ಯೆಹೆಜ್ಕೇಲನು 33:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆ ದುಷ್ಟನು ತನ್ನ ಒತ್ತೆಯನ್ನು ಬಿಗಿಹಿಡಿಯದೆ, ದೋಚಿಕೊಂಡದ್ದನ್ನು ಹಿಂದಕ್ಕೆ ಕೊಟ್ಟು, ಅನ್ಯಾಯವನ್ನು ಮಾಡದೆ, ಜೀವಾಧಾರವಾದ ವಿಧಿಗಳನ್ನು ಅನುಸರಿಸಿ, ಸಕಲ ದುಷ್ಕರ್ಮಗಳಿಗೂ ದೂರನಾದರೆ ಸಾಯುವುದಿಲ್ಲ. ಖಂಡಿತವಾಗಿ ಬದುಕುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅಂದರೆ, ಆ ದುಷ್ಟನು ಒತ್ತೆಯನ್ನು ಬಿಗಿಹಿಡಿಯದೆ, ದೋಚಿಕೊಂಡದ್ದನ್ನು ಹಿಂದಕ್ಕೆ ಕೊಟ್ಟು, ಜೀವಾಧಾರವಾದ ವಿಧಿಗಳನ್ನು ಅನುಸರಿಸಿ, ಸಕಲ ದುಷ್ಕರ್ಮಗಳಿಗೂ ದೂರವಾದರೆ ಅವನು ಸಾಯನು, ಬಾಳೇ ಬಾಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅಂದರೆ ಆ ದುಷ್ಟನು ಒತ್ತೆಯನ್ನು ಬಿಗಿಹಿಡಿಯದೆ ದೋಚಿಕೊಂಡದ್ದನ್ನು ಹಿಂದಕ್ಕೆ ಕೊಟ್ಟು ಜೀವಾಧಾರವಾದ ವಿಧಿಗಳನ್ನು ಅನುಸರಿಸಿ ಸಕಲ ದುಷ್ಕರ್ಮಗಳಿಗೂ ದೂರನಾಗಿರುವ ಪಕ್ಷದಲ್ಲಿ ಸಾಯನು, ಬಾಳೇಬಾಳುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಒತ್ತೆ ತೆಗೆದುಕೊಂಡಿದ್ದ ವಸ್ತುಗಳನ್ನು ಹಿಂದಕ್ಕೆ ಕೊಟ್ಟು, ತಾನು ಕದ್ದುಕೊಂಡದ್ದನ್ನು ಹಿಂದಕ್ಕೆ ಕೊಟ್ಟು, ಜೀವಕರವಾದ ಕಟ್ಟಳೆಗಳನ್ನು ಅನುಸರಿಸಿದರೆ ಆ ಮನುಷ್ಯನು ಖಂಡಿತವಾಗಿ ಬದುಕುವನು. ಅವನನ್ನು ಸಾಯಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ದುಷ್ಟನು ತನ್ನ ಒತ್ತೆಯನ್ನು ಮತ್ತು ದೋಚಿಕೊಂಡದ್ದನ್ನು ಹಿಂದಕ್ಕೆ ಕೊಟ್ಟು ಅನ್ಯಾಯವನ್ನು ಮಾಡದೆ ಜೀವನಾಧಾರವಾದ ನಿಯಮಗಳಲ್ಲಿ ನಡೆದರೆ ಅವನು ಸಾಯದೆ ಖಂಡಿತವಾಗಿ ಬದುಕುವನು. ಅಧ್ಯಾಯವನ್ನು ನೋಡಿ |