ಯೆಹೆಜ್ಕೇಲನು 30:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ನಾನು ಬಾಬೆಲಿನ ಅರಸನ ಕೈಗಳನ್ನು ಬಲಪಡಿಸುವೆನು; ಫರೋಹನ ಕೈಗಳಾದರೋ ಜೋಲುಬೀಳುವವು; ನಾನು ನನ್ನ ಖಡ್ಗವನ್ನು ಬಾಬೆಲಿನ ಅರಸನಿಗೆ ಕೊಡಲು ಅವನು ಅದನ್ನು ಐಗುಪ್ತ ದೇಶದ ಮೇಲೆ ಎತ್ತುವನು. ಆಗ ನಾನೇ ಯೆಹೋವನು” ಎಂದು ಎಲ್ಲರಿಗೂ ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ನಾನು ಬಾಬಿಲೋನಿನ ಅರಸನ ಕೈಗಳನ್ನು ಬಲಪಡಿಸುವೆನು; ಫರೋಹನ ಕೈಗಳಾದರೋ ಜೋಲುಬೀಳುವುವು; ನಾನು ನನ್ನ ಖಡ್ಗವನ್ನು ಬಾಬಿಲೋನಿನ ಅರಸನಿಗೆ ಎತ್ತುವೆನು. ಅವನು ಅದನ್ನು ಈಜಿಪ್ಟ್ ದೇಶದ ಮೇಲೆ ಎತ್ತುವನು. ಆಗ ನಾನೇ ಸರ್ವೇಶ್ವರ ಎಂದು ಎಲ್ಲರಿಗೆ ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ನಾನು ಬಾಬೆಲಿನ ಅರಸನ ಕೈಗಳನ್ನು ಬಲಪಡಿಸುವೆನು; ಫರೋಹನ ಕೈಗಳಾದರೋ ಜೋಲುಬೀಳುವವು; ನಾನು ನನ್ನ ಖಡ್ಗವನ್ನು ಬಾಬೆಲಿನ ಅರಸನಿಗೆ ಕೊಡಲು ಅವನು ಅದನ್ನು ಐಗುಪ್ತದೇಶದ ಮೇಲೆ ಎತ್ತುವನು. ಆಗ ನಾನೇ ಯೆಹೋವನು ಎಂದು ಎಲ್ಲರಿಗೆ ಗೊತ್ತಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ನಾನು ಬಾಬಿಲೋನಿನ ರಾಜನ ಕೈಗಳನ್ನು ಬಲಪಡಿಸುವೆನು. ಫರೋಹನ ಕೈಗಳು ಜೋಲುಬೀಳುವವು. ಆಗ ಅವರು ನಾನೇ ಯೆಹೋವನೆಂದು ತಿಳಿಯುವರು. “ನನ್ನ ಖಡ್ಗವನ್ನು ನಾನು ಬಾಬಿಲೋನ್ ರಾಜನ ಕೈಗಳಲ್ಲಿ ಇಡುವೆನು. ಆಗ ಅವನು ಈಜಿಪ್ಟಿನ ಕಡೆಗೆ ಅದನ್ನು ಚಾಚುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ನಾನು ಬಾಬಿಲೋನಿನ ಅರಸನ ಕೈಗಳನ್ನು ಬಲಪಡಿಸುತ್ತೇನೆ, ಆದರೆ ಫರೋಹನ ಕೈಗಳು ಬಲಹೀನವಾಗುವುವು. ನಾನು ನನ್ನ ಖಡ್ಗವನ್ನು ಬಾಬಿಲೋನಿನ ಅರಸನ ಕೈಗೆ ಕೊಡುವೆನು. ಅವನು ಅದನ್ನು ಈಜಿಪ್ಟಿನ ವಿರೋಧವಾಗಿ ಪ್ರಯೋಗಿಸುವನು. ಆಗ ಅವರು ನಾನೇ ಯೆಹೋವ ದೇವರು ಎಂದು ತಿಳಿದುಕೊಳ್ಳುವರು. ಅಧ್ಯಾಯವನ್ನು ನೋಡಿ |