Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 32:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಫರೋಹನನೇ, ಆಗ ನಾನು ನಿನ್ನ ಬೆಳಕನ್ನು ನಂದಿಸುವಾಗ, ಆಕಾಶಕ್ಕೆ ಮುಸುಕುಹಾಕಿ, ಅಲ್ಲಿನ ನಕ್ಷತ್ರಗಳನ್ನು ಮಸುಕುಮಾಡಿ, ಸೂರ್ಯನನ್ನು ಮೋಡದಿಂದ ಮುಚ್ಚಿಬಿಡುವೆನು, ಚಂದ್ರನೂ ಪ್ರಕಾಶಿಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಿನ್ನ ಬೆಳಕನು ನಾ ನಂದಿಸಿ ಕತ್ತಲಾಗಿಸುವಾಗ, ಮುಚ್ಚುವೆನು ಸೂರ್ಯಚಂದ್ರ ನಕ್ಷತ್ರಗಳನು ಮೋಡಮುಸುಕಿನಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 [ಫರೋಹನೇ,] ನಾನು ನಿನ್ನ ಬೆಳಕನ್ನು ನಂದಿಸುವಾಗ ಆಕಾಶಕ್ಕೆ ಮುಸುಕುಹಾಕಿ ಅಲ್ಲಿನ ನಕ್ಷತ್ರಗಳನ್ನು ಮಂಕುಮಾಡಿ ಸೂರ್ಯನನ್ನು ಮೋಡದಿಂದ ಮುಚ್ಚಿಬಿಡುವೆನು, ಚಂದ್ರನೂ ಪ್ರಕಾಶಿಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀನು ಕಾಣೆಯಾಗುವಂತೆ ನಾನು ಮಾಡುವೆನು. ಆಕಾಶವನ್ನು ಮುಚ್ಚಿ ನಕ್ಷತ್ರಗಳನ್ನು ಹೊಳೆಯದಂತೆ ಮಾಡುವೆನು. ಸೂರ್ಯನನ್ನು ಮೋಡವು ಮುಚ್ಚುವಂತೆ ಮಾಡುವೆನು. ಚಂದ್ರನು ಪ್ರಕಾಶಿಸದಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇದಲ್ಲದೆ, ನಾನು ನಿನ್ನನ್ನು ನಂದಿಸುವಾಗ ಆಕಾಶಕ್ಕೆ ಮುಸುಕುಹಾಕಿ ಅಲ್ಲಿನ ನಕ್ಷತ್ರಗಳನ್ನು ಕತ್ತಲಾಗಿ ಮಾಡಿ, ನಾನು ಸೂರ್ಯನನ್ನು ಮೋಡದಿಂದ ಮುಚ್ಚಿ ಬಿಡುವೆನು. ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 32:7
22 ತಿಳಿವುಗಳ ಹೋಲಿಕೆ  

“ಆ ದಿನಗಳ ಸಂಕಟವು ಮುಗಿದಕೂಡಲೆ ಸೂರ್ಯನು ಕತ್ತಲಾಗಿ ಹೋಗುವನು, ಚಂದ್ರನು ಬೆಳಕು ಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು.


ಯೆಹೋವನ ಮಹಾ ಭಯಂಕರವಾದ ದಿನವು ಬರುವುದಕ್ಕಿಂತ ಮೊದಲು, ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.


ಅದು ಕತ್ತಲೆಯ ಮತ್ತು ಮೊಬ್ಬಿನ ದಿನವೂ, ಕಾರ್ಮುಗಿಲಿನ ಕಗ್ಗತ್ತಲ ದಿನವೂ ಆಗಿದೆ. ಉದಯವು ಬೆಟ್ಟಗಳ ಮೇಲೆ ಹರಡಿಕೊಳ್ಳುವ ಹಾಗೆ, ಪ್ರಬಲವಾದ ದೊಡ್ಡ ಸೈನ್ಯವು ಬರುತ್ತದೆ. ಅದರ ಹಾಗೆ ಹಿಂದೆಂದೂ ಬಂದಿಲ್ಲ, ಇನ್ನು ಮುಂದೆಯೂ ಬರುವುದಿಲ್ಲ, ತಲತಲಾಂತರಗಳ ವರ್ಷಗಳವರೆಗೂ ಬರುವುದಿಲ್ಲ.


ದಿನವು ಹತ್ತಿರವಾಯಿತು! ಹೌದು, ಯೆಹೋವನ ದಿನವು, ಕಾರ್ಮುಗಿಲಿನ ದಿನವು ಸಮೀಪಿಸಿತು; ಅದು ಜನಾಂಗಗಳಿಗೆ ನ್ಯಾಯತೀರಿಸುವ ಕಾಲವಾಗಿರುವುದು.


ನಕ್ಷತ್ರ ಸೈನ್ಯವೆಲ್ಲಾ ಗತಿಸಿ ಹೋಗುವುದು, ಆಕಾಶ ಮಂಡಲವು ಸುರಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ, ಅಂಜೂರ ಮರದಿಂದ ಮಾಗಿದ ಹಣ್ಣು ಉದುರುವ ಹಾಗೂ ತಾರಾಮಂಡಲವೆಲ್ಲಾ ಬಾಡಿ ಕೆಳಗೆ ಉದುರುವುದು.


ಆಕಾಶದ ತಾರೆಗಳೂ, ನಕ್ಷತ್ರ ರಾಶಿಗಳೂ ಬೆಳಕನ್ನು ಕೊಡುವುದಿಲ್ಲ. ಸೂರ್ಯನು ಮೂಡುತ್ತಲೇ ಕತ್ತಲಾಗುವನು. ಚಂದ್ರನು ಪ್ರಕಾಶಿಸುವುದಿಲ್ಲ.


ಸೂರ್ಯ ಮತ್ತು ಚಂದ್ರರು ಮಂಕಾಗುತ್ತಾರೆ, ನಕ್ಷತ್ರಗಳು ಕಾಂತಿಗುಂದುತ್ತವೆ.


ನಾಲ್ಕನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು, ಆಗ ಸೂರ್ಯನ ಮೂರರಲ್ಲಿ ಒಂದು ಭಾಗಕ್ಕೆ ತೊಂದರೆಯುಂಟಾಗಿ ಕತ್ತಲಾಯಿತು. ಅದೇ ಪ್ರಕಾರ ಚಂದ್ರನಲ್ಲಿ ಮತ್ತು ನಕ್ಷತ್ರಗಳಲ್ಲಿ ಮೂರರಲ್ಲಿ ಒಂದು ಭಾಗಕ್ಕೆ ತೊಂದರೆಯುಂಟಾಗಿ ಕತ್ತಲಾಗಿ ಹೋಯಿತು. ಇದರಿಂದ ಹಗಲಿನಲ್ಲಿ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಕತ್ತಲಾಗಿ, ರಾತ್ರಿಯ ಹಾಗೆಯೇ ಆಯಿತು.


ಇದಲ್ಲದೆ ಆ ದಿನಗಳ ಸಂಕಟವು ತೀರಿದ ನಂತರ; “‘ಸೂರ್ಯನು ಕತ್ತಲಾಗಿ ಹೋಗುವನು.


ಆ ದಿನದಲ್ಲಿ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ಸೂರ್ಯನನ್ನು ಮಧ್ಯಾಹ್ನಕ್ಕೆ ಮುಣುಗಿಸುವೆನು, ಭೂಮಿಯನ್ನು ಹಗಲಿನಲ್ಲೇ ಕತ್ತಲು ಮಾಡುವೆನು.


ಐಗುಪ್ತವು ಹೊರಿಸಿದ ನೊಗಗಳನ್ನು ನಾನು ತಹಪನೇಸಿನಲ್ಲಿ ಮುರಿಯುವಾಗ, ಅಲ್ಲಿ ಹೊತ್ತು ಮೂಡದು. ಅದರ ಶಕ್ತಿಯ ಅಹಂಕಾರವು ಅಡಗಿ ಹೋಗುವುದು, ಕಾರ್ಮುಗಿಲು ಅದನ್ನು ಆವರಿಸುವುದು, ಅದರ ಯುವತಿಯರು ಸೆರೆಗೆ ಒಯ್ಯಲ್ಪಡುವರು.


ನಿಮ್ಮ ದೇವರಾದ ಯೆಹೋವನನ್ನು ಘನಪಡಿಸಿರಿ; ಇಲ್ಲದಿದ್ದರೆ ಸ್ವಲ್ಪ ಕಾಲದೊಳಗೆ ಆತನು ಕತ್ತಲನ್ನು ಉಂಟುಮಾಡುವನು. ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವವು; ನೀವು ಬೆಳಕನ್ನು ನಿರೀಕ್ಷಿಸುತ್ತಿರುವಾಗ ಆತನು ಅದನ್ನು ಮರಣಾಂಧಕಾರದ ಕಾರ್ಗತ್ತಲನ್ನಾಗಿ ಮಾಡುವನು.


ಶಿಷ್ಟರ ಬೆಳಕು ಬೆಳಗುವುದು, ದುಷ್ಟರ ದೀಪವು ಆರುವುದು.


“ಇದಲ್ಲದೆ ಸೂರ್ಯ ಚಂದ್ರ ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು. ಭೋರ್ಗರೆಯುವ ಸಮುದ್ರ ಮತ್ತು ಅಲೆಗಳ ಘೋಷದ ನಿಮಿತ್ತವಾಗಿ ಭೂಮಿಯ ಮೇಲೆ ಜನಗಳಿಗೆ ದಿಕ್ಕುಕಾಣದೆ ಸಂಕಟವು ಉಂಟಾಗುವುದು.


ಹುಟ್ಟಬೇಡವೆಂದು ಆತನು ಅಪ್ಪಣೆ ಕೊಟ್ಟರೆ ಸೂರ್ಯನು ಹುಟ್ಟುವುದಿಲ್ಲ; ನಕ್ಷತ್ರಗಳನ್ನು ಮುಚ್ಚಿಟ್ಟು ಮುದ್ರೆಹಾಕುತ್ತಾನೆ.


ಸೂರ್ಯನೂ, ಚಂದ್ರನೂ ಮತ್ತು ನಕ್ಷತ್ರಗಳೂ ಕತ್ತಲಾಗುವ ಮೊದಲೇ, ಮಳೆಯ ಮೋಡಗಳು ಹಿಂತಿರುಗಿ ಬರುವವು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆ ವೃಕ್ಷವು ಪಾತಾಳಕ್ಕೆ ಇಳಿದು ಹೋದ ದಿನದಲ್ಲಿ ನಾನು ದುಃಖವನ್ನು ಹುಟ್ಟಿಸುವೆನು. ಅದರ ವಿಯೋಗಕ್ಕಾಗಿ ನಾನು ಮಹಾ ನದಿಯನ್ನು ಮರೆಮಾಡಿ, ನದಿಗಳನ್ನು ತಡೆದುಬಿಟ್ಟೆನು, ಜಲಪ್ರವಾಹವು ನಿಂತುಹೋಯಿತು; ಅದಕ್ಕಾಗಿ ಲೆಬನೋನು ಗೋಳಿಡುವಂತೆ ಮಾಡಿದೆನು, ಭೂಮಿಯ ಸಕಲ ವೃಕ್ಷಗಳು ಆ ದುಃಖಕ್ಕೆ ಕುಗ್ಗಿಹೋದವು.


ಮಂದೆಯ ಕುರುಬನು ಸುತ್ತುಮುತ್ತಲು ಚದುರಿ ಹೋದ ತನ್ನ ಕುರಿಗಳನ್ನು ಹುಡುಕುವ ಹಾಗೆ, ನಾನು ನನ್ನ ಕುರಿಗಳನ್ನು ಹುಡುಕುವೆನು; ಕಾರ್ಮುಗಿಲಿನ ದುರ್ದಿನದಲ್ಲಿ ಚದುರಿಹೋದ ಎಲ್ಲಾ ಸ್ಥಳಗಳಿಂದ ಅವುಗಳನ್ನು ರಕ್ಷಿಸುವೆನು.


ಅವುಗಳ ಆಗಮನದಿಂದ ಭೂಮಿಯು ಕಂಪಿಸುತ್ತದೆ, ಆಕಾಶಮಂಡಲವು ನಡಗುತ್ತದೆ, ಸೂರ್ಯ ಮತ್ತು ಚಂದ್ರರು ಮಂಕಾಗುತ್ತಾರೆ, ಮತ್ತು ನಕ್ಷತ್ರಗಳು ಕಾಂತಿಗುಂದುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು