Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 33:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು ದೇಶದ ಮೇಲೆ ಬೀಳುವ ಖಡ್ಗವನ್ನು ನೋಡಿದ ಕೂಡಲೆ, ಕೊಂಬನ್ನು ಊದಿ ಸ್ವಜನರನ್ನು ಎಚ್ಚರಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ದೇಶದ ಮೇಲೆ ಬೀಳುವ ಖಡ್ಗವನ್ನು ನೋಡಿದ ಕೂಡಲೆ ಕೊಂಬನ್ನೂದಿ ಸಜ್ಜನರನ್ನು ಎಚ್ಚರಿಸಲಿ; ಕೊಂಬಿನ ಕೂಗನ್ನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದೇಶದ ಮೇಲೆ ಬೀಳುವ ಖಡ್ಗವನ್ನು ನೋಡಿದ ಕೂಡಲೆ ಕೊಂಬನ್ನೂದಿ ಸ್ವಜನರನ್ನು ಎಚ್ಚರಿಸಿದರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಈತನು ಶತ್ರು ಸೈನ್ಯವನ್ನು ನೋಡಿದಾಕ್ಷಣ ತನ್ನ ತುತ್ತೂರಿಯನ್ನೂದಿ ಜನರನ್ನು ಎಚ್ಚರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವನು ಖಡ್ಗವು ದೇಶದ ಮೇಲೆ ಬರುವುದನ್ನು ನೋಡಿ, ಕೊಂಬನ್ನೂದಿ ಜನರನ್ನು ಎಚ್ಚರಿಸಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 33:3
12 ತಿಳಿವುಗಳ ಹೋಲಿಕೆ  

“ತುತ್ತೂರಿಯನ್ನು ಹಿಡಿದು ಊದು. ನನ್ನ ಜನರು ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ಧರ್ಮವಿಧಿಗಳಿಗೆ ದ್ರೋಹಮಾಡಿದ್ದರಿಂದ, ಶತ್ರುವು ಹದ್ದಿನ ಹಾಗೆ ಯೆಹೋವನಾದ ನನ್ನ ನಿವಾಸದ ಮೇಲೆ ಬರುತ್ತಾನೆ.


ನಿಮಗೆ ಕೊಂಬಿನ ಧ್ವನಿಯು ಯಾವ ಸ್ಥಳದಿಂದ ಕೇಳಿಬರುವುದೋ ಆ ಸ್ಥಳಕ್ಕೆ ನಮ್ಮ ಹತ್ತಿರ ಕೂಡಿಬನ್ನಿರಿ. ನಮ್ಮ ದೇವರು ನಮಗೋಸ್ಕರ ಯುದ್ಧ ಮಾಡುವನು” ಎಂದು ಹೇಳಿದೆನು.


ಚೀಯೋನಿನಲ್ಲಿ ಕೊಂಬೂದಿರಿ, ನನ್ನ ಪರಿಶುದ್ಧ ಪರ್ವತದಲ್ಲಿ ಎಚ್ಚರಿಕೆಯ ದಿನ ಮೊಳಗಲಿ. ಸಮಸ್ತ ದೇಶದ ನಿವಾಸಿಗಳು ನಡುಗಲಿ, ಏಕೆಂದರೆ ಯೆಹೋವನ ದಿನವು ಬರುತ್ತದೆ; ಅದು ಸಮೀಪವಾಗಿದೆ.


ಸ್ವರವೆತ್ತಿ ಕೂಗು, ಸಂಕೋಚಪಡಬೇಡ, ಕೊಂಬಿನಂತೆ ಧ್ವನಿಗೈದು ನನ್ನ ಜನರಿಗೆ ಅವರ ದ್ರೋಹಗಳನ್ನು ತಿಳಿಯಪಡಿಸು. ಯಾಕೋಬ ವಂಶದವರಿಗೆ ಅವರ ಪಾಪಗಳನ್ನು ತಿಳಿಸು.


ಪೌಳಿಗೋಡೆಯನ್ನು ಕಟ್ಟುವವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ಕತ್ತಿಯನ್ನು ಸೊಂಟಕ್ಕೆ ಬಿಗಿದುಕೊಂಡು ಕಟ್ಟುತ್ತಿದ್ದನು. ನಾನಂತೂ ಕೊಂಬೂದುವವನೊಬ್ಬನನ್ನು ನನ್ನ ಬಳಿಯಲ್ಲಿರಿಸಿಕೊಂಡಿದ್ದೆ.


“ದೇಶದಲ್ಲಿ ಧ್ವಜವನ್ನೆತ್ತಿರಿ, ರಾಜ್ಯಗಳಲ್ಲೆಲ್ಲಾ ಕೊಂಬೂದಿರಿ, ಜನಾಂಗಗಳನ್ನು ಸಿದ್ಧಮಾಡಿರಿ, ಬಾಬೆಲಿನ ಮೇಲೆ ಬೀಳಲಿಕ್ಕೆ ಅರರಾಟ್, ಮಿನ್ನಿ, ಅಷ್ಕೆನಜ್ ಎಂಬ ರಾಷ್ಟ್ರಗಳನ್ನು ಕರೆದುಕೊಳ್ಳಿರಿ, ಸೋಲಿಸಲು ಸೇನಾಧಿಪತಿಯನ್ನು ನೇಮಿಸಿರಿ, ಅಶ್ವಬಲವನ್ನು ಬಿರುಸಾದ ಮಿಡತೆಯ ದಂಡಿನೋಪಾದಿಯಲ್ಲಿ ಬರಮಾಡಿರಿ.


“ಬೆನ್ಯಾಮೀನ್ ಕುಲದವರೇ, ಯೆರೂಸಲೇಮಿನೊಳಗಿಂದ ವಲಸೆ ಹೋಗಿರಿ, ತೆಕೋವದಲ್ಲಿ ಕೊಂಬನ್ನೂದಿರಿ, ಬೇತ್ ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ, ಏಕೆಂದರೆ ಉತ್ತರ ದಿಕ್ಕಿನಿಂದ ಅತಿನಾಶಕರವಾದ ವಿಪತ್ತು ತಲೆದೋರುತ್ತಿದೆ.


ಯೆಹೂದದಲ್ಲಿ ಸಾರಿರಿ, ಯೆರೂಸಲೇಮಿನೊಳಗೆ ಪ್ರಕಟಿಸುತ್ತಾ, “ದೇಶದಲ್ಲೆಲ್ಲಾ ಕೊಂಬೂದಿರಿ, ಕೂಡಿಬನ್ನಿರಿ ಕೋಟೆಕೊತ್ತಲಗಳ ಊರುಗಳನ್ನು ಸೇರೋಣ ಎಂದು ಕೂಗಿರಿ.


ತುತ್ತೂರಿಯು ಅಸ್ಪಷ್ಟ ಶಬ್ದವನ್ನು ಮೊಳಗಿಸಿದರೆ ಯಾರು ಯುದ್ಧಕ್ಕೆ ಸಿದ್ಧಮಾಡಿಕೊಳ್ಳುವರು?


ನೀನು ದುಷ್ಟನನ್ನು ಎಚ್ಚರಿಸಿದರೂ, ಅವನು ತನ್ನ ದುಷ್ಟತನವನ್ನೂ, ಕೆಟ್ಟಮಾರ್ಗವನ್ನೂ ಬಿಡದೆಹೋದರೆ ತನ್ನ ಅಪರಾಧದಿಂದಲೇ ಸಾಯುವನು; ನೀನೋ ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ.


ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವುದಿಲ್ಲವೋ? ಯೆಹೋವನಿಂದಲ್ಲದೆ ಪಟ್ಟಣಕ್ಕೆ ವಿಪತ್ತು ಸಂಭವಿಸುವುದೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು