ಯೆಹೆಜ್ಕೇಲನು 32:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಹೌದು, ಅನೇಕ ಜನಾಂಗಗಳು ನಿನ್ನ ವಿಷಯದಲ್ಲಿ ಬೆಚ್ಚಿಬೆರಗಾಗುವಂತೆ ಮಾಡುವೆನು, ನಾನು ನನ್ನ ಖಡ್ಗವನ್ನು ಅವುಗಳ ಅರಸರ ಕಣ್ಣೆದುರಿಗೆ ಬೀಸುವಾಗ, ಅವರು ನಿನ್ನ ದುರ್ಗತಿಯನ್ನು ನೆನಸಿ ಭಯಭ್ರಾಂತರಾಗುವರು; ನಿನ್ನ ಸೋಲಿನ ದಿನದಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಪ್ರಾಣದ ಬಗ್ಗೆ ಕ್ಷಣಕ್ಷಣವೂ ನಡುಗುವನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಹೌದು, ಬಹುರಾಷ್ಟ್ರಗಳು ನಿನ್ನ ಗತಿಗೆ ಬೆಚ್ಚಿಬೆರಗಾಗುವಂತೆ ಮಾಡುವೆನು; ನಾನು ನನ್ನ ಖಡ್ಗವನ್ನು ಅವುಗಳ ಅರಸರ ಕಣ್ಣೆದುರಿಗೆ ಬೀಳಿಸುವಾಗ ಅವರು ನಿನ್ನ ದುರ್ಗತಿಯನ್ನು ನೆನೆಸಿ ಭಯಭ್ರಾಂತರಾಗುವರು; ನಿನ್ನ ಪತನದಿಂದ ಪ್ರತಿಯೊಬ್ಬನು ತನ್ನ ಪ್ರಾಣಾಪಾಯಕ್ಕೆ ಕ್ಷಣಕ್ಷಣವು ನಡುಗುವನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಹೌದು, ಬಹುಜನಾಂಗಗಳು ನಿನ್ನ ಗತಿಗೆ ಬೆಚ್ಚಿಬೆರಗಾಗುವಂತೆ ಮಾಡುವೆನು; ನಾನು ನನ್ನ ಖಡ್ಗವನ್ನು ಅವುಗಳ ಅರಸರ ಕಣ್ಣೆದುರಿಗೆ ಬೀಸುವಾಗ ಅವರು ನಿನ್ನ ದುರ್ಗತಿಯನ್ನು ನೆನಸಿ ಭಯಭ್ರಾಂತರಾಗುವರು; ನಿನ್ನ ಪತನದಿನದಲ್ಲಿ ಪ್ರತಿಯೊಬ್ಬನು ತನ್ನ ತನ್ನ ಪ್ರಾಣಾಪಾಯಕ್ಕೆ ಕ್ಷಣಕ್ಷಣವೂ ನಡುಗುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅನೇಕ ಮಂದಿ ನಿನಗೆ ಸಂಭವಿಸಿದ್ದನ್ನು ನೋಡಿ ಚಕಿತರಾಗುವರು. ನಾನು ನಿನ್ನ ಕಡೆಗೆ ಖಡ್ಗ ಬೀಸುವಾಗ ಅವರ ಅರಸರು ಬಹಳ ಭಯಗ್ರಸ್ತರಾಗುವರು; ನೀನು ಬೀಳುವ ದಿವಸದಲ್ಲಿ ಅರಸರು ಹೆದರಿ ನಡುಗುವರು. ಪ್ರತಿಯೊಬ್ಬ ರಾಜನು ತನ್ನ ಜೀವವನ್ನು ಉಳಿಸಿಕೊಳ್ಳಲು ಆತುರಪಡುವನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಾನು ಅನೇಕ ಜನರನ್ನು ನಿನ್ನ ವಿಷಯದಲ್ಲಿ ಭಯಭೀತಿಗೊಳ್ಳುವಂತೆ ಮಾಡುವೆನು, ನಾನು ಅವರ ಮುಂದೆ ನನ್ನ ಖಡ್ಗವನ್ನು ಬೀಸುವಾಗ ಅವರ ಅರಸರು ನಿನ್ನ ವಿಷಯದಲ್ಲಿ ಭಯಭ್ರಾಂತಿಗೊಳ್ಳುವರು. ನೀನು ಬೀಳುವ ಆ ದಿನದಲ್ಲಿ ಅವರು ಕ್ಷಣಕ್ಷಣಕ್ಕೆ ತಮ್ಮ ತಮ್ಮ ಪ್ರಾಣದ ಬಗ್ಗೆ ನಡುಗುವರು. ಅಧ್ಯಾಯವನ್ನು ನೋಡಿ |