Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 32:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಫರೋಹನು ಇವರೆಲ್ಲರನ್ನೂ ನೋಡಿ ತನ್ನ ಸಮಸ್ತ ಪ್ರಜೆಯ ವಿಷಯದಲ್ಲಿ ಸಮಾಧಾನ ಹೊಂದುವನು; ಹೌದು, ಫರೋಹನೂ ಮತ್ತು ಖಡ್ಗದಿಂದ ಹತರಾದ ಅವನ ಸಕಲ ಸೈನಿಕರೂ ಸಮಾಧಾನ ಹೊಂದುವರು” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 “ಫರೋಹನು ಇವರೆಲ್ಲರನ್ನೂ ನೋಡಿ ತನ್ನ ಸಮಸ್ತ ಪ್ರಜೆಯ ವಿಷಯದಲ್ಲಿ ಸಮಾಧಾನಹೊಂದುವನು; ಹೌದು, ಫರೋಹನೂ ಖಡ್ಗಹತರಾದ ಅವನ ಸಕಲ ಸೈನಿಕರೂ ಸಮಾಧಾನಹೊಂದುವರು. ಇದು ಸರ್ವೇಶ್ವರನಾದ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಫರೋಹನು ಇವರೆಲ್ಲರನ್ನೂ ನೋಡಿ ತನ್ನ ಸಮಸ್ತ ಪ್ರಜೆಯ ವಿಷಯದಲ್ಲಿ ಸಮಾಧಾನ ಹೊಂದುವನು; ಹೌದು, ಫರೋಹನೂ ಖಡ್ಗಹತರಾದ ಅವನ ಸಕಲಸೈನಿಕರೂ ಸಮಾಧಾನ ಹೊಂದುವರು. ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ಪಾತಾಳಕ್ಕೆ ಸೇರಿದ ಜನರನ್ನು ಫರೋಹನು ನೋಡುವನು. ಅವನೂ ಅವನೊಂದಿಗಿರುವ ಜನರೂ ಸಮಾಧಾನ ಹೊಂದುವರು. ಹೌದು, ಫರೋಹನೂ ಅವನ ಎಲ್ಲಾ ಸೈನಿಕರೂ ಯುದ್ಧದಲ್ಲಿ ಸಾಯುವರು.” ಇದು ಒಡೆಯನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 “ಫರೋಹನು ಹಾಗೂ ಆತನ ಸೈನ್ಯವು ಇವರೆಲ್ಲರನ್ನೂ ನೋಡಿ ತನ್ನ ಸಮಸ್ತ ಜನಸಮೂಹದ ವಿಷಯವಾಗಿ ಸಮಾಧಾನ ಹೊಂದುವನು, ಫರೋಹನು ಮತ್ತು ಖಡ್ಗದಿಂದ ಹತರಾದ ಅವನ ಸಕಲ ಸೈನಿಕರೂ ಸಮಾಧಾನ ಹೊಂದುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 32:31
4 ತಿಳಿವುಗಳ ಹೋಲಿಕೆ  

ನಾನು ಅದನ್ನು ಪ್ರೇತಗಳ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ, ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು ಮತ್ತು ಅಧೋಲೋಕದ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ಅಂತು ನೀರಾವರಿಯ ಸಕಲ ವನಸ್ಪತಿಗಳೂ ಅಲ್ಲಿ ಸಂತೈಸಿಕೊಂಡವು.


ಆದರೂ ಸ್ತ್ರೀಪುರುಷರಲ್ಲಿ ಕೆಲವರು ಹೇಗೋ ತಪ್ಪಿಸಿಕೊಂಡು ಉಳಿದು ಅಲ್ಲಿಂದ ಒಯ್ಯಲ್ಪಡುವರು; ಆಹಾ, ಅವರು ನಿಮ್ಮ ಬಳಿಗೆ ಸೇರಿದಾಗ ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇಮಿನ ಮೇಲೆ ಬರಮಾಡಿದ ಕೇಡಿನ ವಿಷಯವಾಗಿ, ಅದಕ್ಕೆ ಉಂಟುಮಾಡಿದ ಎಲ್ಲಾ ಕೇಡುಗಳ ವಿಷಯವಾಗಿ ಸಮಾಧಾನ ಹೊಂದುವಿರಿ.


ಯೆರೂಸಲೇಮ್ ಕನ್ಯೆಯೇ, ನಾನು ನಿನಗೆ ಏನು ಹೇಳಲಿ, ನಿನ್ನನ್ನು ಯಾವುದಕ್ಕೆ ಹೋಲಿಸಲಿ? ಚೀಯೋನ್ ಕನ್ಯೆಯೇ, ನಿನ್ನನ್ನು ಸಂತೈಸಲು ಸಮಾಧಾನಕರ ಮಾತುಗಳನ್ನು ಎಲ್ಲಿಂದ ತರಲಿ? ನಿನ್ನ ನಾಶನವು ಸಾಗರದಷ್ಟು ಅಪಾರ, ನಿನ್ನನ್ನು ಯಾರು ಸ್ವಸ್ಥಮಾಡಬಲ್ಲರು?


“ಇಗೋ, ಜೀವಲೋಕದಲ್ಲಿ ನಾನು ನನ್ನ ಭಯವನ್ನು ಹುಟ್ಟಿಸಿದ್ದೇನೆ; ಫರೋಹನೂ ಮತ್ತು ಅವನ ಸಮಸ್ತ ಪ್ರಜೆಯೂ ಸುನ್ನತಿಹೀನರ ಮಧ್ಯೆ, ಖಡ್ಗದಿಂದ ಹತರಾದವರ ನಡುವೆ ಮಲಗುವರು” ಎಂಬುದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು