Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 33:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ನರಪುತ್ರನೇ, ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ‘ಅಯ್ಯೋ, ನಮ್ಮ ದ್ರೋಹಗಳ ಮತ್ತು ಪಾಪಗಳ ಭಾರವು ನಮ್ಮ ಮೇಲೆ ಬಿದ್ದಿದೆ; ಅವುಗಳಿಂದ ಕ್ಷೀಣವಾಗಿ ಹೋಗುತ್ತಿದ್ದೇವೆ; ನಾವು ಹೇಗೆ ಬದುಕುವೆವು? ಅಂದುಕೊಳ್ಳುತ್ತೀರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ನರಪುತ್ರನೇ, ಇಸ್ರಯೇಲ್ ವಂಶದವರಿಗೆ ಹೀಗೆ ನುಡಿ - ಅಯ್ಯೋ, ನಮ್ಮ ದ್ರೋಹಗಳ ಮತ್ತು ಪಾಪಗಳ ಭಾರ ನಮ್ಮ ಮೇಲೆ ಬಿದ್ದಿವೆ; ಅವುಗಳಿಂದ ಕ್ಷೀಣವಾಗಿಹೋಗುತ್ತಿದ್ದೇವೆ; ನಾವು ಹೇಗೆ ಉಳಿದೇವು ಅಂದುಕೊಳ್ಳುತ್ತೀರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನರಪುತ್ರನೇ, ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ - ಅಯ್ಯೋ, ನಮ್ಮ ದ್ರೋಹಗಳ ಮತ್ತು ಪಾಪಗಳ ಭಾರವು ನಮ್ಮ ಮೇಲೆ ಬಿದ್ದಿದೆ; ಅವುಗಳಿಂದ ಕ್ಷೀಣವಾಗಿ ಹೋಗುತ್ತಿದ್ದೇವೆ; ನಾವು ಹೇಗೆ ಉಳಿದೇವು ಅಂದುಕೊಳ್ಳುತ್ತೀರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಆದ್ದರಿಂದ ನರಪುತ್ರನೇ, ನನ್ನ ಪರವಾಗಿ ಇಸ್ರೇಲ್ ಜನರೊಂದಿಗೆ ಮಾತನಾಡು. ‘ನಾವು ಪಾಪಮಾಡಿದ್ದೇವೆ. ಕಟ್ಟಳೆಗಳನ್ನು ಮೀರಿದ್ದೇವೆ. ನಮ್ಮ ಪಾಪಗಳು ಹೊರಲಾರದಷ್ಟು ಭಾರವಾಗಿವೆ. ನಾವು ಆ ಪಾಪಗಳಿಂದಾಗಿ ಕ್ಷೀಣಿಸುತ್ತಿದ್ದೇವೆ. ನಾವು ಜೀವಿಸಬೇಕಾದರೆ ಏನು ಮಾಡಬೇಕು?’ ಎಂದು ಅವರು ಕೇಳಿಯಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಆದ್ದರಿಂದ ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರಿಗೆ ಹೀಗೆ ಹೇಳು: ‘ನೀವು ಹೇಳುತ್ತಿರುವುದು ಇದನ್ನೇ: “ನಮ್ಮ ಅಪರಾಧಗಳೂ ನಮ್ಮ ಪಾಪಗಳೂ ನಮ್ಮ ಮೇಲಿದ್ದು ನಾವು ಅವುಗಳಲ್ಲೇ ಕ್ಷೀಣಿಸುತ್ತಾ ಹೋದರೆ ಹೇಗೆ ಬದುಕುವೆವು ಎಂದು ಹೇಳುವಿರಲ್ಲಾ?” ’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 33:10
12 ತಿಳಿವುಗಳ ಹೋಲಿಕೆ  

ಆಮೇಲೆ ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಈ ಎಲುಬುಗಳು ಇಸ್ರಾಯೇಲಿನ ಮನೆತನಗಳೇ; ಇಗೋ, ಆ ಮನೆತನದವರು, ‘ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆಯು ಹಾಳಾಯಿತು; ನಾವು ಸಂಪೂರ್ಣವಾಗಿ ನಾಶವಾದೆವು’” ಅಂದುಕೊಳ್ಳುತ್ತಿದ್ದಾರೆ.


ರುಮಾಲುಗಳು ನಿಮ್ಮ ತಲೆಯ ಮೇಲೆಯೂ, ಕೆರಗಳು ನಿಮ್ಮ ಪಾದಗಳ ಅಡಿಯಲ್ಲಿಯೂ ಇರುವವು; ನೀವು ಗೋಳಾಡುವುದಿಲ್ಲ, ಅಳುವುದಿಲ್ಲ; ನಿಮ್ಮ ಅಧರ್ಮದಿಂದ ಕ್ಷೀಣವಾಗಿ ಹೋಗುವಿರಿ, ಒಬ್ಬರ ಸಂಗಡಲೊಬ್ಬರು ನರಳುವಿರಿ.


ಚೀಯೋನ್ ನಗರಿಯಾದರೋ, “ಯೆಹೋವನು ನನ್ನನ್ನು ಕೈಬಿಟ್ಟಿದ್ದಾನೆ, ಕರ್ತನು ನನ್ನನ್ನು ಮರೆತಿದ್ದಾನೆ” ಎಂದುಕೊಂಡಳು.


ಅವರಲ್ಲಿ ಪ್ರತಿಯೊಬ್ಬರೂ ಅನ್ನ ಮತ್ತು ನೀರಿನ ಕೊರತೆಯಿಂದ ಕುಗ್ಗಿ ತಮ್ಮ ಅಧರ್ಮದಿಂದ ನಾಶವಾಗಿ ಹೋಗುವರು.”


ನಿಮ್ಮಲ್ಲಿ ಉಳಿದವರು ತಮ್ಮ ಪಾಪದ ದೆಸೆಯಿಂದಲೂ ಮತ್ತು ತಮ್ಮ ಪೂರ್ವಿಕರ ಪಾಪದ ದೆಸೆಯಿಂದಲೂ ಅವರಂತೆಯೇ ಶತ್ರುಗಳ ದೇಶಗಳಲ್ಲಿ ಕ್ಷೀಣವಾಗಿ ಹೋಗುವರು.


“ನಿನ್ನ ಕಾಲು ಸವೆಯದಂತೆಯೂ ನಿನ್ನ ಗಂಟಲು ಆರದಂತೆಯೂ ತಡೆದುಕೋ” ಎಂದೆನು, ಆದರೆ ನೀನು, “ನಿರೀಕ್ಷೆಯಿಲ್ಲ, ಆಗಲಾರದು, ಅನ್ಯರ ಮೇಲೆ ಮೋಹಗೊಂಡಿದ್ದೇನೆ. ಅವರ ಹಿಂದೆಯೇ ಹೋಗುವೆನು” ಅಂದುಕೊಂಡಿದ್ದಿ.


ನಿನ್ನ ಮಕ್ಕಳು ಪ್ರಜ್ಞೆತಪ್ಪಿದವರಾಗಿ ಬಲೆಗೆ ಸಿಕ್ಕಿದ ಜಿಂಕೆಗಳಂತೆ ಬೀದಿಗಳಲ್ಲಿ, ಚೌಕದಲ್ಲಿ ಬಿದ್ದಿದ್ದಾರೆ. ಯೆಹೋವನ ರೋಷವನ್ನೂ, ನಿನ್ನ ದೇವರ ಗದರಿಕೆಯನ್ನೂ ಸಾಕಷ್ಟು ಅನುಭವಿಸಿದ್ದಾರೆ.


ಇಸ್ರಾಯೇಲೇ, ಯೆಹೋವನನ್ನು ಎದುರುನೋಡುತ್ತಿರು; ಯೆಹೋವನು ಕೃಪಾಸಂಪನ್ನನು; ಪೂರ್ಣವಿಮೋಚನೆಯು ಆತನಿಂದಲೇ ದೊರಕುವುದು.


ನಾನು ನಿಮಗೆ ಮಾಡುವುದೇನೆಂದರೆ, ಕ್ಷಯರೋಗ, ಚಳಿಜ್ವರ ಮುಂತಾದ ಭಯಂಕರ ವ್ಯಾಧಿಗಳನ್ನು ನಿಮ್ಮಲ್ಲಿ ಇರುವಂತೆ ಮಾಡುವೆನು; ಇವುಗಳ ದೆಸೆಯಿಂದ ನೀವು ಕಂಗೆಟ್ಟವರಾಗಿಯೂ, ಮನಗುಂದಿದವರಾಗಿಯೂ ಇರುವಿರಿ. ನೀವು ಬೀಜಬಿತ್ತಿದಾಗ ಅದರ ಫಲವು ನಿಮಗೆ ದೊರೆಯದೆ ಹೋಗುವುದು; ಶತ್ರುಗಳು ಬಂದು ಅದನ್ನು ತಿಂದುಬಿಡುವರು.


ಯೆಹೋವನು ಹೇಳಿದ್ದೇನೆಂದರೆ, “ಈ ದೇಶದ ಮೇಲೆಯೂ, ಜನರ ಮೇಲೆಯೂ ಯೆಹೂದದ ಅರಸನ ಮುಂದೆ ಪಾರಾಯಣವಾದ ಆ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನು ಬರಮಾಡುವೆನು;


ಯೆಹೋವನೇ, ಇಸ್ರಾಯೇಲ್ ದೇವರೇ, ಈಗಿರುವಷ್ಟು ಜನರನ್ನು ನಮ್ಮಲ್ಲಿ ಉಳಿಸಿದ್ದರಿಂದ ನೀನು ಧರ್ಮಸ್ವರೂಪನೆಂದು ಪ್ರಕಟವಾಯಿತು. ನಾವಾದರೋ ನಿನ್ನ ದೃಷ್ಟಿಯಲ್ಲಿ ಅಪರಾಧಿಗಳು. ಈ ನಮ್ಮ ದುಷ್ಕೃತ್ಯದ ನಿಮಿತ್ತವಾಗಿ ನಿನ್ನೆದುರಿನಲ್ಲಿ ನಿಲ್ಲಲಾರೆವು” ಎಂದು ಬೇಡಿಕೊಂಡೆನು.


“ಆದರೆ ನೀವು, ‘ತಂದೆಯ ದೋಷಫಲವನ್ನು ಮಗನು ಅನುಭವಿಸುವುದು ಖಂಡಿತ’ ಎಂದು ಆಕ್ಷೇಪಿಸುವಿರೋ? ಮಗನು ನೀತಿನ್ಯಾಯಗಳನ್ನು ನಡೆಸಿ, ನನ್ನ ವಿಧಿಗಳನ್ನೆಲ್ಲಾ ಕೈಕೊಂಡು ಆಚರಿಸಿದರೆ ಖಂಡಿತವಾಗಿ ಜೀವಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು