Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 33:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “ಆದುದರಿಂದ ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರಿಗೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ; ನೀನು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ದೂತನಾಗಿ ಅವರನ್ನು ಎಚ್ಚರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ನರಪುತ್ರನೇ, ನಾನು ನಿನ್ನನ್ನು ಇಸ್ರಯೇಲ್ ವಂಶದವರಿಗೆ ಕಾವಲುಗಾರನಾಗಿ ನೇಮಿಸಿದ್ದೇನೆ; ನೀನು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ದೂತನಾಗಿ ಅವರನ್ನು ಎಚ್ಚರಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರಿಗೆ ಕಾವಲುಗಾರನನ್ನಾಗಿ ನೇವಿುಸಿದ್ದೇನೆ; ನೀನು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ ನನ್ನ ದೂತನಾಗಿ ಅವರನ್ನು ಎಚ್ಚರಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ಈಗ, ನರಪುತ್ರನೇ, ನಾನು ನಿನ್ನನ್ನು ಇಸ್ರೇಲಿನ ಕಾವಲುಗಾರನನ್ನಾಗಿ ಆರಿಸಿದ್ದೇನೆ. ನನ್ನ ಬಾಯಿಂದ ನೀನು ಸಂದೇಶವನ್ನು ಕೇಳಿದಾಗ, ನನ್ನ ಪರವಾಗಿ ನೀನು ಜನರನ್ನು ಎಚ್ಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇಲಿನ ಮನೆತನದವರಿಗೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಆದ್ದರಿಂದ ನೀನು ನನ್ನ ಬಾಯಿಂದ ಹೊರಡುವ ವಾಕ್ಯವನ್ನು ಕೇಳಿ, ನನ್ನ ಪರವಾಗಿ ಅವರನ್ನು ಎಚ್ಚರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 33:7
25 ತಿಳಿವುಗಳ ಹೋಲಿಕೆ  

“ಯೆಹೋವನು ಇಂತೆನ್ನುತ್ತಾನೆ, ನೀನು ಯೆಹೋವನ ಆಲಯದ ಪ್ರಾಕಾರದಲ್ಲಿ ನಿಂತು ಆ ಮಂದಿರದಲ್ಲಿ ಆರಾಧಿಸುವುದಕ್ಕೆ ಬರುವ ಯೆಹೂದದ ಎಲ್ಲಾ ಊರಿನವರಿಗೆ ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು, ಒಂದು ಮಾತನ್ನೂ ಬಿಡಬೇಡ.


“ನೀವು ಹೋಗಿ, ದೇವಾಲಯದಲ್ಲಿ ನಿಂತುಕೊಂಡು ಈ ಜೀವ ವಾಕ್ಯಗಳನ್ನು ಜನರಿಗೆಲ್ಲಾ ತಿಳಿಸಿರಿ” ಅಂದನು.


ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿರುವುದರಿಂದ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ದುಃಖಿಸದೆ ಸಂತೋಷದಿಂದ ಇದನ್ನು ಮಾಡುವಂತೆ ನಡೆದುಕೊಳ್ಳಿರಿ. ಏಕೆಂದರೆ ಅವರು ವ್ಯಸನದಿಂದಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ.


ಹೀಗಿರಲು ನೀನು ಎದ್ದು ನಡುಕಟ್ಟಿಕೊಂಡು ನಾನು ಆಜ್ಞಾಪಿಸುವುದನ್ನೆಲ್ಲಾ ಅವರಿಗೆ ಹೇಳು. ನೀನು ಅವರಿಗೆ ಭಯಪಡಬೇಡ; ಭಯಪಟ್ಟರೆ ನಾನು ನಿನ್ನನ್ನು ಅವರ ಮುಂದೆ ಹೆದರಿಸುವೆನು.


ಯೆರೂಸಲೇಮೇ, ನಾನು ನಿನ್ನ ಪೌಳಿಗೋಡೆಗಳಲ್ಲಿ ಕಾವಲುಗಾರರನ್ನು ನೇಮಿಸಿದ್ದೇನೆ; ಅವರು ಹಗಲೂ, ಇರುಳೂ ಮೌನವಾಗಿರರು. ಯೆಹೋವನನ್ನು ಸ್ಮರಿಸುವವರೇ,


ಊರಲ್ಲಿ ಸುತ್ತುತ್ತಿರುವ ಕಾವಲುಗಾರರು ನನ್ನನ್ನು ಕಂಡುಹಿಡಿದು, ಹೊಡೆದು ಗಾಯಪಡಿಸಿದರು, ಪೌಳಿಯ ಕಾವಲುಗಾರರು ಮೇಲೊದಿಕೆಯನ್ನು ನನ್ನಿಂದ ಕಿತ್ತುಕೊಂಡರು.


ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ, ಕೆಲವರನ್ನು ಪ್ರವಾದಿಗಳನ್ನಾಗಿಯೂ, ಕೆಲವರನ್ನು ಸುವಾರ್ತಿಕರನ್ನಾಗಿಯೂ, ಕೆಲವರನ್ನು ಸಭಾಪಾಲಕರನ್ನಾಗಿಯೂ, ಬೋಧಕರನ್ನಾಗಿಯೂ ನೇಮಿಸಿದನು.


ನಾನು ಸಹ ಕಲಿತುಕೊಂಡ ಮೊದಲನೆಯ ಸಂಗತಿಗಳೊಳಗೆ ಪ್ರಮುಖವಾದ ಸಂಗತಿಯನ್ನೇ ನಿಮಗೆ ತಿಳಿಸಿದ್ದೇನೆ ಅದೇನೆಂದರೆ ಧರ್ಮಶಾಸ್ತ್ರದಲ್ಲಿ ತಿಳಿಸಿರುವ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳ ನಿವಾರಣೆಗಾಗಿ ಸತ್ತನು; ಹೂಣಲ್ಪಟ್ಟನು;


ನಾನು ನಿಮಗೆ ತಿಳಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನೆಂದರೆ, ಕರ್ತನಾದ ಯೇಸು ತಾನು ಹಿಡಿದು ಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು,


ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳುವುದಕ್ಕೂ, ಸಭೆಯಲ್ಲಿಯೂ, ಮನೆಮನೆಯಲ್ಲಿಯೂ, ಉಪದೇಶಿಸುವದಕ್ಕೂ ಹಿಂತೆಗೆಯದೆ


ಅವರಲ್ಲಿ ಉತ್ತಮನೂ ಮುಳ್ಳಿನ ಪೊದೆಗೆ ಸಮಾನ, ಸತ್ಯವಂತನೂ ಕೂಡ ಮುಳ್ಳುಬೇಲಿಗಿಂತ ಕಡೆ. ನಿನ್ನ ಕಾವಲುಗಾರರು ಮುಂತಿಳಿಸಿದ ನಿನ್ನ ದಂಡನೆಯ ದಿನ ಬಂದಿದೆ. ಈಗ ನಿನ್ನ ಜನರಿಗೆ ಭ್ರಾಂತಿ ಹಿಡಿಯುವುದು.


ಒಂದು ದಿನವು ಬರುವುದು, ಆಗ ಎಫ್ರಾಯೀಮಿನ ಗುಡ್ಡಗಳ ಮೇಲಿರುವ ಕಾವಲುಗಾರರು, ಏಳಿರಿ, ಚೀಯೋನಿಗೆ, ನಮ್ಮ ದೇವರಾದ ಯೆಹೋವನ ಸನ್ನಿಧಾನಕ್ಕೆ ಹೋಗೋಣ ಬನ್ನಿ’ ಎಂದು ಕೂಗುವರು” ಎಂದು ಹೇಳುವನು.


ಕನಸು ಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ. ನನ್ನ ಮಾತನ್ನು ಕೇಳಿದವನೋ ನನ್ನ ಮಾತನ್ನು ಯಥಾರ್ಥವಾಗಿ ನುಡಿಯಲಿ.


ಯೆಹೋವನು ನನಗೆ, “ನಾನು ನಿನ್ನನ್ನು ನನ್ನ ಜನವೆಂಬ ಅದಿರಿಗೆ ಶೋಧಕನನ್ನಾಗಿ ನೇಮಿಸಿದ್ದೇನೆ; ನೀನು ಅವರ ನಡತೆಯನ್ನು ಪರೀಕ್ಷಿಸಿ ತಿಳಿದುಕೊಳ್ಳಬೇಕು.


ಊರಿನಲ್ಲಿ ತಿರುಗುವ ಕಾವಲುಗಾರರ ಕೈಗೆ ಸಿಕ್ಕಿದೆನು, “ನನ್ನ ಪ್ರಾಣಪ್ರಿಯನನ್ನು ಕಂಡಿರಾ?” ಎಂದು ಅವರನ್ನು ವಿಚಾರಿಸಿದೆನು.


ಯೆಹೂದ ಪಟ್ಟಣಗಳಲ್ಲಿ ವಾಸಿಸುವ ನಿಮ್ಮ ಸಹೋದರರೊಳಗೆ ಜೀವಹತ್ಯ ಸಂಬಂಧದಲ್ಲಿಯಾಗಲಿ, ಧರ್ಮಶಾಸ್ತ್ರದ ಆಯಾ ಆಜ್ಞಾವಿಧಿ ನ್ಯಾಯಗಳ ಸಂಬಂಧದಲ್ಲಿಯಾಗಲಿ ವ್ಯಾಜ್ಯವುಂಟಾಗಿ, ಅದು ನಿಮ್ಮ ಮುಂದೆ ವಿಚಾರಣೆಗೆ ಬಂದರೆ, ನಿಮ್ಮ ಸಹೋದರರು ಯೆಹೋವನ ದೃಷ್ಟಿಯಲ್ಲಿ ಅಪರಾಧಿಗಳಾಗದಂತೆ ನೀವು ಅವರೊಂದಿಗೆ ದೇವರ ಕೋಪಕ್ಕೆ ಗುರಿಯಾಗದಂತೆ ಅವರನ್ನು ಎಚ್ಚರಿಸಿರಿ. ಹೀಗೆ ಮಾಡುವುದಾದರೆ ನೀವು ನಿರ್ದೋಷಿಗಳಾಗಿರುವಿರಿ.


ಅದಕ್ಕೆ ಮೀಕಾಯೆಹುವು, “ಯೆಹೋವನಾಣೆ, ಯೆಹೋವನು ಹೇಳುವುದನ್ನೇ ನುಡಿಯುತ್ತೇನೆ” ಎಂದು ಉತ್ತರಕೊಟ್ಟನು.


ದೂಮದ ಬಗ್ಗೆ ದೈವೋಕ್ತಿ. ಆತನು ಸೇಯೀರಿನಿಂದ ನನ್ನನ್ನು ಕರೆದು, “ಕಾವಲುಗಾರನೇ, ಈಗ ರಾತ್ರಿ ಎಷ್ಟು ಸಮಯವಾಯಿತು? ಕಾವಲುಗಾರನೇ, ರಾತ್ರಿ ಸಮಯ ಎಷ್ಟು ಕಳೆಯಿತು


ನನ್ನ ಕೋವರದಲ್ಲಿ ನಿಂತುಕೊಳ್ಳುವೆನು. ಬುರುಜಿನ ಮೇಲೆ ನೆಲೆಯಾಗಿರುವೆನು. ಯೆಹೋವನು ನನಗೆ ಏನು ಹೇಳುವನೋ ನನ್ನ ಆಕ್ಷೇಪಣೆಯನ್ನು ನಿವಾರಿಸಿಕೊಳ್ಳಲು ಯಾವ ಉತ್ತರ ಕೊಡಬೇಕೋ ಎಂದು ಎದುರುನೋಡುವೆನು ಅಂದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು