Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 32:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅಲ್ಲಿ ಮೆಷೆಕ್ ತೂಬಲ್ ಮತ್ತು ಅವುಗಳ ಎಲ್ಲಾ ಸಮೂಹವು ಅಲ್ಲಿರುತ್ತವೆ; ಆ ಪ್ರಜೆಗಳ ಗೋರಿಗಳು ಅವುಗಳನ್ನು ಸುತ್ತಿಕೊಂಡಿವೆ; ಅವರೆಲ್ಲರೂ ಸುನ್ನತಿಹೀನರು, ಖಡ್ಗದಿಂದ ಹತರಾದವರು; ಜೀವಲೋಕದಲ್ಲಿ ಭೀಕರರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 “ಮೆಷೆಕ್, ತೂಬಲ್ ಅವುಗಳ ಎಲ್ಲಾ ಪ್ರಜೆಯೂ ಅಲ್ಲಿರುತ್ತಾರೆ; ಆ ಪ್ರಜೆಗಳ ಗೋರಿಗಳು ಅವುಗಳನ್ನು ಸುತ್ತಿಕೊಂಡಿವೆ; ಅವರೆಲ್ಲರೂ ಸುನ್ನತಿಹೀನರು, ಖಡ್ಗಹತರು, ಜೀವಲೋಕದಲ್ಲಿ ಅವರು ಭೀಕರರಾಗಿದ್ದರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಮೆಷೆಕೂ ತೂಬಲೂ ಅವುಗಳ ಎಲ್ಲಾ ಪ್ರಜೆಯೂ ಅಲ್ಲಿರುತ್ತವೆ; ಆ ಪ್ರಜೆಗಳ ಗೋರಿಗಳು ಅವುಗಳನ್ನು ಸುತ್ತಿಕೊಂಡಿವೆ; ಅವರೆಲ್ಲರೂ ಸುನ್ನತಿಹೀನರು, ಖಡ್ಗಹತರು; ಜೀವಲೋಕದಲ್ಲಿ ಭೀಕರರಾಗಿದ್ದರಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 “ಮೆಷಕ್, ತೂಬಲ್ ಮತ್ತು ಅವರ ಎಲ್ಲಾ ಸೈನ್ಯದವರು ಅಲ್ಲಿದ್ದಾರೆ. ಅವರ ಸಮಾಧಿಗಳು ಸುತ್ತಲೂ ಇವೆ. ಅವರೆಲ್ಲಾ ಯುದ್ಧದಲ್ಲಿ ಸತ್ತವರು. ಅವರು ಜೀವಿಸಿದ್ದಾಗ ಜನರಿಗೆ ಹೆದರಿಕೆಯನ್ನು ಉಂಟುಮಾಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 “ಅಲ್ಲಿ ಮೆಷೆಕೂ ತೂಬಲೂ ಮತ್ತು ಅದರ ಎಲ್ಲಾ ಸಮೂಹವೂ ಅದರ ಸಮಾಧಿಗಳೂ ಅದರ ಸುತ್ತಲಾಗಿ ಇವೆ. ಇವರೆಲ್ಲರೂ ಜೀವಿತರ ದೇಶದಲ್ಲಿ ಭಯಂಕರರಾಗಿದ್ದರೂ ಸುನ್ನತಿಯಿಲ್ಲದೆ ಖಡ್ಗದಿಂದ ಹತರಾದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 32:26
11 ತಿಳಿವುಗಳ ಹೋಲಿಕೆ  

ಯಾವಾನ್, ತೂಬಲ್, ಮೆಷೆಕ್ ಇವರು ನಿನ್ನ ವರ್ತಕರಾಗಿದ್ದರು. ಗುಲಾಮರನ್ನೂ ಮತ್ತು ತಾಮ್ರದ ಪಾತ್ರೆಗಳನ್ನೂ ನಿನಗೆ ಸರಬರಾಜು ಮಾಡುತ್ತಿದ್ದರು.


ಯೆಫೆತನ ಸಂತಾನದವರು ಯಾರೆಂದರೆ - ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್, ತೀರಾಸ್ ಎಂಬವರು.


ಈಗ, “ನರಪುತ್ರನೇ, ನೀನು ಗೋಗನಿಗೆ ವಿರುದ್ಧವಾಗಿ ಈ ಪ್ರವಾದನೆಯನ್ನು ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ರೋಷ್, ಮೆಷೆಕ್, ತೂಬಲ್ ಜನಾಂಗಗಳ ಪ್ರಭುವಾದ ಗೋಗನೇ, ಆಹಾ! ನಾನು ನಿನ್ನ ವಿರುದ್ಧವಾಗಿದ್ದೇನೆ.


“ಇಗೋ, ಜೀವಲೋಕದಲ್ಲಿ ನಾನು ನನ್ನ ಭಯವನ್ನು ಹುಟ್ಟಿಸಿದ್ದೇನೆ; ಫರೋಹನೂ ಮತ್ತು ಅವನ ಸಮಸ್ತ ಪ್ರಜೆಯೂ ಸುನ್ನತಿಹೀನರ ಮಧ್ಯೆ, ಖಡ್ಗದಿಂದ ಹತರಾದವರ ನಡುವೆ ಮಲಗುವರು” ಎಂಬುದು ಕರ್ತನಾದ ಯೆಹೋವನ ನುಡಿ.


ಸುನ್ನತಿಯಿಲ್ಲದವರಲ್ಲಿ ಶೂರರು ಜೀವಲೋಕದೊಳಗೆ ಬಲಿಷ್ಠರಿಗೂ ಭೀಕರರಾಗಿದ್ದು ಹತರಾಗಿ, ಆಯುಧ ಸಹಿತ ಪಾತಾಳಕ್ಕೆ ಇಳಿದು, ಕತ್ತಿಗಳನ್ನು ತಲೆದಿಂಬು ಮಾಡಿಕೊಂಡು, ತಮ್ಮ ಎಲಬುಗಳ ಮೇಲೆ ತಮ್ಮ ದುಷ್ಕೃತ್ಯಗಳ ಭಾರವನ್ನು ಹೊತ್ತುಕೊಂಡಿದ್ದಾರೋ ಅವರ ನಡುವೆ ಮೆಷೆಕಿನವರೂ ತೂಬಲಿನವರೂ ಒರಗದೆ ಹೋಗುವರೇ?


ಯೆಫೆತನ ಸಂತಾನದವರು ಯಾರೆಂದರೆ; ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್ ಮತ್ತು ತೀರಾಸ್ ಎಂಬವರು.


ನಿನೆವೆಗೂ ಕೆಲಹಕ್ಕೂ ಮಧ್ಯದಲ್ಲಿ ಇರುವ ರೆಸೆನ್ ಪಟ್ಟಣವನ್ನೂ ಕಟ್ಟಿಸಿದನು. ರೆಸೆನ್ ಮಹಾಪಟ್ಟಣವೆಂದು ಪ್ರಸಿದ್ಧವಾಗಿದೆ.


ಅವರ ಮಧ್ಯದಲ್ಲಿ ಒಂದು ಸೂಚಕಕಾರ್ಯವನ್ನು ಮಾಡುವೆನು; ನನ್ನ ಸುದ್ದಿಯನ್ನು ಕೇಳದೆಯೂ, ನನ್ನ ಮಹಿಮೆಯನ್ನು ನೋಡದೆಯೂ ಇರುವ ತಾರ್ಷೀಷ್, ಪೂಲ್, ಬಿಲ್ಲುಗಾರರಿಗೆ ಪ್ರಸಿದ್ಧಸ್ಥಳವಾದ ಲೂದ್, ತೂಬಲ್, ಯಾವಾನ್ ಎಂಬ ಜನಾಂಗಗಳು ಮತ್ತು ದೂರವಾದ ದ್ವೀಪನಿವಾಸಿಗಳು ಇವರೆಲ್ಲರ ಬಳಿಗೆ ಹತಶೇಷರನ್ನು ಕಳುಹಿಸುವೆನು; ಇವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು