ಯೆಹೆಜ್ಕೇಲನು 33:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 “ನರಪುತ್ರನೇ, ಇಸ್ರಾಯೇಲ್ ಸೀಮೆಯ ಹಾಳು ಪ್ರದೇಶಗಳಲ್ಲಿ ವಾಸಿಸುವವರು ‘ಅಬ್ರಹಾಮನು ಒಂಟಿಗನಾಗಿದ್ದರೂ ಈ ದೇಶವು ಅವನಿಗೆ ಸ್ವತ್ತಾಗಿ ಸಿಕ್ಕಿತಲ್ಲಾ; ಅದು ಬಹು ಜನರಾದ ನಮಗೆ ಸ್ವತ್ತಾಗಿ ಸಿಕ್ಕಿದ್ದು ಬಹು ದೊಡ್ಡದು?’” ಎಂದು ಅಂದುಕೊಳ್ಳುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 “ನರಪುತ್ರನೇ, ಇಸ್ರಯೇಲ್ ನಾಡಿನ ಹಾಳುಪ್ರದೇಶಗಳಲ್ಲಿ ವಾಸಿಸುವರು, ‘ಅಬ್ರಹಾಮನು ಒಂಟಿಗನಾಗಿದ್ದರೂ ಈ ನಾಡು ಅವನಿಗೆ ಸೊತ್ತಾಗಿ ಸಿಕ್ಕಿತು; ಅದು ಬಹುಜನರಾದ ನಮಗೆ ಸೊತ್ತಾಗಿ ಸಿಕ್ಕಿದ್ದು ಏನು ದೊಡ್ಡದು! ಎಂದುಕೊಳ್ಳುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ನರಪುತ್ರನೇ, ಇಸ್ರಾಯೇಲ್ ಸೀಮೆಯ ಹಾಳು ಪ್ರದೇಶಗಳಲ್ಲಿ ವಾಸಿಸುವವರು - ಅಬ್ರಹಾಮನು ಒಂಟಿಗನಾಗಿದ್ದರೂ ಈ ದೇಶವು ಅವನಿಗೆ ಸ್ವಾಸ್ತ್ಯವಾಗಿ ಸಿಕ್ಕಿತಲ್ಲಾ; ಅದು ಬಹುಜನರಾದ ನಮಗೆ ಸ್ವಾಸ್ತ್ಯವಾಗಿ ಸಿಕ್ಕಿದ್ದು ಏನು ದೊಡ್ಡದು ಅಂದುಕೊಳ್ಳುತ್ತಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 “ನರಪುತ್ರನೇ, ಕೆಡವಲ್ಪಟ್ಟು ಹಾಳುಬಿದ್ದ ಪಟ್ಟಣಗಳಲ್ಲಿ ಇಸ್ರೇಲ್ ಜನರು ವಾಸಿಸುತ್ತಿದ್ದಾರೆ. ಅವರು ಹೇಳುವುದೇನೆಂದರೆ, ‘ಅಬ್ರಹಾಮನು ಒಬ್ಬನೇ. ಈ ದೇಶವನ್ನೆಲ್ಲಾ ದೇವರು ಅವನಿಗೆ ಕೊಟ್ಟನು. ನಾವು ಈಗ ಬಹಳ ಮಂದಿ ಇದ್ದೇವೆ. ಆದ್ದರಿಂದ ಖಂಡಿತವಾಗಿ ಈ ದೇಶ ನಮಗೇ ಸೇರಿದ್ದಾಗಿದೆ.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 “ಮನುಷ್ಯಪುತ್ರನೇ, ಇಸ್ರಾಯೇಲಿನ ದೇಶದ ಹಾಳು ಪ್ರದೇಶಗಳಲ್ಲಿ ವಾಸಿಸುವರು ಹೀಗೆ ಹೇಳುತ್ತಾರೆ, ‘ಅಬ್ರಹಾಮನು ಒಬ್ಬೊಂಟಿಗನಾಗಿದ್ದರೂ ಈ ದೇಶ ಅವನಿಗೆ ಸೊತ್ತಾಗಿ ಸಿಕ್ಕಿತು. ಆದರೆ ನಾವು ಬಹಳ ಜನರಾಗಿದ್ದು ದೇಶವು ನಮಗೆ ಸೊತ್ತಾಗಿ ಕೊಡಲಾಗಿದೆ,’ ಎಂದು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |