ಯೆಹೆಜ್ಕೇಲನು 33:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಾನು ದುಷ್ಟನಿಗೆ ದುಷ್ಟನೇ, ‘ನೀನು ಖಂಡಿತವಾಗಿ ಸಾಯುವೆ’ ಎಂದು ಹೇಳುವಾಗ, ನೀನು ಆ ದುಷ್ಟನನ್ನು ತನ್ನ ದುರ್ಮಾರ್ಗದಿಂದ ತಪ್ಪಿಸಿ, ಅವನನ್ನು ಎಚ್ಚರಗೊಳಿಸದೆ ಹೋದರೆ, ಅವನು ತನ್ನ ಅಪರಾಧದಿಂದಲೇ ಸಾಯಬೇಕಾಗುವುದು; ಅವನ ಮರಣಕ್ಕೆ ಹೊಣೆಯಾದ ನಿನಗೆ ನಾನು ಮುಯ್ಯಿತೀರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನಾನು ದುಷ್ಟನಿಗೆ - ‘ದುಷ್ಟನೇ, ನೀನು ಸತ್ತೇಸಾಯುವೆ’ ಎಂದು ನುಡಿಯುವಾಗ ನೀನು ಆ ದುಷ್ಟನನ್ನು ತನ್ನ ದುರ್ಮಾರ್ಗದಿಂದ ತಪ್ಪಿಸಲು ಅವನನ್ನು ಎಚ್ಚರಪಡಿಸದೆಹೋದರೆ ಅವನು ತನ್ನ ಅಪರಾಧದಿಂದಲೇ ಸಾಯಬೇಕಾಗುವುದು; ಅವನ ಮರಣಕ್ಕೆ ಹೊಣೆಯಾದ ನಿನಗೆ ಮುಯ್ಯಿತೀರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನಾನು ದುಷ್ಟನಿಗೆ - ದುಷ್ಟನೇ, ಸತ್ತೇಸಾಯುವಿ ಎಂದು ನುಡಿಯುವಾಗ ನೀನು ಆ ದುಷ್ಟನನ್ನು ತನ್ನ ದುರ್ಮಾರ್ಗದಿಂದ ತಪ್ಪಿಸಲು ಅವನನ್ನು ಎಚ್ಚರಪಡಿಸದೆ ಹೋದರೆ ಅವನು ತನ್ನ ಅಪರಾಧದಿಂದಲೇ ಸಾಯಬೇಕಾಗುವದು; ಅವನ ಮರಣಕ್ಕೆ ಹೊಣೆಯಾದ ನಿನಗೆ ನಾನು ಮುಯ್ಯಿತೀರಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ‘ಈ ಕೆಟ್ಟ ಮನುಷ್ಯನು ಸಾಯುವನು’ ಎಂದು ನಾನು ಹೇಳಿದರೆ, ನೀನು ಹೋಗಿ ಆ ಮನುಷ್ಯನನ್ನು ಎಚ್ಚರಿಸಬೇಕು. ಆದರೆ ನೀನು ಅವನನ್ನು ಎಚ್ಚರಿಸದೆ ಹೋದರೆ, ಅವನ ಜೀವಿತವನ್ನು ಬದಲಾಯಿಸಿಕೊಳ್ಳಲು ಹೇಳದೆ ಹೋದರೆ, ಪಾಪಮಾಡಬೇಡ ಎಂದು ಹೇಳದೆ ಹೋದರೆ, ಆ ದುಷ್ಟನು ಸಾಯುವನು. ಯಾಕೆಂದರೆ, ಅವನು ಪಾಪಮಾಡಿದನು. ಆದರೆ ಅವನ ಮರಣಕ್ಕೆ ನಿನ್ನನ್ನು ಕಾರಣನನ್ನಾಗಿ ಮಾಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯಾವಾಗ ನಾನು ದುಷ್ಟನಿಗೆ, ‘ದುಷ್ಟ ಮನುಷ್ಯನೇ, ನೀನು ನಿಶ್ಚಯವಾಗಿ ಸಾಯುವೆ,’ ಎಂದು ಹೇಳುವಾಗ ಒಂದು ವೇಳೆ ನೀನು ಅವನೊಂದಿಗೆ ಮಾತನಾಡದೆ ಅವನ ದುರ್ಮಾರ್ಗಗಳಿಂದ ತಪ್ಪಿಸಲು ಅವನನ್ನು ಎಚ್ಚರಿಸದಿದ್ದರೆ ಆ ದುಷ್ಟ ಮನುಷ್ಯನು ತನ್ನ ಪಾಪಗಳಿಂದಲೇ ಸಾಯಬೇಕಾಗುವದು; ಆದರೆ ಅವನ ಸಾವಿಗೆ ನಿನ್ನನ್ನೇ ಹೊಣೆಮಾಡುವೆನು. ಅಧ್ಯಾಯವನ್ನು ನೋಡಿ |