Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 33:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನಾನು ದೇಶವನ್ನು ಹಾಳುಮಾಡುವೆನು, ಅದರ ಶಕ್ತಿಯ ಅಹಂಕಾರವು ಇಳಿದು ಹೋಗುವುದು; ಇಸ್ರಾಯೇಲಿನ ಪರ್ವತಗಳು ಹಾಳಾಗಿರುವುದರಿಂದ ಯಾರೂ ಅಲ್ಲಿ ಹಾದು ಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನಾನು ದೇಶವನ್ನು ಹಾಳುಪಾಳು ಮಾಡುವೆನು, ಅದರ ಶಕ್ತಿಯ ಮದವು ಇಳಿದುಹೋಗುವುದು; ಇಸ್ರಯೇಲಿನ ಮಲೆನಾಡು ಬೀಡುಬೀಳುವುದು; ಯಾರೂ ಇಲ್ಲಿ ಹಾದುಹೋಗರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನಾನು ದೇಶವನ್ನು ಹಾಳುಪಾಳುಮಾಡುವೆನು, ಅದರ ಶಕ್ತಿಯ ಮದವು ಇಳಿದುಹೋಗುವದು; ಇಸ್ರಾಯೇಲಿನ ಮಲೆನಾಡು ಬೀಡುಬೀಳುವದು; ಯಾರೂ ಅಲ್ಲಿ ಹಾದುಹೋಗರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನಾನು ಈ ದೇಶವನ್ನು ಬರಿದಾಗಿಯೂ ಬಂಜರು ಭೂಮಿಯನ್ನಾಗಿಯೂ ಮಾಡುವೆನು. ಈ ದೇಶವು ಹೆಮ್ಮೆಪಟ್ಟುಕೊಳ್ಳುತ್ತಿದ್ದ ವಿಷಯಗಳನ್ನೆಲ್ಲಾ ಅವರು ಕಳೆದುಕೊಳ್ಳುವರು. ಇಸ್ರೇಲಿನ ಪರ್ವತಗಳು ಬೋಳುಗುಡ್ಡಗಳಾಗುವವು. ಯಾರೂ ಅದನ್ನು ದಾಟಿ ಹೋಗಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನಾನು ಈ ದೇಶವನ್ನು ಹಾಳುಪಾಳುಮಾಡುವೆನು. ಅದರ ಬಲದ ಮಹತ್ತು ತೀರಿಹೋಗುವುದು. ಇಸ್ರಾಯೇಲಿನ ಪರ್ವತಗಳು ಹಾಳಾಗಿರುವುದರಿಂದ ಯಾರೂ ಅದರ ಮೂಲಕ ಹಾದು ಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 33:28
27 ತಿಳಿವುಗಳ ಹೋಲಿಕೆ  

ಹೀಗಿರಲು ನಾನು ಅತಿ ದುಷ್ಟ ಜನಾಂಗಗಳನ್ನು ಬರಮಾಡುವೆನು, ಅವು ನನ್ನ ಜನರ ಮನೆಗಳನ್ನು ವಶಮಾಡಿಕೊಳ್ಳುವುದು; ನಾನು ಬಲಿಷ್ಠರ ಸೊಕ್ಕನ್ನು ಅಡಗಿಸುವೆನು, ಅವರ ಪವಿತ್ರ ಸ್ಥಾನಗಳು ಹೊಲೆಗೆಡುವವು.


ಆದರೆ ಅಷ್ಟರೊಳಗೆ ಈ ದೇಶವು ತನ್ನ ನಿವಾಸಿಗಳ ನಿಮಿತ್ತ ಅವರ ದುಷ್ಕೃತ್ಯಗಳ ಫಲವಾಗಿ ಹಾಳುಬಿದ್ದಿರುವುದು.


ಇಸ್ರಾಯೇಲ್ ವಂಶದವರಿಗೆ ಹೀಗೆ ಸಾರು, ‘ಇಗೋ, ನಿಮಗೆ ಮುಖ್ಯಬಲವೂ ನೇತ್ರಾನಂದವೂ ಪ್ರಾಣಪ್ರಿಯವೂ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಪಡಿಸುವೆನು, ನೀವು ಬಿಟ್ಟು ಬಂದಿರುವ ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸೇನಾದೀಶ್ವರನಾದ ಯೆಹೋವನು ನುಡಿದಿದ್ದಾರೆ


ನಾನು ಅವರ ಮೇಲೆ ಕೈಯೆತ್ತಿ ಅವರು ವಾಸವಾಗಿರುವ ದೇಶವನ್ನೆಲ್ಲಾ ಅರಣ್ಯದಿಂದ ದಿಬ್ಲದವರೆಗೂ ಹಾಳುಪಾಳುಮಾಡುವೆನು; ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.’”


ನೀವು ನಡೆಸಿದ ದುರಾಚಾರಗಳನ್ನೂ, ಅಸಹ್ಯಕಾರ್ಯಗಳನ್ನೂ ಯೆಹೋವನು ಇನ್ನು ಸಹಿಸಲಾರದೆ ಹೋದುದರಿಂದ ನಿಮ್ಮ ದೇಶವು ಹಾಳುಬಿದ್ದು ಜನವಿಲ್ಲದೆ ನಾಶಕ್ಕೂ, ಶಾಪಕ್ಕೂ ಆಸ್ಪದವಾಯಿತು; ಈಗಲೂ ಹಾಗೆಯೇ ಇದೆ.


ಆದಕಾರಣ ನನ್ನ ಉಗ್ರರೋಷಾಗ್ನಿಯು ಸುರಿದು ಯೆಹೂದದ ಊರುಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಧಗಧಗಿಸಿತು; ಅವು ಈಗಲೂ ಹಾಳು ಪಾಳಾಗಿವೆ.


“ಇಸ್ರಾಯೇಲಿನ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಾನು ಯೆರೂಸಲೇಮಿಗೂ, ಯೆಹೂದದ ಎಲ್ಲಾ ಊರುಗಳಿಗೂ ಬರಮಾಡಿದ ಕೇಡನ್ನು ನೀವು ನೋಡಿದ್ದೀರಷ್ಟೆ.


ಆದಕಾರಣ ಇಸ್ರಾಯೇಲಿನ ಪರ್ವತಗಳೇ, ಕರ್ತನಾದ ಯೆಹೋವನ ವಾಕ್ಯವನ್ನು ಕೇಳಿರಿ, ಬೆಟ್ಟಗಳಿಗೂ, ಗುಡ್ಡಗಳಿಗೂ, ತೊರೆತಗ್ಗುಗಳಿಗೂ, ಹಾಳುಪ್ರದೇಶಗಳಿಗೂ, ಸುತ್ತಣ ಜನಾಂಗಗಳಲ್ಲಿ ಉಳಿದವರು ಕೊಳ್ಳೆಹೊಡೆದು ಅಣಕಿಸುವ ಹಾಳು ಪಟ್ಟಣಗಳಿಗೂ,


ಅವರು ದ್ರೋಹ ಮಾಡಿದ್ದರಿಂದ ನಾನು ದೇಶವನ್ನು ಹಾಳುಮಾಡುವೆನು” ಇದು ಕರ್ತನಾದ ಯೆಹೋವನ ನುಡಿ.


ಆಗ ಜನ ತುಂಬಿದ ಊರುಗಳು ಹಾಳಾಗಿ ದೇಶವು ಬೀಡುಬೀಳುವುದು; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.’”


ಈ ದೇಶವೆಲ್ಲಾ ಹಾಳಾಗಿ ಬೆರಗಿಗೆ ಈಡಾಗುವುದು; ಮತ್ತು ಈ ಜನಾಂಗಗಳು ಎಪ್ಪತ್ತು ವರ್ಷ ಬಾಬೆಲಿನ ಅರಸನ ಅಡಿಯಾಳಾಗಿ ಬಿದ್ದಿರುವವು.


ಯೆಹೋವನು ಹೀಗೆನ್ನುತ್ತಾನೆ, “ಇಗೋ, ನನ್ನ ಜನರನ್ನು ಹಿಡಿಯುವುದಕ್ಕೆ ಬಹು ಮಂದಿ ಬೆಸ್ತರನ್ನು ಕರೆಯಿಸುವೆನು; ಆ ಮೇಲೆ ಎಲ್ಲಾ ಬೆಟ್ಟಗುಡ್ಡಗಳಿಂದಲೂ, ಬಂಡೆಗಳ ಸಂದುಗೊಂದುಗಳಿಂದಲೂ ಅವರನ್ನು ಹೊರಡಿಸಿ, ಬೇಟೆಯಾಡುವುದಕ್ಕೆ ಬಹುಜನ ಬೇಡರನ್ನು ಕರೆಯಿಸುವೆನು.


ನಾನು ಯೆರೂಸಲೇಮನ್ನು ಹಾಳು ದಿಬ್ಬವನ್ನಾಗಿಯೂ, ನರಿಗಳ ಹಕ್ಕೆಯನ್ನಾಗಿಯೂ ಮಾಡುವೆನು ಮತ್ತು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ಯೆಹೋವನು ಹೇಳಿದ್ದಾನಲ್ಲಾ.


ಅದಕ್ಕೆ ನಾನು, “ಕರ್ತನೇ, ಇದು ಎಷ್ಟರವರೆಗೆ?” ಎಂದು ಕೇಳಲು ಅದಕ್ಕೆ ಆತನು, “ಯೆಹೋವನು ಜನರನ್ನು ದೂರ ತೊಲಗಿಸಿ ದೇಶದಲ್ಲಿ ನಾಶ ಹೆಚ್ಚಾಗಿ ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಜನರಿಲ್ಲದೆ, ದೇಶವು ಸಂಪೂರ್ಣವಾಗಿ ಹಾಳಾಗುವವರೆಗೂ ಇದೇ ರೀತಿ ಇರುವುದು.


ಈ ಪ್ರಕಾರ ಯೆರೆಮೀಯನ ಮುಖಾಂತರ ಹೇಳಿಸಿದ ಯೆಹೋವನ ಮಾತು ನೆರವೇರಿತು; ದೇಶವು ತನ್ನ ಸಬ್ಬತ್ ಕಾಲವನ್ನು ಅನುಭವಿಸುವವರೆಗೂ ಸಮಾಧಾನವಾಗಿತ್ತಷ್ಟೇ. ದೇಶವು ಎಪ್ಪತ್ತು ವರ್ಷಗಳು ಪೂರ್ಣವಾಗುವವರೆಗೂ ಅದು ಶೂನ್ಯವಾಗಿದ್ದ ಸಬ್ಬತ್ತನ್ನು ಅನುಭವಿಸಿತು.


“ಇಗೋ, ನಾನು ನಿನ್ನನ್ನು ಮಸೆದ ಮೊನೆಹಲ್ಲಿನ ಹೊಸ ಹಂತಿಕುಂಟೆಯನ್ನಾಗಿ ಮಾಡಿದ್ದೇನೆ, ನೀನು ಬೆಟ್ಟಗಳನ್ನು ಒಡೆದು ಪುಡಿಪುಡಿಮಾಡಿ ಗುಡ್ಡಗಳನ್ನು ಹೊಟ್ಟು ಮಾಡುವಿ.


“ನಾನು ಪರ್ವತಗಳಿಗಾಗಿ ಅತ್ತು ಗೋಳಾಡುವೆನು, ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು; ಅವು ಸುಟ್ಟುಹೋಗಿವೆ, ಯಾರೂ ಹಾದು ಹೋಗರು, ದನಕರುಗಳ ಶಬ್ದ ಕಿವಿಗೆ ಬೀಳದು, ಮೃಗ ಪಕ್ಷಿಗಳು ತೊಲಗಿಹೋಗಿವೆ.


ಆದಕಾರಣ ಬೆರಗಿನ ಸಿಳ್ಳಿಗೆ ಅವರ ದೇಶವು ನಿತ್ಯ ಗುರಿಯಾಗುವುದು; ಹಾದುಹೋಗುವವರೆಲ್ಲರೂ ಬೆರಗಾಗಿ ತಲೆದೂಗುವರು.


ಬಾಬೆಲಿನ ಅರಸನು ಇವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟುಹೋಗಬೇಕಾಯಿತು.


ಹಾದುಹೋಗುವವರೆಲ್ಲರ ಕಣ್ಣೆದುರಿಗೆ ನಾನು ನಿನ್ನನ್ನು ಹಾಳುಮಾಡಿ, ಸುತ್ತಲಿನ ಜನಾಂಗಗಳ ನಿಂದೆಗೆ ಗುರಿ ಮಾಡುವೆನು.


ಅವರು ನಡೆಸಿದ ಬಹು ದುರಾಚಾರಗಳ ನಿಮಿತ್ತ ನಾನು ದೇಶವನ್ನು ಹಾಳುಮಾಡಿದಾಗ ನಾನೇ ಯೆಹೋವನು” ಎಂದು ಅವರಿಗೆ ದೃಢವಾಗುವುದು.


ಯೆಹೋವನು ಇಂತೆನ್ನುತ್ತಾನೆ, “ನಾನು ಭೂಮಂಡಲದಿಂದ ಸಮಸ್ತವನ್ನು ಅಳಿಸಿಬಿಡುವೆನು.


ನಿಮ್ಮ ಗರ್ವಕ್ಕೆ ಕಾರಣವಾದ ಬಲವನ್ನು ಮುರಿಯುವೆನು. ನಿಮ್ಮ ಮೇಲಿರುವ ಆಕಾಶವನ್ನು ಕಬ್ಬಿಣದಂತೆಯೂ ಹಾಗು ನೀವು ಸಾಗುವಳಿಮಾಡುವ ಭೂಮಿಯನ್ನು ತಾಮ್ರದಂತೆಯೂ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು