Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 33:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ನೀನು ಮುಂತಿಳಿಸಿದ್ದು ಸಂಭವಿಸುವಾಗ, ತಮ್ಮ ಮಧ್ಯದಲ್ಲಿ ಪ್ರವಾದಿಯು ಇದ್ದಾನೆ ಎಂದು ಅವರಿಗೆ ತಿಳಿಯುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ನೀನು ಮುಂತಿಳಿಸಿದ್ದು ಸಂಭವಿಸುವಾಗ ಅದು ಈಗ ಸಂಭವಿಸಲಿದೆ, ತಮ್ಮ ಮಧ್ಯೆ ಇದ್ದವನು ಪ್ರವಾದಿಯೇ ಎಂದು ಅವರಿಗೆ ನಿಶ್ಚಿತವಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ನೀನು ಮುಂತಿಳಿಸಿದ್ದು ಸಂಭವಿಸುವಾಗ [ಆಹಾ, ಸಂಭವಿಸಿತು] ತಮ್ಮ ಮಧ್ಯದಲ್ಲಿದ್ದವನು ಪ್ರವಾದಿಯೇ ಎಂದು ಅವರಿಗೆ ನಿಶ್ಚಿತವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆದರೆ ನೀನು ಹಾಡುವ ವಿಷಯಗಳು ಸಂಭವಿಸುವವು. ಆಗ ಜನರೂ, “ನಿಜವಾಗಿಯೂ ನಮ್ಮ ಮಧ್ಯೆ ಒಬ್ಬ ಪ್ರವಾದಿಯು ವಾಸಿಸಿದನಲ್ಲಾ?” ಎಂದು ಅನ್ನುವರು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 “ಯಾವಾಗ ಇದು ಬರುತ್ತದೋ ಆಗ ಅವರಿಗೆ ಪ್ರವಾದಿಯು ತಮ್ಮ ಸಂಗಡ ಇದ್ದಾನೆಂದು ತಿಳಿಯುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 33:33
9 ತಿಳಿವುಗಳ ಹೋಲಿಕೆ  

ಅವರು ಕೇಳಲಿ ಅಥವಾ ಕೇಳದೇ ಇರಲಿ ಏಕೆಂದರೆ ಅವರು ತಿರುಗಿ ಬೀಳುವ ವಂಶದವರು. ಆದರೆ ಒಬ್ಬ ಪ್ರವಾದಿಯು ತಮ್ಮ ಮಧ್ಯದಲ್ಲಿ ಇದ್ದಾನೆಂದು ತಿಳಿದುಕೊಳ್ಳುವರು.”


ಹಿತ ಸಮಾಚಾರವನ್ನು ಸಾರುವ ಪ್ರವಾದಿಯೋ ಯೆಹೋವನಿಂದ ನಿಜವಾಗಿ ಕಳುಹಿಸಲ್ಪಟ್ಟವನೆಂದು ಅವನ ಮಾತು ಕೈಗೂಡಿದ ಮೇಲೇ ತಿಳಿಯತಕ್ಕದ್ದು” ಎಂದು ಹೇಳಿದನು.


‘ನಮ್ಮ ಪಾದಗಳಿಗೆ ಅಂಟಿರುವ ನಿಮ್ಮ ಊರಿನ ಧೂಳನ್ನು ಕೂಡ ನಿಮ್ಮ ವಿರುದ್ಧವಾಗಿ ಝಾಡಿಸಿಬಿಡುತ್ತೇವೆ. ಆದಾಗ್ಯೂ ದೇವರ ರಾಜ್ಯವು ಸಮೀಪಿಸಿದೆ ಎಂಬುದನ್ನು ಮಾತ್ರ ನೀವು ಗಮನದಲ್ಲಿಡಿ’ ಎಂಬುದಾಗಿ ಹೇಳಿರಿ.


ಅವರು ನಡೆಸಿದ ಬಹು ದುರಾಚಾರಗಳ ನಿಮಿತ್ತ ನಾನು ದೇಶವನ್ನು ಹಾಳುಮಾಡಿದಾಗ ನಾನೇ ಯೆಹೋವನು” ಎಂದು ಅವರಿಗೆ ದೃಢವಾಗುವುದು.


ಇಸ್ರಾಯೇಲರ ಅರಸನು ತನ್ನ ಬಟ್ಟೆಗಳನ್ನು ಹರಿದುಕೊಂಡನೆಂಬುದನ್ನು ದೇವರ ಮನುಷ್ಯನಾದ ಎಲೀಷನು ಕೇಳಿ ದೂತರ ಮುಖಾಂತರವಾಗಿ ಅವನಿಗೆ, “ನೀನು, ನಿನ್ನ ಬಟ್ಟೆಗಳನ್ನು ಹರಿದುಕೊಂಡದ್ದೇಕೆ? ಅವನನ್ನು ನನ್ನ ಬಳಿಗೆ ಕಳುಹಿಸು, ಇಸ್ರಾಯೇಲರಲ್ಲಿ ಒಬ್ಬ ಪ್ರವಾದಿಯಿದ್ದಾನೆಂಬುದು ಅವನಿಗೆ ಗೊತ್ತಾಗಲಿ” ಎಂದು ಹೇಳಿ ಕಳುಹಿಸಿದನು.


ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು,


‘ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣಮಾಡಿ, ನಿಶ್ಚಿಂತರಾದ ಕೂಷ್ಯರನ್ನು ಹೆದರಿಸುವರು; ಐಗುಪ್ತದ ನಾಶದ ದಿನದಲ್ಲಿ ಆದ ಹಾಗೆ ಕೂಷ್ಯರಿಗೂ ಸಂಕಟವು ಉಂಟಾಗುವುದು; ಇಗೋ, ಆ ದಿನ ಬಂತು!’”


ಕರ್ತನಾದ ಯೆಹೋವನು ಇಂತೆನ್ನುತ್ತಾನೆ. “ಇಗೋ! ಇದು ಬಂತು, ಇದು ಸಂಭವಿಸಿತು; ನಾನು ಮುಂತಿಳಿಸಿದ ದಿನವು ಇದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು