Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 33:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನರಪುತ್ರನೇ, “ನಿನ್ನ ಜನರು ಗೋಡೆಗಳ ನೆರಳಿನಲ್ಲಿಯೂ, ಮನೆಯ ಬಾಗಿಲುಗಳಲ್ಲಿಯೂ ನಿನ್ನ ಪ್ರಸ್ತಾಪವನ್ನೆತ್ತಿ ಪರಸ್ಪರವಾಗಿ ಒಬ್ಬರಿಗೊಬ್ಬರು, ‘ಯೆಹೋವನ ಬಾಯಿಂದ ಹೊರಟ ಮಾತೇನು ಕೇಳೋಣ ಬನ್ನಿರಿ’ ಎಂದು ಹೇಳಿಕೊಳ್ಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 “ನರಪುತ್ರನೇ, ನಿನ್ನ ಜನರು ಗೋಡೆಗಳ ನೆರಳಿನಲ್ಲೂ ಮನೆಯ ಬಾಗಿಲುಗಳಲ್ಲೂ ನಿಂತು ನಿನ್ನ ಪ್ರಸ್ತಾಪವನ್ನೆತ್ತಿ ಒಬ್ಬರಿಗೊಬ್ಬರು, ‘ಸರ್ವೇಶ್ವರನ ಬಾಯಿಂದ ಹೊರಟ ಮಾತೇನೆಂದು ಕೇಳೋಣ ಬನ್ನಿ’ ಎಂದು ಹೇಳಿಕೊಳ್ಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನರಪುತ್ರನೇ, ನಿನ್ನ ಜನರು ಗೋಡೆಗಳ ನೆರಳಿನಲ್ಲಿಯೂ ಮನೆಯ ಬಾಗಿಲುಗಳಲ್ಲಿಯೂ ನಿನ್ನ ಪ್ರಸ್ತಾಪವನ್ನೆತ್ತಿ ಪರಸ್ಪರವಾಗಿ ಒಬ್ಬರಿಗೊಬ್ಬರು - ಯೆಹೋವನ ಬಾಯಿಂದ ಹೊರಟ ಮಾತೇನು ಕೇಳೋಣ ಬನ್ನಿರಿ ಎಂದು ಹೇಳಿಕೊಳ್ಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 “‘ನರಪುತ್ರನೇ, ನಿನ್ನ ವಿಷಯದಲ್ಲಿ ನಿನ್ನ ಜನರು ಗೋಡೆಗೆ ಒರಗಿಕೊಂಡೂ ಬಾಗಿಲಿನ ನಡುವೆ ನಿಂತುಕೊಂಡೂ ಮಾತನಾಡಿಕೊಳ್ಳುತ್ತಿದ್ದಾರೆ. ಅವರು ಒಬ್ಬರಿಗೊಬ್ಬರು, “ಬನ್ನಿ, ಯೆಹೋವನು ಹೇಳುವುದನ್ನು ನಾವು ಹೋಗಿ ಕೇಳೋಣ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 “ಮನುಷ್ಯಪುತ್ರನೇ, ನಿನ್ನ ಜನರು ಗೋಡೆಗಳ ನೆರಳಿನಲ್ಲೂ ಮನೆಯ ಬಾಗಿಲುಗಳಲ್ಲೂ ನಿಂತು ನಿಜ ಪ್ರಸ್ತಾಪವನ್ನೆತ್ತಿ ಒಬ್ಬರಿಗೊಬ್ಬರು, ‘ಯೆಹೋವ ದೇವರ ಬಾಯಿಂದ ಹೊರಟ ಮಾತೇನೆಂದು ಕೇಳೋಣ ಬನ್ನಿ’ ಎಂದು ಹೇಳಿಕೊಳ್ಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 33:30
13 ತಿಳಿವುಗಳ ಹೋಲಿಕೆ  

“ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ.


ನೀವು ನಿಮ್ಮ ನಿಮ್ಮ ನೆರೆಹೊರೆಯವರನ್ನೂ ಮತ್ತು ಅಣ್ಣತಮ್ಮಂದಿರನ್ನೂ, ‘ಯೆಹೋವನ ಉತ್ತರವೇನು, ಯೆಹೋವನು ಏನು ನುಡಿದಿದ್ದಾನೆ?’


ಅವರಂತು ದಿನದಿನವೂ ನನ್ನ ದರ್ಶನಕ್ಕಾಗಿ ಬಂದು, ನನ್ನ ಮಾರ್ಗವನ್ನು ತಿಳಿದುಕೊಳ್ಳುವುದರಲ್ಲಿ ಹೆಚ್ಚಳಪಡುತ್ತಾರೆ; ತನ್ನ ದೇವರ ನಿಯಮಗಳನ್ನು ಬಿಡದೆ ಧರ್ಮವನ್ನಾಚರಿಸುವ ಜನಾಂಗವೋ ಎಂಬಂತೆ, ಧೈರ್ಯವಾಗಿ ನನ್ನಿಂದ ನ್ಯಾಯವಿಧಿಗಳನ್ನು ಕೇಳಿಕೊಂಡು ದೇವದರ್ಶನದಲ್ಲಿ ಆನಂದಿಸುತ್ತಾರೆ.


ಯೆಹೋವನು ಹೇಳುವುದೇನೆಂದರೆ, “ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ, ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು, ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.


ನಿಮ್ಮನ್ನು ನೀವೇ ಮೋಸಪಡಿಸಿಕೊಂಡಿದ್ದೀರಿ; ನೀವು ನನ್ನ ಬಳಿಗೆ ಬಂದು, ‘ನಮ್ಮ ದೇವರಾದ ಯೆಹೋವನನ್ನು ನಮಗಾಗಿ ಪ್ರಾರ್ಥಿಸು; ನಮ್ಮ ದೇವರಾದ ಯೆಹೋವನು ಯಾವ ಅಪ್ಪಣೆ ಕೊಡುತ್ತಾನೋ ಅದನ್ನು ನಮಗೆ ತಿಳಿಸು, ಅದರಂತೆಯೇ ನಡೆಯುವೆವು’ ಎಂಬುದಾಗಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನನ್ನನ್ನು ಕಳುಹಿಸಿದಿರಲ್ಲಾ.


ಆಗ ಅವರು, “ಯೆರೆಮೀಯನ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಬಂದ ವಿಷಯ ಎಂದಿಗೂ ತಪ್ಪದು. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ” ಎಂದುಕೊಂಡರು.


“ನರಪುತ್ರನೇ, ಇವರು ತಮ್ಮ ವಿಗ್ರಹಗಳನ್ನು, ಮನಸ್ಸಿನಲ್ಲಿ ನೆಲೆಗೊಳಿಸಿ, ಪಾಪಕಾರಿಯಾದ ಈ ವಿಘ್ನವನ್ನು ತಮ್ಮ ಮುಂದೆ ಇಟ್ಟುಕೊಂಡಿದ್ದಾರೆ; ಇಂಥವರಿಗೆ ನಾನು ದೈವೋತ್ತರವನ್ನು ದಯಪಾಲಿಸುವುದು ಸರಿಯೆ? ಎಂದಿಗೂ ಇಲ್ಲ.”


“ನರಪುತ್ರನೇ, ಇಸ್ರಾಯೇಲಿನ ಹಿರಿಯರನ್ನು ಸಂಬೋಧಿಸಿ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನನ್ನನ್ನು ಪ್ರಶ್ನೆ ಕೇಳುವುದಕ್ಕೆ ಬಂದಿರೋ? ನನ್ನ ಜೀವದಾಣೆ, ನಾನು ನಿಮಗೆ ಉತ್ತರ ಕೊಡುವುದೇ ಇಲ್ಲ’” ಇದು ಕರ್ತನಾದ ಯೆಹೋವನ ನುಡಿ.


ನೀವು ಬಲಿಯರ್ಪಿಸುತ್ತಾ ನಿಮ್ಮ ಮಕ್ಕಳನ್ನು ಆಹುತಿಕೊಟ್ಟು ಇಂದಿನವರೆಗೂ ನಿಮ್ಮನ್ನು ಅಶುದ್ಧ ಮಾಡಿಕೊಳ್ಳುತ್ತಿದ್ದೀರೋ? ಇಸ್ರಾಯೇಲ್ ವಂಶದವರೇ, ನಾನು ನಿಮ್ಮಂಥವರಿಗೆ ದೈವೋತ್ತರವನ್ನು ದಯಪಾಲಿಸಬಹುದೋ? ನನ್ನ ಜೀವದಾಣೆ, ನಿಮಗೆ ದೈವೋತ್ತರವನ್ನು ದಯಪಾಲಿಸುವುದಿಲ್ಲ” ಇದು ಕರ್ತನಾದ ಯೆಹೋವನ ನುಡಿ.


ಅವರು ನಡೆಸಿದ ಬಹು ದುರಾಚಾರಗಳ ನಿಮಿತ್ತ ನಾನು ದೇಶವನ್ನು ಹಾಳುಮಾಡಿದಾಗ ನಾನೇ ಯೆಹೋವನು” ಎಂದು ಅವರಿಗೆ ದೃಢವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು