ಒಣಗಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು. ಹೌದು, ದೇಶವನ್ನೂ, ಅದರಲ್ಲಿನ ಸಮಸ್ತವನ್ನೂ ಅನ್ಯರ ಕೈಯಿಂದ ಹಾಳುಮಾಡಿಸುವೆನು. ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಾನು ನದೀ ಶಾಖೆಗಳನ್ನು ಬತ್ತಿಸಿ, ದೇಶವನ್ನು ದುಷ್ಟರ ಕೈಗೆ ವಶಮಾಡಿಬಿಡುವೆನು; ಹೌದು, ದೇಶವನ್ನೂ ಅದರಲ್ಲಿನ ಸಮಸ್ತವನ್ನೂ ಅನ್ಯರ ಕೈಯಿಂದ ಹಾಳುಮಾಡಿಸುವೆನು; ಸರ್ವೇಶ್ವರನಾದ ನಾನೇ ನುಡಿದಿದ್ದೇನೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಾನು ನದೀಶಾಖೆಗಳನ್ನು ಬತ್ತಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು; ಹೌದು, ದೇಶವನ್ನೂ ಅದರಲ್ಲಿನ ಸಮಸ್ತವನ್ನೂ ಅನ್ಯರ ಕೈಯಿಂದ ಹಾಳುಮಾಡಿಸುವೆನು; ಯೆಹೋವನಾದ ನಾನೇ ನುಡಿದಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನೈಲ್ ನದಿಯನ್ನು ನಾನು ಒಣನೆಲವನ್ನಾಗಿ ಮಾಡುವೆನು. ಆ ಒಣನೆಲವನ್ನು ನಾನು ಕೆಟ್ಟ ಜನರಿಗೆ ಮಾರುವೆನು. ಆ ದೇಶವನ್ನು ಬಂಜರು ಭೂಮಿಯನ್ನಾಗಿ ಮಾಡಲು ನಾನು ಪರದೇಶಸ್ಥರನ್ನು ಉಪಯೋಗಿಸುವೆನು. ನನ್ನ ಒಡೆಯನಾದ ಯೆಹೋವನು ಮಾತನಾಡಿದ್ದಾನೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಇದಲ್ಲದೆ ನಾನು ನದಿಗಳನ್ನು ಒಣಗಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು. ದೇಶವನ್ನೂ ಅದರಲ್ಲಿನ ಸಮಸ್ತವನ್ನೂ ವಿದೇಶಿಯರ ಕೈಯಿಂದ ನಾಶಮಾಡಿಸುವೆನು. ಯೆಹೋವ ದೇವರಾದ ನಾನೇ ಇದನ್ನು ನುಡಿದಿದ್ದೇನೆ. ಅಧ್ಯಾಯವನ್ನು ನೋಡಿ |