Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 31:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ಜನಾಂಗಗಳಲ್ಲಿ ಭಯಂಕರವಾದ ಅನ್ಯರು ಅದನ್ನು ಕಡಿದುಹಾಕಿ ಬಿಟ್ಟಿದ್ದಾರೆ. ಅದರ ರೆಂಬೆಗಳು ಗುಡ್ಡಗಳಲ್ಲಿಯೂ, ಎಲ್ಲಾ ಹಳ್ಳಕೊಳ್ಳಗಳಲ್ಲಿಯೂ ಬಿದ್ದಿವೆ; ಅದರ ಕೊಂಬೆಗಳು ದೇಶದ ಎಲ್ಲಾ ಹಳ್ಳಗಳ ಹತ್ತಿರ ಮುರಿದುಹಾಕಲ್ಪಟ್ಟಿವೆ; ಲೋಕದ ಸಮಸ್ತ ಜನಾಂಗಗಳು ಅದರ ನೆರಳಿನಿಂದ ದೂರ ಸರಿದು ಅದನ್ನು ಬಿಟ್ಟುಬಿಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅತಿಭಯಂಕರ ರಾಷ್ಟ್ರದವರಾದ ಮ್ಲೇಚ್ಛರು ಅದನ್ನು ಕಡಿದುಹಾಕಿ ಹೋಗಿಬಿಟ್ಟಿದ್ದಾರೆ; ಅದರ ರೆಂಬೆಗಳು ಗುಡ್ಡಗಳಲ್ಲೂ ಎಲ್ಲ ಹಳ್ಳಕೊಳ್ಳಗಳಲ್ಲೂ ಬಿದ್ದಿವೆ; ಅದರ ಕೊಂಬೆಗಳು ದೇಶದ ಎಲ್ಲ ತೊರೆಗಳ ಹತ್ತಿರ ಮುರಿದುಬಿದ್ದಿವೆ; ಲೋಕದ ಸಮಸ್ತ ಜನಾಂಗಗಳು ಅದರ ನೆರಳಿನಿಂದ ತೊಲಗಿಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅತಿಭಯಂಕರ ಜನಾಂಗದವರಾದ ಮ್ಲೇಚ್ಫರು ಅದನ್ನು ಕಡಿದುಹಾಕಿ ಹೋಗಿಬಿಟ್ಟಿದ್ದಾರೆ; ಅದರ ರೆಂಬೆಗಳು ಗುಡ್ಡಗಳಲ್ಲಿಯೂ ಎಲ್ಲಾ ಹಳ್ಳಕೊಳ್ಳಗಳಲ್ಲಿಯೂ ಬಿದ್ದಿವೆ; ಅದರ ಕೊಂಬೆಗಳು ದೇಶದ ಎಲ್ಲಾ ತೊರೆಗಳ ಹತ್ತಿರ ಮುರಿದುಹಾಕಲ್ಪಟ್ಟಿವೆ; ಲೋಕದ ಸಮಸ್ತಜನಾಂಗಗಳು ಅದರ ನೆರಳಿನಿಂದ ತೊಲಗಿ ಅದನ್ನು ಬಿಟ್ಟುಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಪರದೇಶದ ಕ್ರೂರ ಜನರು ಅದನ್ನು ಕಡಿದು ಅದರ ರೆಂಬೆಗಳನ್ನೆಲ್ಲಾ ಬೆಟ್ಟ, ಬಯಲು, ತಗ್ಗುಗಳಲ್ಲಿ ಚದರಿಸಿಬಿಟ್ಟರು. ಅದರ ಮುರಿಯಲ್ಪಟ್ಟ ಕೊಂಬೆಗಳು ಆ ದೇಶದಲ್ಲಿ ಹರಿಯುವ ನದಿಯಲ್ಲಿ ತೇಲಿದವು. ಆ ಮರದಡಿಯಲ್ಲಿ ಈಗ ನೆರಳು ಇಲ್ಲ. ಆದ್ದರಿಂದ ಅಲ್ಲಿ ವಾಸವಾಗಿದ್ದ ಜನರೆಲ್ಲಾ ಅಲ್ಲಿಂದ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಜನಾಂಗಗಳಲ್ಲಿ ಭಯಂಕರವಾದ ವಿದೇಶಿಯರು ಅದನ್ನು ಕಡಿದುಹಾಕುವರು. ಎಲ್ಲಾ ಬೆಟ್ಟಗಳ ಮೇಲೆಯೂ ತಗ್ಗುಗಳಲ್ಲಿಯೂ ಅದರ ಕೊಂಬೆಗಳು ಬೀಳುವುವು. ದೇಶದ ಹಳ್ಳಗಳಲ್ಲೆಲ್ಲಾ ಅದರ ರೆಂಬೆಗಳು ಮುರಿದು ಹೋಗುವುವು. ಭೂಮಿಯ ಜನಗಳೆಲ್ಲಾ ಅದರ ನೆರಳಿನಿಂದ ದೂರ ಸರಿದು ಅದನ್ನು ಬಿಟ್ಟುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 31:12
17 ತಿಳಿವುಗಳ ಹೋಲಿಕೆ  

ಆದುದರಿಂದ ನಾನು ನಿನ್ನ ಮೇಲೆ ಭಯಂಕರವಾದ ಜನಾಂಗದವರಾದ ಮ್ಲೇಚ್ಛರನ್ನು ಬೀಳಮಾಡುವೆನು; ಅವರು ನಿನ್ನ ಜ್ಞಾನದ ಸೊಬಗಿನ ವಿರುದ್ಧವಾಗಿ ಕತ್ತಿಯನ್ನು ಹಿರಿಯುವರು; ನಿನ್ನ ಪ್ರಕಾಶವನ್ನು ಕೆಡಿಸುವರು.


ಅದರ ಪರ್ವತಗಳನ್ನು ನಿನ್ನವರ ಹೆಣಗಳಿಂದ ತುಂಬಿಸುವೆನು; ಖಡ್ಗದಿಂದ ಹತರಾದವರು ನಿನ್ನ ಗುಡ್ಡಗಳಲ್ಲಿ, ಕಣಿವೆಗಳಲ್ಲಿ, ಹಳ್ಳಗಳಲ್ಲಿ ಬಿದ್ದುಹೋಗುವರು.


ಇಗೋ, ನಾನು ಶಕ್ತಿಶಾಲಿಗಳೂ, ತೀಕ್ಷ್ಣಬುದ್ಧಿಯುಳ್ಳವರೂ ಆಗಿರುವ ಕಸ್ದೀಯ ಜನಾಂಗದವರನ್ನು ನಿಮ್ಮ ವಿರುದ್ಧ ಹುರಿದುಂಬಿಸಿ ಎಬ್ಬಿಸುತ್ತೇನೆ; ಆ ಜನರು ಭಯಂಕರರೂ, ಉಗ್ರರೂ ಆಗಿ ತಮ್ಮದಲ್ಲದ ಸಂಸ್ಥಾನವನ್ನು ವಶಮಾಡಿಕೊಳ್ಳುವರು ಮತ್ತು ಲೋಕದಲ್ಲೆಲ್ಲಾ ಸಂಚರಿಸುವರು.


ಆ ದೇಶವನ್ನು ನಾಶಪಡಿಸಲಿಕ್ಕೆ ಅವನನ್ನು ಅತಿಭಯಂಕರ ಜನಾಂಗದವರಾದ ಅವನ ಸೈನಿಕರೊಡನೆ ಬರಮಾಡುವೆನು; ಅವರು ಐಗುಪ್ತದ ಮೇಲೆ ಕತ್ತಿ ಹಿರಿದು ದೇಶವನ್ನು ಹತರಾದವರಿಂದ ತುಂಬಿಸುವರು.


ಇದಲ್ಲದೆ ನೀನು ನೋಡಿದ ಹತ್ತು ಕೊಂಬುಗಳು ಮತ್ತು ಮೃಗವನ್ನು ಕಂಡೆಯಲ್ಲ? ಅವುಗಳು ಜಾರಸ್ತ್ರೀಯನ್ನು ದ್ವೇಷಿಸಿ, ಅವಳನ್ನು ಗತಿಯಿಲ್ಲದವಳನ್ನಾಗಿಯೂ ಬಟ್ಟೆ ಇಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು, ಅವಳನ್ನು ಬೆಂಕಿಯಲ್ಲಿ ಸುಟ್ಟುಬಿಡುವರು.


ಬಿರುಗಾಳಿಯಂತೆ ಬಂದು ಮಾಯವಾಗುವರು. ತಮ್ಮ ಸ್ವಂತ ಬಲವೇ ದೇವರು ಎಂದು ಭಾವಿಸಿ ಅಹಂಕಾರದಿಂದ ದೇವರನ್ನು ತಾತ್ಸಾರಮಾಡಿ ಅಪರಾಧಿಗಳಾಗಿ ದೈವಕೋಪಕ್ಕೆ ಗುರಿಯಾಗುವರು.


ನೀನೂ, ನಿನ್ನ ಎಲ್ಲಾ ಸೈನ್ಯದಳಗಳೂ ಮತ್ತು ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳಲ್ಲಿ ಬೀಳುವಿರಿ; ನಾನು ನಿಮ್ಮನ್ನು ಹದ್ದುಗಳಿಗೂ, ಪಕ್ಷಿಗಳಿಗೂ ಕಾಡಿನ ಮೃಗಗಳಿಗೂ, ಬಯಲಿನ ಭೂಜಂತುಗಳಿಗೂ ಆಹಾರವಾಗುವಂತೆ ನಾನು ನಿನ್ನನ್ನು ಕೊಡುವೆನು.


“‘ನೀನು ಇಸ್ರಾಯೇಲರ ಮೇಲೆ ದೀರ್ಘ ದ್ವೇಷವಿಟ್ಟು, ಅವರ ಅಪರಾಧದ ಕಡೆಯ ಕಾಲದಲ್ಲಿ ಆಪತ್ತು ಸಂಭವಿಸಿದಾಗ, ಅವರನ್ನು ಕತ್ತಿಯ ಬಾಯಿಗೆ ಗುರಿಮಾಡಿದೆ.


ನಾನು ನಿನ್ನ ಪ್ರಜೆಯನ್ನು ಅತಿಭಯಂಕರ ಜನಾಂಗದವರಾದ ಬಲಿಷ್ಠರ ಕತ್ತಿಗಳಿಂದ ಸಂಹರಿಸುವೆನು. ಅವರು ಐಗುಪ್ತದ ಮಹತ್ತನ್ನು ನಾಶ ಮಾಡುವರು. ಅದರ ಜನ ಸಮೂಹವೆಲ್ಲಾ ನಿರ್ನಾಮವಾಗುವುದು.


ಅನ್ಯರ ಕೈಯಿಂದ ಕೊಳ್ಳೆಹೊಡೆಯಿಸಿ ಲೋಕದ ಅತಿ ದುಷ್ಟರಿಂದ ಸೂರೆಮಾಡಿಸುವೆನು; ಅವರು ಅದನ್ನು ಹೊಲೆಗೊಳಿಸುವರು.


ನಾನು ನದಿಗಳನ್ನು ಒಣಗಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು. ಹೌದು, ದೇಶವನ್ನೂ, ಅದರಲ್ಲಿನ ಸಮಸ್ತವನ್ನೂ ಅನ್ಯರ ಕೈಯಿಂದ ಹಾಳುಮಾಡಿಸುವೆನು. ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.”


ಇದಲ್ಲದೆ ಅದಕ್ಕೆ ತೋಳಿನ ಬಲವಾಗಿ ಜನಾಂಗಗಳ ಮಧ್ಯದಲ್ಲಿ ಅದರ ನೆರಳನ್ನು ಆಶ್ರಯಿಸಿದವರು ಅದರೊಂದಿಗೆ ಪಾತಾಳಕ್ಕೆ ಇಳಿದು, ಖಡ್ಗದಿಂದ ಹತರಾದವರ ಜೊತೆಗೆ ಸೇರಿದರು.


ಆ ವೃಕ್ಷವು ಬೆಳೆದು ಬಲಗೊಂಡಿತ್ತು, ಅದರ ತುದಿಯು ಆಕಾಶವನ್ನು ಮುಟ್ಟಿತ್ತು, ಅದು ಭೂಲೋಕದ ಕಟ್ಟಕಡೆಗೂ ಕಾಣಿಸುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು