ಯೆಹೆಜ್ಕೇಲನು 33:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದರೆ ಕಾವಲುಗಾರನು ಬೀಳುವ ಖಡ್ಗವನ್ನು ನೋಡಿಯೂ, ಕೊಂಬನ್ನೂದದೆ, ಸ್ವಜನರನ್ನು ಎಚ್ಚರಿಸದೆ ಇದ್ದರೆ, ಖಡ್ಗವು ಬಿದ್ದು ಆ ಜನರೊಳಗೆ ಯಾರನ್ನೇ ಆಗಲಿ ನಾಶಮಾಡಿದರೆ, ತನ್ನ ಅಧರ್ಮದಲ್ಲೇ ನಾಶಗೊಂಡ ಆ ಮನುಷ್ಯನ ಮರಣಕ್ಕೆ ಕಾವಲುಗಾರನನ್ನೇ ಹೊಣೆಮಾಡುವೆನು.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆದರೆ ಕಾವಲುಗಾರನೇ ಬೀಳುವ ಖಡ್ಗವನ್ನು ನೋಡಿಯೂ ಕೊಂಬನ್ನೂದದೆ, ಸಜ್ಜನರನ್ನು ಎಚ್ಚರಿಸದೆ ಹೋದರೆ ಖಡ್ಗ ಬಿದ್ದು ಆ ಜನರೊಳಗೆ ಯಾವನನ್ನೇ ಆಗಲಿ ನಾಶಮಾಡಿದರೆ, ತನ್ನ ಅಧರ್ಮದಲ್ಲೇ ನಾಶಗೊಂಡ ಆ ಮನುಷ್ಯನ ಮರಣಕ್ಕೆ, ಕಾವಲುಗಾರನೇ ಹೊಣೆ. ಅವನಿಗೆ ನಾನು ಮುಯ್ಯಿ ತೀರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆದರೆ ಕಾವಲುಗಾರನು ಬೀಳುವ ಖಡ್ಗವನ್ನು ನೋಡಿಯೂ ಕೊಂಬನ್ನೂದದೆ ಸ್ವಜನರನ್ನು ಎಚ್ಚರಿಸದೆ ಇರುವಲ್ಲಿ ಖಡ್ಗವು ಬಿದ್ದು ಆ ಜನರೊಳಗೆ ಯಾವನನ್ನೇ ಆಗಲಿ ನಾಶಮಾಡಿದರೆ ತನ್ನ ಅಧರ್ಮದಲ್ಲೇ ನಾಶಗೊಂಡ ಆ ಮನುಷ್ಯನ ಮರಣಕ್ಕೆ ಹೊಣೆಯಾದ ಕಾವಲುಗಾರನಿಗೆ ಮುಯ್ಯಿತೀರಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 “‘ಆದರೆ ವೈರಿಯು ಬರುವಂತದ್ದನ್ನು ಆ ಕಾವಲುಗಾರನು ಕಂಡರೂ, ಜನರನ್ನು ಎಚ್ಚರಿಸಲು ತುತ್ತೂರಿಯನ್ನು ಊದದಿದ್ದರೆ ವೈರಿಯು ಅವರನ್ನು ಸೆರೆಹಿಡಿದು ಕೈದಿಗಳನ್ನಾಗಿ ಮಾಡಿ ಕೊಂಡೊಯ್ಯುವನು. ಆ ಮನುಷ್ಯನು ಪಾಪಮಾಡಿದ್ದರಿಂದ ಆ ಶಿಕ್ಷೆಯು ಅವನಿಗೆ ದೊರಕಿತು. ಆದರೆ, ಕಾವಲುಗಾರನು ಕೂಡಾ ಅವನ ಮರಣಕ್ಕೆ ಕಾರಣನಾಗುವನು.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದರೆ ಕಾವಲುಗಾರನು ಬರುವ ಖಡ್ಗವನ್ನು ನೋಡಿ, ಒಂದು ವೇಳೆ ಕೊಂಬನ್ನು ಊದದೆ ಜನರನ್ನೂ ಎಚ್ಚರಿಸದೆ ಹೋದರೆ, ಆಗ ಖಡ್ಗವು ಬಿದ್ದು ಆ ಜನರೊಳಗೆ ಯಾರನ್ನಾದರೂ ನಾಶಮಾಡಿದರೆ, ಅವನು ತನ್ನ ಪಾಪದಲ್ಲಿಯೇ ನಾಶವಾಗುವನು. ಆದರೆ ನಾನು ಅವನ ಸಾವಿಗೆ ಕಾವಲುಗಾರನನ್ನೇ ಹೊಣೆಮಾಡುವೆನು.’ ಅಧ್ಯಾಯವನ್ನು ನೋಡಿ |
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನನ್ನ ಜೀವದಾಣೆ, ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ; ಅವರು ನನ್ನ ಕುರಿಗಳ ಲೆಕ್ಕವನ್ನು ನನಗೆ ಒಪ್ಪಿಸಬೇಕು; ನನ್ನ ಕುರಿಗಳನ್ನು ಮೇಯಿಸುವ ಕೆಲಸದಿಂದ ಅವರನ್ನು ತೆಗೆದುಬಿಡುವೆನು; ಆ ಕುರುಬರು ಇನ್ನು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳುವುದಿಲ್ಲ; ನನ್ನ ಕುರಿಗಳು ಆಹಾರವಾಗಿ, ಅವರ ಬಾಯಿಗೆ ಬೀಳದಂತೆ ಅವುಗಳನ್ನು ರಕ್ಷಿಸುವೆನು.”