Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 30:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹಾಳಾಗಿರುವ ದೇಶಗಳೊಳಗೆ ಆ ದೇಶವೂ ಹಾಳಾಗಿರುವುದು, ಪಾಳುಬಿದ್ದಿರುವ ಪಟ್ಟಣಗಳೊಳಗೆ ಅದರ ಪಟ್ಟಣಗಳೂ ಪಾಳು ಬಿದ್ದಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಹಾಳಾದ ದೇಶಗಳಲ್ಲಿ ಈ ದೇಶವೂ ಹಾಳಾಗುವುದು. ಪಾಳುಬಿದ್ದಿರುವ ಪಟ್ಟಣಗಳಲ್ಲಿ ಅದರ ಪಟ್ಟಣಗಳೂ ಪಾಳುಬಿದ್ದಿರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹಾಳಾಗಿರುವ ದೇಶಗಳೊಳಗೆ ಆ ದೇಶವೂ ಹಾಳಾಗಿರುವದು, ಪಾಳುಬಿದ್ದಿರುವ ಪಟ್ಟಣಗಳೊಳಗೆ ಅದರ ಪಟ್ಟಣಗಳೂ ಪಾಳುಬಿದ್ದಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾಶಮಾಡಲ್ಪಟ್ಟ ಬೇರೆ ದೇಶಗಳನ್ನು ಈಜಿಪ್ಟ್ ಸೇರಿಕೊಳ್ಳುವುದು. ಈಜಿಪ್ಟ್ ಬಂಜರು ದೇಶಗಳಲ್ಲೊಂದಾಗುವುದು. ಬಾಬಿಲೋನಿನ ಸೈನ್ಯವು ಈಜಿಪ್ಟಿನ ಮೇಲೆ ಯುದ್ಧಮಾಡುವದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಅವರು ಹಾಳಾಗಿರುವ ದೇಶಗಳೊಳಗೆ ತಾವೂ ಹಾಳಾಗುವರು. ಹಾಳಾದ ಪಟ್ಟಣಗಳ ಮಧ್ಯದಲ್ಲಿ ಅದರ ಪಟ್ಟಣಗಳು ಹಾಳಾಗಿ ಇರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 30:7
5 ತಿಳಿವುಗಳ ಹೋಲಿಕೆ  

ಹಾಳು ಬಿದ್ದಿರುವ ದೇಶಗಳ ಮಧ್ಯದಲ್ಲಿ ಐಗುಪ್ತ ದೇಶವನ್ನೂ ಹಾಳುಮಾಡುವೆನು; ಪಾಳುಬಿದ್ದಿರುವ ಪಟ್ಟಣಗಳೊಳಗೆ ಅದರ ಪಟ್ಟಣಗಳನ್ನೂ ಪಾಳುಬೀಳಿಸುವೆನು; ನಲ್ವತ್ತು ವರ್ಷ ಹಾಗೆಯೇ ಇರುವುದು; ನಾನು ಐಗುಪ್ತ್ಯರನ್ನು ಜನಾಂಗಗಳಲ್ಲಿ ಚದುರಿಸಿ, ದೇಶದೇಶಗಳಲ್ಲಿ ಚದುರಿಸುವೆನು.’”


ಈ ನದಿಯು ನನ್ನದೇ, ನಾನೇ ಅದನ್ನು ನಿರ್ಮಿಸಿದವನೆಂದು ಅಂದುಕೊಂಡ ಕಾರಣ ಐಗುಪ್ತ ದೇಶವು ಹಾಳಾಗುವುದು. ಆಗ ನಾನೇ ಯೆಹೋವನು’ ಎಂದು ಅವರಿಗೆ ಗೊತ್ತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು