ಯೆಹೆಜ್ಕೇಲನು 31:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಾನು ಅದನ್ನು ಪ್ರೇತಗಳ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ, ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು ಮತ್ತು ಅಧೋಲೋಕದ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ಅಂತು ನೀರಾವರಿಯ ಸಕಲ ವನಸ್ಪತಿಗಳೂ ಅಲ್ಲಿ ಸಂತೈಸಿಕೊಂಡವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಾನು ಅದನ್ನು ಪ್ರೇತಗಳ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ, ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು; ಮತ್ತು ಪೂರ್ವಕಾಲದಲ್ಲಿ ಅಧೋಲೋಕದ ಪಾಲಾದ ಏದೆನಿನ ಎಲ್ಲ ಮರಗಳು, ಲೆಬನೋನಿನ ಉತ್ತಮೋತ್ತಮ ವೃಕ್ಷಗಳು, ಅಂತು ನೀರಾವರಿಯ ಸಕಲ ಸಸ್ಯಗಳೂ ಅಲ್ಲಿ ಸಂತೈಸಿಕೊಂಡವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಾನು ಅದನ್ನು ಪ್ರೇತಗಳ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ ಅದು ಬಿದ್ದ ಶಬ್ದಕ್ಕೆ ಸಕಲಜನಾಂಗಗಳು ನಡುಗಿದವು; ಮತ್ತು [ಪೂರ್ವಕಾಲದಲ್ಲಿ] ಅಧೋಲೋಕದ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮ ವೃಕ್ಷಗಳು, ಅಂತು ನೀರಾವರಿಯ ಸಕಲ ವನಸ್ಪತಿಗಳೂ ಅಲ್ಲಿ ಸಂತೈಸಿಕೊಂಡವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಾನು ಆ ಮರವನ್ನು ಬೀಳಿಸಿದೆನು. ಬೀಳುವ ಅದರ ಶಬ್ದವನ್ನು ಕೇಳಿ ರಾಜ್ಯಗಳೆಲ್ಲಾ ಭಯದಿಂದ ನಡುಗಿದವು. ನಾನು ಆ ಮರವನ್ನು ಪಾತಾಳಕ್ಕೆ ಕಳುಹಿಸಿದೆನು. ಅದು ಹೋಗಿ ಅದಕ್ಕಿಂತ ಮೊದಲೇ ಆ ಆಳವಾದ ಗುಂಡಿಗೆ ಹೋಗಿರುವವರೊಂದಿಗೆ ಸೇರಿಕೊಂಡಿತು. ಗತಿಸಿದ ದಿವಸಗಳಲ್ಲಿ ಏದೆನಿನಲ್ಲಿದ್ದ ಎಲ್ಲಾ ಮರಗಳು, ಲೆಬನೋನಿನ ಉತ್ಕೃಷ್ಟ ಮರಗಳು ಆ ನೀರನ್ನು ಕುಡಿದಿದ್ದವು. ಅವೆಲ್ಲವೂ ಪಾತಾಳದಲ್ಲಿ ಸಂತೈಸಿಕೊಂಡವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಾನು ಅದನ್ನು ಕುಳಿಗೆ ಇಳಿಯುವವರ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು. ಅಧೋಲೋಕದ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ನೀರು ಕುಡಿಯುವುವುಗಳೆಲ್ಲಾ ಕೆಳಗಿನ ಸೀಮೆಯಲ್ಲಿ ಸಂತೈಸಿಕೊಂಡವು. ಅಧ್ಯಾಯವನ್ನು ನೋಡಿ |