ಯೆಹೆಜ್ಕೇಲನು 33:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಾವು ಸೆರೆಯಾದ ಹನ್ನೆರಡನೆಯ ವರ್ಷದ, ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ, ಯೆರೂಸಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು, “ಪಟ್ಟಣವು ಶತ್ರುವಶವಾಯಿತು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನಾವು ಸೆರೆಯಾಗಿ ಹನ್ನೆರಡನೆಯ ವರ್ಷದ ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ ಜೆರುಸಲೇಮಿನಿಂದ ಪಲಾಯನ ಮಾಡಿದವನೊಬ್ಬನು ನನ್ನ ಬಳಿಗೆ ಬಂದು, - ‘ಪಟ್ಟಣವು ಶತ್ರು ವಶವಾಯಿತು’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನಾವು ಸೆರೆಯಾಗಿ ಹನ್ನೆರಡನೆಯ ವರುಷದ ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ ಯೆರೂಸಲೇವಿುನಿಂದ ಪಲಾಯನಮಾಡಿದವನೊಬ್ಬನು ನನ್ನ ಬಳಿಗೆ ಬಂದು - ಪಟ್ಟಣವು ಶತ್ರುವಶವಾಯಿತು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಸೆರೆಯ ಹನ್ನೆರಡನೆಯ ವರ್ಷದ ಹತ್ತನೆಯ ತಿಂಗಳಿನ ಐದನೇ ದಿವಸದಲ್ಲಿ ಜೆರುಸಲೇಮಿನಿಂದ ಒಬ್ಬನು ನನ್ನ ಬಳಿಗೆ ಬಂದನು. ಅವನು ರಣರಂಗದಿಂದ ತಪ್ಪಿಸಿಕೊಂಡು ಬಂದಾತನು. ಅವನು, “ನಗರವು ಪರಾಧೀನವಾಯಿತು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನಮ್ಮ ಸೆರೆಯ ಹನ್ನೆರಡನೆಯ ವರ್ಷದ ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ, ಯೆರೂಸಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು, “ಪಟ್ಟಣವು ನಾಶವಾಗಿದೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |
ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಅದೇ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಅರಸನೂ ಅವನ ಎಲ್ಲಾ ಸೈನಿಕರೂ ಅದೇ ರಾತ್ರಿಯಲ್ಲಿ ಅರಸನ ತೋಟದ ಗೋಡೆಯ ಬಳಿಯಲ್ಲಿರುವ ಬಾಗಿಲಿನಿಂದ ಓಡಿಹೋದರು. ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು. ಅರಸನು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಓಡಿಹೋದನು.