ಯೆಹೆಜ್ಕೇಲನು 33:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ನೀವು ನಿಮ್ಮ ಕತ್ತಿಯ ಮೇಲೆ ನಿಂತು ಅಸಹ್ಯವಾದ ಕೆಲಸಗಳಲ್ಲಿ ನಿರತರಾಗಿದ್ದೀರಿ, ದುರಾಚಾರ ನಡೆಸುತ್ತೀರಿ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹೆಂಡತಿಯನ್ನು ಮಾನಭಂಗ ಪಡಿಸುತ್ತಾನೆ; ನಿಮ್ಮಂಥವರು ದೇಶವನ್ನು ಸ್ವಾಧೀನಪಡಿಸಿಕೊಳ್ಳಬಹುದೋ?” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ನೀವು ಕತ್ತಿ ಬಳಸುವುದರಲ್ಲೇ ನಿರತರಾಗಿದ್ದೀರಿ, ದುರಾಚಾರ ನಡೆಸುತ್ತೀರಿ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ನೆರೆಯವನ ಹೆಂಡತಿಯನ್ನು ಕೆಡಿಸುತ್ತಾನೆ; ನಿಮ್ಮಂಥವರು ದೇಶವನ್ನು ಅನುಭವಿಸಬಹುದೋ?’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ನೀವು ಕತ್ತಿಯಲ್ಲೇ ನಿರತರಾಗಿದ್ದೀರಿ, ದುರಾಚಾರನಡಿಸುತ್ತೀರಿ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ನೆರೆಯವನ ಹೆಂಡತಿಯನ್ನು ಕೆಡಿಸುತ್ತಾನೆ; ನಿಮ್ಮಂಥವರು ದೇಶವನ್ನು ಅನುಭವಿಸಬಹುದೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ನೀವು ನಿಮ್ಮ ಕತ್ತಿಯ ಮೇಲೆ ಭರವಸೆಯಿಡುತ್ತೀರಿ. ಪ್ರತಿಯೊಬ್ಬನು ಭಯಂಕರವಾದ ಕೃತ್ಯಗಳನ್ನು ನಡಿಸುತ್ತಾನೆ. ನಿಮ್ಮ ನೆರೆಯವನ ಹೆಂಡತಿಯೊಂದಿಗೆ ಸಂಭೋಗಿಸುವಿರಿ. ಆದ್ದರಿಂದ ನೀವು ಈ ದೇಶವನ್ನು ಹೊಂದಲಾರಿರಿ.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ನೀವು ನಿಮ್ಮ ಖಡ್ಗದ ಮೇಲೆ ಭರವಸೆ ಇಟ್ಟು ಅಸಹ್ಯವಾದ ಕೆಲಸಗಳನ್ನು ಮಾಡುವಿರಿ. ನಿಮ್ಮಲ್ಲಿ ಪ್ರತಿಯೊಬ್ಬನೂ ನಿಮ್ಮ ನೆರೆಯವನ ಹೆಂಡತಿಯನ್ನು ಕೆಡಿಸುವಿರಿ. ಹೀಗಾದರೆ ನೀವು ದೇಶವನ್ನು ಸ್ವಾಧೀನಪಡಿಸಿಕೊಂಡಿರೇನು?’ ಅಧ್ಯಾಯವನ್ನು ನೋಡಿ |