Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 33:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವನು ಮಾಡಿದ ಯಾವ ಪಾಪವೂ ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ; ನೀತಿನ್ಯಾಯಗಳನ್ನು ನಡೆಸುತ್ತಿದ್ದುದರಿಂದ ನಿಶ್ಚಯವಾಗಿ ಬದುಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅವನು ಮಾಡಿದ ಯಾವ ಪಾಪವೂ ಅವನ ಲೆಕ್ಕಕ್ಕೆ ಸೇರದು; ನ್ಯಾಯನೀತಿಗಳನ್ನು ನಡೆಸುತ್ತಿರುವುದರಿಂದ ಅವನು ಬಾಳೇ ಬಾಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವನು ಮಾಡಿದ ಯಾವ ಪಾಪವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು; ನೀತಿನ್ಯಾಯಗಳನ್ನು ನಡಿಸುತ್ತಿದ್ದಾನಲ್ಲಾ; ಬಾಳೇಬಾಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅವನು ಹಿಂದೆ ಮಾಡಿದ ದುಷ್ಕೃತ್ಯಗಳನ್ನು ನಾನು ನನ್ನ ನೆನಪಿಗೆ ತರುವದಿಲ್ಲ. ಯಾಕೆಂದರೆ ಈಗ ಅವನು ಶಿಷ್ಟನಾಗಿ ಬಾಳುತ್ತಿದ್ದಾನೆ. ಆದುದರಿಂದ ಅವನು ಜೀವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವನು ಮಾಡಿದ ಪಾಪಗಳಲ್ಲಿ ಒಂದಾದರೂ ಅವನ ಲೆಕ್ಕಕ್ಕೆ ಸೇರಿಸಲಾಗುವುದಿಲ್ಲ. ಅವನು ನ್ಯಾಯವನ್ನೂ ನೀತಿಯನ್ನೂ ಮಾಡಿದ್ದರಿಂದ ನಿಶ್ಚಯವಾಗಿ ಬದುಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 33:16
11 ತಿಳಿವುಗಳ ಹೋಲಿಕೆ  

ಅವನು ಮಾಡಿದ ಯಾವ ಅಪರಾಧವು ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ, ಅವನು ಮಾಡುತ್ತಿರುವ ಸದ್ಧರ್ಮದಿಂದಲೇ ಅವನು ಜೀವಿಸುವನು.”


ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ. ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡುವುದಿಲ್ಲ.


ನಿನ್ನ ದ್ರೋಹಗಳನ್ನು ಮೋಡದಂತೆ ನಿವಾರಿಸಿದ್ದೇನೆ. ನಿನ್ನ ಪಾಪಗಳನ್ನು ಮಂಜಿನಂತೆ ಕರಗಿಸಿದ್ದೇನೆ, ನಿನ್ನನ್ನು ವಿಮೋಚಿಸಿದ್ದೇನೆ, ನನ್ನ ಕಡೆಗೆ ತಿರುಗಿಕೋ.


“ಬನ್ನಿರಿ ವಾದಿಸುವ” ಎಂದು ಯೆಹೋವನು ಅನ್ನುತ್ತಾನೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ, ಹಿಮದ ಹಾಗೆ ಬಿಳುಪಾಗುವವು. ಕಿರಮಂಜಿ ಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು.


ದೇವರ ವರವು ಒಬ್ಬ ಮನುಷ್ಯನ ಪಾಪದ ಫಲದಂತಿರುವುದಿಲ್ಲ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ಅಪರಾಧಿಗಳಾಗಿದ್ದಾರೆಂದು ನಿರ್ಣಯಿಸಲ್ಪಟ್ಟಿತು. ಆದರೆ ದೇವರ ಕೃಪಾದಾನವು ಅನೇಕರ ಪಾಪಗಳನ್ನು ವಿಮೋಚಿಸಿ ಅವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕೆ ಕಾರಣವಾಯಿತು.


ಹೀಗೆ ಪಾಪವು ಮರಣವನ್ನುಂಟು ಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯಿಂದ ನಿತ್ಯಜೀವವನ್ನುಂಟುಮಾಡುತ್ತಾ ಆಳುವಂತಾಯಿತು.


ಆದರೆ ನಿನ್ನ ಜನರು ಕರ್ತನ ಮಾರ್ಗವು ಸಮವಲ್ಲವೆಂದು ಹೇಳುತ್ತಿದ್ದಾರೆ, ಆದರೆ ಅವರ ಮಾರ್ಗವೇ ಸಮವಿಲ್ಲ.


ಆತನು ಯಾವಾಗಲೂ ತಪ್ಪು ಹುಡುಕುವವನಲ್ಲ; ನಿತ್ಯವೂ ಕೋಪಿಸುವವನಲ್ಲ.


ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅವರಿಗೆ ತಿಳಿಸಿಕೊಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು