Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 30:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾನು ಪತ್ರೋಸನ್ನು ಹಾಳುಮಾಡಿ, ಚೋವನಿಗೆ ಬೆಂಕಿಯಿಡುವೆನು. ನೋಪುರವನ್ನು ದಂಡಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಾನು ದಕ್ಷಿಣ ಈಜಿಪ್ಟನ್ನು ಹಾಳುಮಾಡಿ, ಚೋವನಿಗೆ ಬೆಂಕಿಯಿಕ್ಕಿ, ತೆಬೆಸಿನ ರಾಜಧಾನಿಯನ್ನು ದಂಡಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾನು ಪತ್ರೋಸನ್ನು ಹಾಳುಮಾಡಿ ಚೋವನಿಗೆ ಬೆಂಕಿಯಿಕ್ಕಿ ನೋಪುರವನ್ನು ದಂಡಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಪತ್ರೋಸನ್ನು ನಾನು ಬರಿದಾಗಿ ಮಾಡುವೆನು. ಸೋನಿನಲ್ಲಿ ಬೆಂಕಿಯನ್ನು ಬರಮಾಡುವೆನು. ತೆಬೆಸವನ್ನು ನಾನು ಶಿಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾನು ಪತ್ರೋಸನ್ನು ನಾಶಮಾಡಿ, ಚೋವನ್ ಪಟ್ಟಣಕ್ಕೆ ಬೆಂಕಿಯಿಡುವೆನು. ತೆಬೆಸ್ ಪಟ್ಟಣವನ್ನು ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 30:14
17 ತಿಳಿವುಗಳ ಹೋಲಿಕೆ  

ಐಗುಪ್ತದ ದುರವಸ್ಥೆಯನ್ನು ತಪ್ಪಿಸಿ, ಅವರ ಜನ್ಮ ಭೂಮಿಯಾದ ಪತ್ರೋಸ್ ದೇಶಕ್ಕೆ ಪುನಃ ಬರಮಾಡುವೆನು; ಅಲ್ಲೇ ಅವರು ಕನಿಷ್ಠ ರಾಜ್ಯದವರಾಗಿರುವರು.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ನೋ ಎಂಬ ಪಟ್ಟಣದಲ್ಲಿನ ಆಮೋನ್ ದೇವತೆ, ಫರೋಹ, ಐಗುಪ್ತ, ಐಗುಪ್ತದ ದೇವತೆಗಳು, ಅಲ್ಲಿನ ಅರಸರು, ಅಂತು ಫರೋಹನನ್ನೂ, ಅವನಲ್ಲಿ ನಂಬಿಕೆಯಿಟ್ಟವರನ್ನೂ ದಂಡಿಸುವೆನು.


ಆತನು ಐಗುಪ್ತದಲ್ಲಿ ಮಾಡಿದ ಮಹತ್ಕಾರ್ಯಗಳನ್ನು, ಸೋನ್ ಸೀಮೆಯಲ್ಲಿ ನಡೆಸಿದ ಅದ್ಭುತಗಳನ್ನೂ ಮರೆತುಬಿಟ್ಟರು.


ಆತನು ಐಗುಪ್ತದೇಶದ ಸೋನ್ ಸೀಮೆಯಲ್ಲಿ, ಅವರ ಪೂರ್ವಿಕರ ಸಮಕ್ಷದಲ್ಲಿಯೇ ಆಶ್ಚರ್ಯ ಕ್ರಿಯೆಗಳನ್ನು ನಡೆಸಿದನು.


ನೀನು ನೋ ಆಮೋನ್ ಪಟ್ಟಣಗಿಂತ ಭದ್ರವಾಗಿದ್ದೀಯೋ? ಅದು ನೈಲಿನ ಪ್ರವಾಹಗಳಲ್ಲಿ ನೆಲೆಯಾಗಿತ್ತು. ನೀರು ಅದನ್ನು ಸುತ್ತಿಕೊಂಡಿತ್ತು, ಮಹಾ ನದಿಯು ಅದಕ್ಕೆ ಪೌಳಿಗೋಡೆ, ಜಲಾಶಯವು ಅದರ ದುರ್ಗ.


ಚೋಯನಿನ ಪ್ರಭುಗಳು ಕೇವಲ ಬುದ್ಧಿಹೀನರು. ಫರೋಹನ ಮಂತ್ರಿಗಳಲ್ಲಿ ಜ್ಞಾನವುಳ್ಳ ಸಲಹೆಗಾರರ ಆಲೋಚನೆಯೂ ಜ್ಞಾನರಹಿತವಾಗಿರುತ್ತದೆ. ನೀನು ಫರೋಹನಿಗೆ, “ನಾನು ಜ್ಞಾನಿಗಳ ಸಂತಾನದವನು, ಪುರಾತನ ರಾಜನ ವಂಶದವನು? ಎಂದು ಹೇಗೆ ತಾನೆ ಹೇಳಿಕೊಳ್ಳುವಿರಿ.


ಅವರು ಬೆಟ್ಟವನ್ನು ಹತ್ತಿ ಕಾನಾನ್ ದೇಶದ ದಕ್ಷಿಣ ಪ್ರಾಂತ್ಯವನ್ನು ದಾಟಿ ಹೆಬ್ರೋನಿಗೆ ಬಂದರು. ಅಲ್ಲಿ ಅಹೀಮನ್, ಶೇಷೈ, ತಲ್ಮೈ ಎಂಬ ಉನ್ನತ ಪುರುಷರು ಇದ್ದರು. ಹೆಬ್ರೋನ್ ಪಟ್ಟಣವು ಐಗುಪ್ತ ದೇಶದಲ್ಲಿರುವ ಚೋವನ್ ಪಟ್ಟಣಕ್ಕಿಂತ ಏಳು ವರ್ಷ ಮೊದಲು ನಿರ್ಮಿಸಲಾಗಿತ್ತು.


ಆ ಫರೋಹನ ಪ್ರಧಾನರು ಚೋವನಿನಲ್ಲಿದ್ದರೂ, ಅವನ ದೂತರು ಹಾನೇಸಿಗೆ ಬಂದಿದ್ದಾರೆ.


ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.


ಚೋಯನಿನ ಪ್ರಭುಗಳು ಮೂರ್ಖರಾಗಿದ್ದಾರೆ. ನೋಫಿನ ಪ್ರಧಾನರು ಮೋಸ ಹೋಗಿದ್ದಾರೆ. ಐಗುಪ್ತದ ಕುಲಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿದ್ದಾರೆ.


ಐಗುಪ್ತ ದೇಶದ ಮಿಗ್ದೋಲ್, ತಹಪನೇಸ್, ನೋಫ್ ಎಂಬ ಪಟ್ಟಣಗಳಲ್ಲಿಯೂ, ಪತ್ರೋಸ್ ಪ್ರಾಂತ್ಯದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ,


“ಆಗ ತಮ್ಮ ಹೆಂಡತಿಯರು ಅನ್ಯದೇವತೆಗಳಿಗೆ ಧೂಪಹಾಕುತ್ತಿದ್ದರೆಂದು ತಿಳಿದುಕೊಂಡಿದ್ದ ಗಂಡಸರು, ಅಲ್ಲಿ ದೊಡ್ಡ ಗುಂಪಾಗಿ ನಿಂತುಕೊಂಡಿದ್ದ ಹೆಂಗಸರು ಅಂತು ಐಗುಪ್ತದಲ್ಲಿಯೂ, ಪತ್ರೋಸಿನಲ್ಲಿಯೂ ವಾಸವಾಗಿದ್ದವರೆಲ್ಲರೂ ಯೆರೆಮೀಯನಿಗೆ” ಹೀಗೆ ಹೇಳಿದರು,


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಐಗುಪ್ತ ದೇಶವನ್ನು ಕೊಡುತ್ತೇನೆ; ಅವನು ಅದರ ಜನಸಮೂಹವನ್ನೂ, ಅದರ ಕೊಳ್ಳೆಯನ್ನೂ, ಅದರ ಸುಲಿಗೆಯನ್ನೂ ಸೂರೆಮಾಡುವನು; ಇದೇ ಅವನ ಸೈನ್ಯಕ್ಕೆ ಸಿಕ್ಕುವ ಪ್ರತಿಫಲವಾಗುವುದು.


“‘ನಾನು ಐಗುಪ್ತಕ್ಕೆ ಬೆಂಕಿ ಹಚ್ಚಿ ಅದರ ಸಹಾಯಕರನ್ನೆಲ್ಲಾ ನಾಶಮಾಡಿದ ಮೇಲೆ ನಾನೇ ಯೆಹೋವನು’ ಎಂದು ಅವರಿಗೆ ಗೊತ್ತಾಗುವುದು.


“ಐಗುಪ್ತಕ್ಕೆ ರಕ್ಷಣೆಯ ಕೋಟೆಯಾದ ಸೀನಿನ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನೋಪುರದ ನಿವಾಸಿಗಳನ್ನೆಲ್ಲಾ ಕತ್ತರಿಸಿ ಬಿಡುವೆನು.


ನಾನು ಐಗುಪ್ತಕ್ಕೆ ಕಿಚ್ಚನ್ನು ಹತ್ತಿಸಲು ಸೀನು ಪ್ರಾಣ ಸಂಕಟಪಡುವುದು; ನೋಪುರವು ಭಂಗಕ್ಕೆ ಈಡಾಗುವುದು; ನೋಫಿನ ಮೇಲೆ ವೈರಿಗಳು ಮಧ್ಯಾಹ್ನದಲ್ಲೇ ಬೀಳುವರು.


ಹೀಗೆ ನಾನು ಐಗುಪ್ತ್ಯರಿಗೆ ದಂಡನೆಗಳನ್ನು ವಿಧಿಸಿ ತೀರಿಸುವಾಗ ನಾನೇ ಯೆಹೋವನು” ಎಂದು ಅವರಿಗೆ ಗೊತ್ತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು