ಯೆಹೆಜ್ಕೇಲನು 32:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 “ಉತ್ತರ ದೇಶದ ಸಕಲ ಪ್ರಭುಗಳೂ ಸಮಸ್ತ ಮತ್ತು ಚೀದೋನ್ಯರೂ ಸಂಹೃತರೊಂದಿಗೆ ಇಳಿದು ಅಲ್ಲಿದ್ದಾರೆ; ಭಯಂಕರವಾಗಿದ್ದ ತಮ್ಮ ಶೌರ್ಯಕ್ಕೆ ನಾಚಿಕೊಂಡು ಖಡ್ಗದಿಂದ ಹತರಾದವರ ಮಧ್ಯೆ ಸುನ್ನತಿಹೀನರಾಗಿ ಬಿದ್ದು, ಪ್ರೇತಗಳ ಸಂಗಡ ಸೇರಿ ನಿಂದೆಯನ್ನು ಹೊತ್ತುಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 “ಉತ್ತರದೇಶದ ಸಕಲ ರಾಜರುಗಳೂ ಸಮಸ್ತ ಸಿದೋನ್ಯರೂ ಸಂಹೃತರೊಂದಿಗೆ ಇಳಿದು ಅಲ್ಲಿದ್ದಾರೆ; ಭಯಂಕರರಾಗಿದ್ದ ತಮ್ಮ ಶೌರ್ಯಕ್ಕೆ ನಾಚಿಕೆಗೊಂಡು, ಖಡ್ಗಹತರ ಮಧ್ಯೆ ಸುನ್ನತಿಹೀನರಾಗಿ ಬಿದ್ದು, ಪ್ರೇತಗಳ ನಡುವೆ ಅವಮಾನಪಟ್ಟಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಉತ್ತರದೇಶದ ಸಕಲಪ್ರಭುಗಳೂ ಸಮಸ್ತ ಚೀದೋನ್ಯರೂ ಸಂಹೃತರೊಂದಿಗೆ ಇಳಿದು ಅಲ್ಲಿದ್ದಾರೆ; ಭಯಂಕರವಾಗಿದ್ದ ತಮ್ಮ ಶೌರ್ಯಕ್ಕೆ ನಾಚಿಕೆಗೊಂಡು ಖಡ್ಗಹತರ ಮಧ್ಯೆ ಸುನ್ನತಿಹೀನರಾಗಿ ಬಿದ್ದು ಪ್ರೇತಗಳ ನಡುವೆ ಅವಮಾನಪಟ್ಟಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 “ಉತ್ತರ ದೇಶದ ನಾಯಕರೆಲ್ಲಾ ಅಲ್ಲಿದ್ದಾರೆ. ಚೀದೋನಿನ ಸೈನಿಕರೂ ಅಲ್ಲಿದ್ದಾರೆ. ಅವರ ಬಲವು ಜನರನ್ನು ಭಯಗ್ರಸ್ತರನ್ನಾಗಿ ಮಾಡಿತ್ತು. ಅವರೂ ಈಗ ಯುದ್ಧದಲ್ಲಿ ಮಡಿದ ಇತರರೊಂದಿಗೆ ಬಿದ್ದುಕೊಂಡಿದ್ದಾರೆ. ತಮ್ಮ ನಾಚಿಕೆಯೊಂದಿಗೆ ಪಾತಾಳವನ್ನು ಸೇರಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 “ಅಲ್ಲಿ ಉತ್ತರದ ರಾಜಕುಮಾರರೂ ಸೀದೋನ್ಯರೆಲ್ಲರೂ ಹತರಾದವರೊಂದಿಗೆ ಇಳಿದು ಅಲ್ಲಿದ್ದಾರೆ; ಸುನ್ನತಿಯಿಲ್ಲದವರಾಗಿದ್ದು ಖಡ್ಗದಿಂದ ಹತರಾಗಿ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತವರಾಗಿದ್ದಾರೆ. ಅಧ್ಯಾಯವನ್ನು ನೋಡಿ |