ಯೆಹೆಜ್ಕೇಲನು 33:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅವನು ಬರುವುದಕ್ಕಿಂತ ಮೊದಲೇ, ಸಾಯಂಕಾಲದಲ್ಲಿ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು, ಯೆಹೋವನು ತಪ್ಪಿಸಿಕೊಂಡವನು ಬೆಳಿಗ್ಗೆ ನನ್ನ ಬಳಿಗೆ ಬರುವ ತನಕ ನನ್ನ ಬಾಯಿ ತೆರೆಯಲ್ಪಟ್ಟಿತ್ತು; ಹೌದು, ನನ್ನ ಬಾಯಿ ತೆರೆದಿತ್ತು, ನಾನು ಮೂಕನಾಗಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅವನು ಬರುವುದಕ್ಕೆ ಹಿಂದಿನ ಸಾಯಂಕಾಲ ನಾನು ಸರ್ವೇಶ್ವರನ ಹಸ್ತಸ್ಪರ್ಶದಿಂದ ಪರವಶನಾಗಿದ್ದೆ. ಆ ಪಲಾಯಿತನು ಬೆಳಿಗ್ಗೆ ಬರುವನೆಂದು ಸರ್ವೇಶ್ವರ ನನ್ನ ಬಾಯನ್ನು ಬಿಚ್ಚಿದರು; ಹೌದು ನನ್ನ ಬಾಯಿ ಬಿಚ್ಚಿತ್ತು, ನನ್ನ ಮೂಕತನ ಹೋಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅವನು ಬರುವದಕ್ಕೆ ಹಿಂದಿನ ಸಾಯಂಕಾಲ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು ಯೆಹೋವನು ಆ ಪಲಾಯಿತನು ಬೆಳಿಗ್ಗೆ ಬರುವನೆಂದು ನನ್ನ ಬಾಯನ್ನು ಬಿಚ್ಚಿದ್ದನು; ಹೌದು, ನನ್ನ ಬಾಯಿ ಬಿಚ್ಚಿತು, ನನ್ನ ಮೂಕತನವು ಹೋಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಅವನು ಬರುವ ಹಿಂದಿನ ದಿವಸದ ಸಾಯಂಕಾಲ ನನ್ನ ಒಡೆಯನಾದ ಯೆಹೋವನ ಆತ್ಮನಿಂದ ಪರವಶನಾದೆನು. ದೇವರು ನನ್ನನ್ನು ಮಾತನಾಡದಂತೆ ಮಾಡಿದ್ದನು. ಆ ಸಮಯದಲ್ಲಿ ಆ ಮನುಷ್ಯನು ನನ್ನ ಬಳಿಗೆ ಬಂದನು. ಆಗ ದೇವರು ನನ್ನ ಬಾಯನ್ನು ತೆರೆದು ನಾನು ಮಾತನಾಡುವಂತೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆಗ ಅವನು ತಪ್ಪಿಸಿಕೊಂಡು ಬರುವುದಕ್ಕಿಂತ ಮೊದಲೇ, ಸಾಯಂಕಾಲದಲ್ಲಿ ಯೆಹೋವ ದೇವರ ಕೈ ನನ್ನ ಮೇಲೆ ಇತ್ತು. ಅವನು ಮುಂಜಾನೆ ನನ್ನ ಬಳಿಗೆ ಬರುವ ತನಕ ನನ್ನ ಬಾಯಿ ತೆರೆಯಲಾಗಿತ್ತು. ನನ್ನ ಬಾಯಿ ತೆರೆದಿತ್ತು. ನಾನು ಮೌನವಾಗಿರಲಿಲ್ಲ. ಅಧ್ಯಾಯವನ್ನು ನೋಡಿ |