ಯೆಹೆಜ್ಕೇಲನು 30:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಖಡ್ಗವು ಐಗುಪ್ತದ ಮೇಲೆ ಬೀಳುವುದು; ಅಲ್ಲಿನ ಪ್ರಜೆಗಳು ಹತರಾಗಲು ಕೂಷಿನಲ್ಲಿಯೂ ಸಂಕಟವಾಗುವುದು; ಐಗುಪ್ತದ ಜನಸಮೂಹವು ಒಯ್ಯಲ್ಪಡುವುದು, ಅದರ ಅಸ್ತಿವಾರವು ಮುರಿದು ಹಾಳಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಖಡ್ಗವು ಈಜಿಪ್ಟಿನ ಮೇಲೆ ಬೀಳುವುದು; ಅಲ್ಲಿ ಪ್ರಜೆಗಳು ಹತರಾಗಲು ಸುಡಾನಿನಲ್ಲಿಯೂ ಸಂಕಟವಾಗುವುದು; ಈಜಿಪ್ಟಿನಲ್ಲಿ ಹಲವರು ಸತ್ತುಬೀಳುವರು, ಅದರ ಅಸ್ತಿಭಾರ ಹಾಳಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಖಡ್ಗವು ಐಗುಪ್ತದ ಮೇಲೆ ಬೀಳುವದು; ಅಲ್ಲಿನ ಪ್ರಜೆಗಳು ಹತರಾಗಲು ಕೂಷಿನಲ್ಲಿಯೂ ಸಂಕಟವಾಗುವದು ; ಐಗುಪ್ತದ ಲಕ್ಷೋಪಲಕ್ಷ ಪ್ರಜೆಯು ಒಯ್ಯಲ್ಪಡುವದು; ಅದರ ಅಸ್ತಿವಾರವು ಹಾಳಾಗುವದು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಈಜಿಪ್ಟಿಗೆ ವಿರುದ್ಧವಾಗಿ ಒಂದು ಖಡ್ಗವು ಬರುವದು! ಈಜಿಪ್ಟ್ ಬೀಳುವಾಗ ಇಥಿಯೋಪ್ಯವು ಭಯದಿಂದ ನಡುಗುವದು. ಬಾಬಿಲೋನಿನ ಸೈನ್ಯವು ಈಜಿಪ್ಟಿನವರನ್ನು ಸೆರೆ ಹಿಡಿದುಕೊಂಡು ಹೋಗುವದು. ಈಜಿಪ್ಟಿನ ಅಡಿಪಾಯಗಳು ಒಡೆದುಹೋಗುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಖಡ್ಗವು ಈಜಿಪ್ಟಿಗೆ ವಿರುದ್ಧವಾಗಿ ಬರುವುದು. ಕೂಷ್ ಪಟ್ಟಣವು ಸಂಕಟಪಡುವುದು. ಈಜಿಪ್ಟಿನಲ್ಲಿ ಕೊಲ್ಲಲಾದವರು ಬಿದ್ದಾಗ, ಅವಳ ಸಂಪತ್ತು ಸೂರೆಯಾಗುವುದು. ಅವಳ ಅಡಿಪಾಯಗಳು ಕಿತ್ತುಹೋಗುವವು. ಅಧ್ಯಾಯವನ್ನು ನೋಡಿ |