Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 32:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಬಾಬೆಲಿನ ಅರಸನ ಖಡ್ಗವು ನಿನ್ನ ಮೇಲೆ ಬೀಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಬಾಬಿಲೋನಿನ ಅರಸನ ಖಡ್ಗ ನಿನ್ನ ಮೇಲೆ ಬೀಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಬಾಬೆಲಿನ ಅರಸನ ಖಡ್ಗವು ನಿನ್ನ ಮೇಲೆ ಬೀಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯಾಕೆಂದರೆ ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ಬಾಬಿಲೋನಿನ ರಾಜನ ಖಡ್ಗವು ನಿನ್ನೊಂದಿಗೆ ಯುದ್ಧಮಾಡಲು ಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಬಾಬಿಲೋನಿನ ಅರಸನ ಖಡ್ಗವು ನಿನ್ನ ವಿರುದ್ಧ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 32:11
8 ತಿಳಿವುಗಳ ಹೋಲಿಕೆ  

ಖಡ್ಗವು ಐಗುಪ್ತದ ಮೇಲೆ ಬೀಳುವುದು; ಅಲ್ಲಿನ ಪ್ರಜೆಗಳು ಹತರಾಗಲು ಕೂಷಿನಲ್ಲಿಯೂ ಸಂಕಟವಾಗುವುದು; ಐಗುಪ್ತದ ಜನಸಮೂಹವು ಒಯ್ಯಲ್ಪಡುವುದು, ಅದರ ಅಸ್ತಿವಾರವು ಮುರಿದು ಹಾಳಾಗುವುದು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ರಾಜಾಧಿರಾಜನೂ, ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಅಶ್ವಗಳ ಸಂಗಡಲೂ, ರಥಗಳ ಸಂಗಡಲೂ, ರಾಹುತರ ಸಂಗಡಲೂ, ಬಹುಜನರ ಸಂಗಡಲೂ ಕೂಡಿದವನಾಗಿ ನಾನು ಪೂರ್ವದಿಂದ ತೂರಿನ ಮೇಲೆ ಬರಮಾಡುವೆನು.


ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಂದು ಐಗುಪ್ತ ದೇಶವನ್ನು ಹೊಡೆಯುವನು” ಎಂಬುದಾಗಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ನುಡಿದನು.


‘ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಬಾಬೆಲಿನ ಅರಸನೂ, ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಕರೆಯಿಸಿ, ನಾನು ಮರೆಮಾಡಿಸಿರುವ ಈ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಹಾಕಿಸುವೆನು; ಅವನು ಈ ಕಲ್ಲುಗಳ ಮೇಲೆಯೇ ತನ್ನ ರತ್ನಗಂಬಳಿಯನ್ನು ಹಾಸುವನು.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಐಗುಪ್ತ ದೇಶವನ್ನು ಕೊಡುತ್ತೇನೆ; ಅವನು ಅದರ ಜನಸಮೂಹವನ್ನೂ, ಅದರ ಕೊಳ್ಳೆಯನ್ನೂ, ಅದರ ಸುಲಿಗೆಯನ್ನೂ ಸೂರೆಮಾಡುವನು; ಇದೇ ಅವನ ಸೈನ್ಯಕ್ಕೆ ಸಿಕ್ಕುವ ಪ್ರತಿಫಲವಾಗುವುದು.


ಆದುದರಿಂದ ನಾನು ಅದನ್ನು ಜನಾಂಗಗಳಲ್ಲಿ ಮಹಾ ಬಲಿಷ್ಠನಾದವನ ಕೈಗೆ ಕೊಟ್ಟುಬಿಟ್ಟಿದ್ದೇನೆ. ಅವನು ಅದರ ಕೆಟ್ಟತನಕ್ಕೆ ತಕ್ಕಂತೆ ಅದನ್ನು ದಂಡಿಸುತ್ತಾನೆ. ನಾನು ಅದರ ದುಷ್ಟತ್ವದ ನಿಮಿತ್ತ ತಳ್ಳಿಹಾಕಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು