Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 32:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಐಗುಪ್ತ್ಯವೇ, ನೀನು ಸೌಂದರ್ಯದಲ್ಲಿ ಯಾರಿಗೆ ಹೋಲುವೆ? ಕೆಳಗೆ ಹೋಗು ಮತ್ತು ಸುನ್ನತಿಹೀನರ ಸಂಗಡ ಮಲಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಈಜಿಪ್ಟೇ, ನೀನು ಸೌಂದರ್ಯದಲ್ಲಿ ಯಾರಿಗೆ ಕಡಿಮೆ? ಪಾತಾಳಕ್ಕೆ ಇಳಿದು ನೆಲಸು ಸುನ್ನತಿಹೀನರ ನಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 [ಐಗುಪ್ತವೇ,] ನೀನು ಸೌಂದರ್ಯದಲ್ಲಿ ಯಾರಿಗೆ ಕಡಿಮೆ? ಇಳಿದು ಹೋಗಿ ಸುನ್ನತಿಹೀನರ ನಡುವೆ ಒರಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಈಜಿಪ್ಟೇ, ನೀನು ಬೇರೆಯವರಿಗಿಂತ ಉತ್ತಮಳೇನೂ ಅಲ್ಲ. ಮರಣದ ಸ್ಥಳಕ್ಕೆ ಹೋಗು. ಅಲ್ಲಿ ಪರದೇಶದವರೊಂದಿಗೆ ಹೋಗಿ ಬಿದ್ದುಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ‘ನೀನು ಸೌಂದರ್ಯದಲ್ಲಿ ಯಾರಿಗೆ ಹೋಲುವೆ? ಕೆಳಗೆ ಹೋಗು ಮತ್ತು ಸುನ್ನತಿಯಿಲ್ಲದವರ ಸಂಗಡ ಮಲಗು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 32:19
13 ತಿಳಿವುಗಳ ಹೋಲಿಕೆ  

“ಇಂಥಾ ವೈಭವದಿಂದಲೂ, ಮಹಿಮೆಯಿಂದಲೂ ಕೂಡಿದ ನೀನು ಏದೆನಿನ ವೃಕ್ಷಗಳಲ್ಲಿ ಯಾವುದಕ್ಕಿಂತ ಕಡಿಮೆಯಾಗಿರುವೆ? ಆದರೂ ನೀನು ಏದೆನಿನ ವೃಕ್ಷಗಳೊಂದಿಗೆ ಅಧೋಲೋಕಕ್ಕೆ ತಳ್ಳಲ್ಪಟ್ಟು, ಸುನ್ನತಿಹೀನರ ನಡುವೆ ಖಡ್ಗದಿಂದ ಹತರಾದವರ ಸಂಗಡ ಮಲಗುವಿ. ಫರೋಹನೂ, ಅವನ ಎಲ್ಲಾ ಪ್ರಜೆಗಳೂ ಇದೇ ಗತಿಯನ್ನು ಹೊಂದುವರು ಎಂಬುದು ಕರ್ತನಾದ ಯೆಹೋವನ ನುಡಿ.”


ಅಲ್ಲಿ ಏಲಾಮು ಮತ್ತು ಅದರ ಸಮೂಹವು ಗೋರಿಯನ್ನು ಸುತ್ತಿಕೊಂಡಿದೆ; ಅವರೆಲ್ಲರೂ ಸಂಹೃತರು, ಖಡ್ಗದಿಂದ ಹತರಾದವರು; ಜೀವಲೋಕದಲ್ಲಿ ಭೀಕರರಾಗಿದ್ದ ಆ ಸುನ್ನತಿಹೀನರು ಅಧೋಲೋಕಕ್ಕೆ ಇಳಿದು ಪ್ರೇತಗಳ ಸಂಗಡ ಸೇರಿ ನಿಂದೆಯನ್ನು ಹೊತ್ತುಕೊಂಡಿದ್ದಾರೆ.


ಪಾತಾಳದೊಳಗಿನ ಬಲಿಷ್ಠ ಶೂರರು ಅದನ್ನೂ, ಅದರ ಸಹಾಯಕರನ್ನೂ ನೋಡಿ, ‘ಇವರು ಸುನ್ನತಿಯಿಲ್ಲದವರಾಗಿಯೂ, ಖಡ್ಗದಿಂದ ಹತರಾದವರಾಗಿಯೂ ಇಳಿದು ಬಂದಿದ್ದಾರೆ’ ಅಂದುಕೊಳ್ಳುವರು.


“ನರಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನಿಗೂ ಮತ್ತು ಅವನ ಅಸಂಖ್ಯಾತವಾದ ಪ್ರಜೆಗೂ ಹೀಗೆ ನುಡಿ, ನಿನ್ನ ದೊಡ್ಡಸ್ತಿಕೆಯಲ್ಲಿ ನಿನಗೆ ಸರಿಸಮಾನರು ಯಾರು?


ನೀನು ಅನ್ಯರ ಕೈಯಿಂದ ಸುನ್ನತಿಹೀನರ ಮರಣಕ್ಕೆ ಗುರಿಯಾಗುವಿ; ಏಕೆಂದರೆ ನಾನೇ ಇದನ್ನು ನುಡಿದಿದ್ದೇನೆ” ಎಂದು ಕರ್ತನಾದ ಯೆಹೋವನು ಹೇಳಿದ್ದಾನೆ.


ನಿನ್ನ ಸೇವಕನಿಂದ ಕೊಲ್ಲಲ್ಪಟ್ಟ ಸಿಂಹಕ್ಕೂ, ಕರಡಿಗೂ ಆದ ಗತಿಯೇ ಜೀವಸ್ವರೂಪನಾದ ದೇವರ ಸೈನ್ಯವನ್ನು ನಿಂದಿಸುವಂಥ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು.


ದಾವೀದನು, “ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸುವುದಕ್ಕೆ ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಾಯೇಲ್ಯರಿಗೆ ಬಂದಿರುವ ನಿಂದೆಯನ್ನು ತೆಗೆದುಹಾಕುವವನಿಗೆ ಏನು ಸಿಕ್ಕುವುದು ಹೇಳಿರಿ” ಎಂದು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರನ್ನು ಕೇಳಿದನು,


ಅಲ್ಲಿ ಮೆಷೆಕ್ ತೂಬಲ್ ಮತ್ತು ಅವುಗಳ ಎಲ್ಲಾ ಸಮೂಹವು ಅಲ್ಲಿರುತ್ತವೆ; ಆ ಪ್ರಜೆಗಳ ಗೋರಿಗಳು ಅವುಗಳನ್ನು ಸುತ್ತಿಕೊಂಡಿವೆ; ಅವರೆಲ್ಲರೂ ಸುನ್ನತಿಹೀನರು, ಖಡ್ಗದಿಂದ ಹತರಾದವರು; ಜೀವಲೋಕದಲ್ಲಿ ಭೀಕರರಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು