ಯೆಹೆಜ್ಕೇಲನು 31:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅದನ್ನು ಜಲಪ್ರವಾಹಗಳು ಬೆಳೆಯಿಸಿದವು, ಮಹಾನದಿಯು ವೃದ್ಧಿಗೊಳಿಸಿತು, ನದಿಗಳು ಅಲ್ಲಿನ ಉದ್ಯಾನವನ್ನು ಸುತ್ತಿಕೊಂಡಿದ್ದವು, ಭೂಮಿಯ ಎಲ್ಲಾ ಮರಗಳಿಗೂ ನದಿಯು ತನ್ನ ಕಾಲುವೆಗಳನ್ನು ನೀಡಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅದನ್ನು ಬೆಳೆಸಿದವು ಜಲಪ್ರವಾಹಗಳು ವೃದ್ಧಿಗೊಳಿಸಿತದನು ಮಹಾನದಿಯೊಂದು ಸುತ್ತಿಕೊಂಡಿದ್ದವು ಅಲ್ಲಿನ ಉದ್ಯಾನವನವನ್ನು ನದಿ ಶಾಖೆಗಳು ಮರಗಿಡಗಳಿಗೆ ನದಿ ನೀಡಿತ್ತು ತನ್ನ ಕಾಲುವೆಗಳನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅದನ್ನು ಜಲಪ್ರವಾಹಗಳು ಬೆಳೆಯಿಸಿದವು, ಮಹಾನದಿಯು ವೃದ್ಧಿಗೊಳಿಸಿತು, ನದೀಶಾಖೆಗಳು ಅಲ್ಲಿನ ಉದ್ಯಾನವನ್ನು ಸುತ್ತಿಕೊಂಡಿದ್ದವು, ಭೂವಿುಯ ಎಲ್ಲಾ ಮರಗಳಿಗೂ ನದಿಯು ತನ್ನ ಕಾಲುವೆಗಳನ್ನು ಕೊಟ್ಟಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನೀರು ಆ ಮರವನ್ನು ಬೆಳೆಯುವಂತೆ ಮಾಡಿತು. ನದಿಯು ಅದನ್ನು ಎತ್ತರವಾಗುವಂತೆ ಮಾಡಿತು. ಆ ಮರವು ನೆಡಲ್ಪಟ್ಟ ಸ್ಥಳದ ಸುತ್ತಲೂ ಹೊಳೆಯು ಹರಿಯುತ್ತಿದೆ. ಆ ಮರದಿಂದ ಬೇರೆ ಮರಗಳಿಗೆ ಸಣ್ಣ ಕಾಲುವೆಗಳು ಹೊರಡುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅದನ್ನು ಜಲಪ್ರವಾಹಗಳು ಬೆಳೆಸಿದವು, ಆಳವಾದ ಬುಗ್ಗೆಗಳು ಅದನ್ನು ಎತ್ತರಕ್ಕೆ ಬೆಳೆಸಿದವು. ಅವುಗಳ ತೊರೆಗಳು ಅದರ ಬುಡದ ಸುತ್ತಲೂ ಹರಿದು ತಮ್ಮ ಕಾಲುವೆಗಳನ್ನು ಹೊಲದ ಎಲ್ಲಾ ಮರಗಳಿಗೆ ಕಳುಹಿಸಿದವು. ಅಧ್ಯಾಯವನ್ನು ನೋಡಿ |