Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 30:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ನೋಫಿನ ವಿಗ್ರಹಗಳನ್ನೆಲ್ಲ ಒಡೆದು ಕೊನೆಗಾಣಿಸುವೆನು; ಐಗುಪ್ತ ದೇಶದಲ್ಲಿ ಇನ್ನು ಯಾವ ಅರಸನೂ ಇರಲಾರನು; ನಾನು ಆ ದೇಶಕ್ಕೆ ಭಯವನ್ನು ಉಂಟುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನಾನು ಮೆಂಫೀಸ್‍ನ ವಿಗ್ರಹಗಳನ್ನೆಲ್ಲ ಒಡೆದು, ಕೊನೆಗಾಣಿಸುವೆನು; ಈಜಿಪ್ಟ್ ದೇಶದಲ್ಲಿ ಇನ್ನು ಯಾವ ಪ್ರಭುವೂ ಇರನು; ನಾನು ಆ ದೇಶಕ್ಕೆ ಭಯವನ್ನೊಡ್ಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ನೋಫಿನ ಬೊಂಬೆಗಿಂಬೆಗಳನ್ನೆಲ್ಲ ಒಡೆದು ಕೊನೆಗಾಣಿಸುವೆನು; ಐಗುಪ್ತದೇಶದಲ್ಲಿ ಇನ್ನು ಯಾವ ಪ್ರಭುವೂ ಇರನು; ನಾನು ಆ ದೇಶಕ್ಕೆ ಭಯವನ್ನೊಡ್ಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಈಜಿಪ್ಟಿನಲ್ಲಿರುವ ವಿಗ್ರಹಗಳನ್ನು ನಾನು ನಾಶಮಾಡುವೆನು. ಮೆಂಫೀಸಿನ ವಿಗ್ರಹಗಳನ್ನು ತೆಗೆದುಬಿಡುವೆನು. ಈಜಿಪ್ಟಿನಲ್ಲಿ ಇನ್ನು ಮುಂದೆ ರಾಜನಿರನು. ಅವರಲ್ಲಿ ಭಯವನ್ನು ಹುಟ್ಟಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನಾನು ಮೂರ್ತಿಗಳನ್ನು ನಾಶಮಾಡುವೆನು. ಮತ್ತು ನೋಫಿನ ವಿಗ್ರಹಗಳನ್ನು ಕೊನೆಗೊಳಿಸುವೆನು. ಈಜಿಪ್ಟ್ ದೇಶದ ರಾಜಕುಮಾರ ಇನ್ನು ಮುಂದೆ ಇರುವುದಿಲ್ಲ, ನಾನು ಈಜಿಪ್ಟ್ ದೇಶದಲ್ಲಿ ಭಯವನ್ನು ಉಂಟುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 30:13
18 ತಿಳಿವುಗಳ ಹೋಲಿಕೆ  

ಅವರು ಕಷ್ಟವೆಂಬ ಕಡಲನ್ನು ದಾಟಿ ಬರುವರು, ಅಲ್ಲಕಲ್ಲೋಲವಾದ ಸಮುದ್ರವನ್ನು ಭೇದಿಸಿಬಿಡುವರು, ನೈಲ್ ನದಿಯೆಲ್ಲಾ ತಳದ ತನಕ ಒಣಗುವುದು. ಅಶ್ಶೂರದ ಗರ್ವವು ತಗ್ಗಿಸಲ್ಪಡುವುದು, ಐಗುಪ್ತದ ರಾಜದಂಡವು ತಪ್ಪಿಹೋಗುವುದು.


“ಐಗುಪ್ತದಲ್ಲಿ ಪ್ರಕಟಿಸಿರಿ, ಮಿಗ್ದೋಲ್, ತಹಪನೇಸ್, ನೋಫ್, ಎಂಬ ಪಟ್ಟಣಗಳಲ್ಲಿ ಪ್ರಚುರಪಡಿಸಿರಿ, ‘ಐಗುಪ್ತವೇ, ಸ್ಥಿರವಾಗಿ ನಿಂತುಕೊಂಡು ಸನ್ನದ್ಧವಾಗು! ಖಡ್ಗವು ನಿನ್ನ ಸುತ್ತಲು ನುಂಗಿಬಿಟ್ಟಿದೆ’ ಎಂದು ಸಾರಿರಿ.


ನೋಫ್ ಮತ್ತು ತಹಪನೇಸ್ ಪಟ್ಟಣಗಳವರು ನಿನ್ನ ನೆತ್ತಿಯನ್ನೂ ನುಣ್ಣಗೆ ಮೇದುಬಿಟ್ಟಿದ್ದಾರೆ.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ನಾನು ವಿಗ್ರಹಗಳನ್ನು ದೇಶದೊಳಗಿಂದ ನಿರ್ನಾಮಮಾಡುವೆನು, ಅವು ಇನ್ನು ಯಾರ ನೆನಪಿಗೂ ಬರುವುದಿಲ್ಲ; ಅಲ್ಲದೆ ಸುಳ್ಳು ಪ್ರವಾದಿಗಳನ್ನೂ, ದುರಾತ್ಮವನ್ನೂ ದೇಶದೊಳಗಿಂದ ತೊಲಗಿಸಿಬಿಡುವೆನು.


ಯೆಹೋವನು ಅವರಿಗೆ ಭಯಂಕರನಾಗುವನು; ಲೋಕದ ದೇವರುಗಳನ್ನೆಲ್ಲಾ ನಾಶಮಾಡುವನು; ಸಮಸ್ತ ಜನರು, ಪ್ರತಿಯೊಂದು ಪ್ರಾಂತ್ಯದ ನಿವಾಸಿಗಳು ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು.


ಆಹಾ, ಅವರು ವಿನಾಶದ ದೇಶವನ್ನು ಬಿಟ್ಟುಹೋಗುವರು; ಐಗುಪ್ತವು ಅವರಿಗೆ ಸ್ಮಶಾನವಾಗುವುದು, ಮೋಫ್ ಪಟ್ಟಣವು ಅವರನ್ನು ಹೂಣಿಡುವುದು; ಅವರ ಇಷ್ಟದ ಬೆಳ್ಳಿಯ ಒಡವೆಗಳು ಮುಳ್ಳು ಪೊದೆಗಳ ಪಾಲಾಗುವವು; ಮುಳ್ಳುಗಿಡಗಳು ಅವರ ಗುಡಾರಗಳಲ್ಲಿ ಹುಟ್ಟಿಕೊಳ್ಳುವವು.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ನೋ ಎಂಬ ಪಟ್ಟಣದಲ್ಲಿನ ಆಮೋನ್ ದೇವತೆ, ಫರೋಹ, ಐಗುಪ್ತ, ಐಗುಪ್ತದ ದೇವತೆಗಳು, ಅಲ್ಲಿನ ಅರಸರು, ಅಂತು ಫರೋಹನನ್ನೂ, ಅವನಲ್ಲಿ ನಂಬಿಕೆಯಿಟ್ಟವರನ್ನೂ ದಂಡಿಸುವೆನು.


ಆಹಾ, ನನ್ನ ಕಣ್ಣಿಗೆ ಬಿದ್ದದ್ದೇನು? ಅವರು ಧೈರ್ಯಗೆಟ್ಟು ಬೆನ್ನುಕೊಟ್ಟಿದ್ದಾರೆ. ಅವರ ಶೂರರು ಪೆಟ್ಟುತಿಂದು ಹಿಂದಿರುಗದೆ ಓಡಿಹೋಗುತ್ತಾರೆ; ಸುತ್ತಮುತ್ತಲು ದಿಗಿಲು ಎಂದು ಯೆಹೋವನು ಅನ್ನುತ್ತಾನೆ.


ನಾನು ಐಗುಪ್ತದ ದೇವಾಲಯಗಳಲ್ಲಿ ಬೆಂಕಿಹೊತ್ತಿಸುವೆನು, ಅವನು ಅವುಗಳನ್ನು ಸುಟ್ಟು ದೇವತೆಗಳನ್ನು ಸೆರೆ ಒಯ್ಯುವನು; ಕುರುಬನು ತನ್ನ ಕಂಬಳಿಯನ್ನು ಸುತ್ತಿಕೊಳ್ಳುವಂತೆ ಅವನು ಐಗುಪ್ತ ದೇಶವನ್ನು ಸುತ್ತಿಕೊಳ್ಳುವನು; ಸಮಾಧಾನವಾಗಿ ಅಲ್ಲಿಂದ ಹೊರಟು ಹೋಗುವನು.


ಆ ರಾತ್ರಿ ನಾನು ಐಗುಪ್ತದೇಶದ ಮೇಲೆ ಹಾದುಹೋಗಿ ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ, ಚೊಚ್ಚಲಾಗಿರುವುದನ್ನೆಲ್ಲಾ ಸಂಹರಿಸುವೆನು. ಐಗುಪ್ತ ದೇಶದ ಸಮಸ್ತ ದೇವತೆಗಳಿಗೂ ನ್ಯಾಯತೀರಿಸುವೆನು. ನಾನೇ ಯೆಹೋವನು.


ವಿಗ್ರಹಗಳು ಸಂಪೂರ್ಣವಾಗಿ ನಾಶವಾಗಿ ಹೋಗುವವು.


ಐಗುಪ್ತ ದೇಶದ ಮಿಗ್ದೋಲ್, ತಹಪನೇಸ್, ನೋಫ್ ಎಂಬ ಪಟ್ಟಣಗಳಲ್ಲಿಯೂ, ಪತ್ರೋಸ್ ಪ್ರಾಂತ್ಯದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ,


ಐಗುಪ್ತದಲ್ಲಿ ವಾಸಿಸುವ ಯುವತಿಯೇ, ಸೆರೆಗೆ ಬೇಕಾದ ಸಾಮಗ್ರಿಗಳನ್ನು ಒದಗಿಸಿಕೋ; ನೋಫ್ ಪಟ್ಟಣವು ಹಾಳಾಗಿ ಸುಟ್ಟು ನಿರ್ಜನವಾಗುವುದು.


ನಾನು ಐಗುಪ್ತಕ್ಕೆ ಕಿಚ್ಚನ್ನು ಹತ್ತಿಸಲು ಸೀನು ಪ್ರಾಣ ಸಂಕಟಪಡುವುದು; ನೋಪುರವು ಭಂಗಕ್ಕೆ ಈಡಾಗುವುದು; ನೋಫಿನ ಮೇಲೆ ವೈರಿಗಳು ಮಧ್ಯಾಹ್ನದಲ್ಲೇ ಬೀಳುವರು.


ನೀವು ಅವುಗಳಿಗೆ, “ಭೂಮ್ಯಾಕಾಶಗಳನ್ನು ಸೃಷ್ಟಿಸದಿರುವ ದೇವರುಗಳು ಭೂಮಿಯ ಮೇಲಿನಿಂದ, ಆಕಾಶದ ಕೆಳಗಿನಿಂದ, ಅಳಿದುಹೋಗುವವು” ಎಂದು ಹೇಳಿರಿ.


ಐಗುಪ್ತ ದೇಶದಲ್ಲಿರುವ ಸೂರ್ಯಪುರಿಯ ಸ್ತಂಭಗಳನ್ನು ಒಡೆದುಹಾಕಿ, ಐಗುಪ್ತದ ದೇವಾಲಯಗಳನ್ನು ಬೆಂಕಿಯಿಂದ ಸುಟ್ಟುಬಿಡುವನು.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು