Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 34:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 (ಟಗರುಹೋತಗಳೇ,) ಒಳ್ಳೆಯ ಮೇವನ್ನು ನೀವು ಮೇದುಬಿಟ್ಟು ಉಳಿದ ಮೇವನ್ನು ತುಳಿದು ಕಾಲಕಸ ಮಾಡಿದ್ದು ಅಲ್ಪಕಾರ್ಯವೋ? ತಿಳಿನೀರನ್ನು ಕುಡಿದುಬಿಟ್ಟು, ಉಳಿದದ್ದನ್ನು ಕಾಲಿನಿಂದ ಕಲಕಿ ಹೊಲಸು ಮಾಡಿದ್ದು ಸಣ್ಣ ಕೆಲಸವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 (ಟಗರು ಹೋತಗಳೇ,) ಒಳ್ಳೆಯ ಮೇವನ್ನು ನೀವು ಮೇದುಬಿಟ್ಟು ಮಿಕ್ಕ ಮೇವನ್ನು ತುಳಿದು, ಕಾಲಕಸ ಮಾಡಿದ್ದು ಅಲ್ಪಕಾರ್ಯವೋ? ತಿಳಿನೀರನ್ನು ಕುಡಿದುಬಿಟ್ಟು ಮಿಕ್ಕದ್ದನ್ನು ಕಾಲಿನಿಂದ ಕಲಕಿ ಬದಿಮಾಡಿದ್ದು ಸಣ್ಣ ಕೆಲಸವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 [ಟಗರುಹೋತಗಳೇ,] ಒಳ್ಳೆಯ ಮೇವನ್ನು ನೀವು ಮೇದುಬಿಟ್ಟು ವಿುಕ್ಕ ಮೇವನ್ನು ತುಳಿದು ಕಾಲಕಸಮಾಡಿದ್ದು ಅಲ್ಪಕಾರ್ಯವೋ? ತಿಳಿನೀರನ್ನು ಕುಡಿದುಬಿಟ್ಟು ವಿುಕ್ಕದ್ದನ್ನು ಕಾಲಿನಿಂದ ಕಲಕಿ ಬದಿಮಾಡಿದ್ದು ಸಣ್ಣ ಕೆಲಸವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನೀವು ಒಳ್ಳೆಯ ದೇಶದಲ್ಲಿ ಬೆಳೆಯುವ ಹುಲ್ಲನ್ನು ಮೇಯಬಹುದು. ಆದ್ದರಿಂದ ಬೇರೆ ಕುರಿಗಳು ಮೇಯಬೇಕಾದ ಹುಲ್ಲನ್ನು ನೀವು ಯಾಕೆ ತುಳಿದು ಹಾಳುಮಾಡುವಿರಿ? ನೀವು ಶುದ್ಧವಾದ ನೀರು ಬೇಕಾದಷ್ಟು ಕುಡಿಯಬಹುದು. ಆದರೆ ಬೇರೆ ಕುರಿಗಳು ನೀರು ಕುಡಿಯದಂತೆ ಯಾಕೆ ನೀರನ್ನು ಕದಡಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಒಳ್ಳೆಯ ಮೇವನ್ನು ಚೆನ್ನಾಗಿ ಮೇದು ಮಿಕ್ಕ ಮೇವನ್ನು ತುಳಿದು ಕಸಮಾಡಿದ್ದು ಅಲ್ಪಕಾರ್ಯವೋ? ತಿಳಿನೀರನ್ನು ಕುಡಿದು ಮಿಕ್ಕಿದ್ದನ್ನು ಕಾಲಿನಿಂದ ಕಲಕಿ ಹೊಲಸು ಮಾಡಿದ್ದು ಸಣ್ಣ ಕೆಲಸವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 34:18
16 ತಿಳಿವುಗಳ ಹೋಲಿಕೆ  

ಅಯ್ಯೋ ಧರ್ಮೋಪದೇಶಕರೇ, ದೈವಿಕ ಜ್ಞಾನದ ಬೀಗದ ಕೈಯನ್ನು ನಿಮ್ಮಲ್ಲೇ ಇಟ್ಟುಕೊಂಡಿದ್ದೀರಿ. ನೀವೂ ಒಳಕ್ಕೆ ಪ್ರವೇಶಿಸಲಿಲ್ಲ, ಒಳಕ್ಕೆ ಹೋಗ ಬಯಸುವವರಿಗೂ ಅಡ್ಡಿಮಾಡಿದೀರಿ” ಅಂದನು.


“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.


ಅದಕ್ಕೆ ಯೆಶಾಯನು ಹೀಗೆ ಹೇಳಿದನು, “ದಾವೀದನ ಮನೆತನದವರೇ ಕೇಳಿರಿ, ಮನುಷ್ಯರನ್ನು ಬೇಸರಗೊಳಿಸುವುದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವರನ್ನು ಸಹ ಬೇಸರಗೊಳಿಸುವಿರಾ?


ಕರ್ತನೇ, ಯೆಹೋವನೇ! ಇದು ನಿನ್ನ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದರೂ ನನ್ನ ಮುಂದಿನ ಸಂತಾನದ ವಿಷಯದಲ್ಲಿಯೂ ವಾಗ್ದಾನ ಮಾಡಿರುವೆ. ಕರ್ತನೇ, ಯೆಹೋವನೇ! ನೀನು ಮಾನವರಾದ ನಮ್ಮೊಂದಿಗೆ ಹೀಗೆ ವರ್ತಿಸುವುದು ಎಂಥಾ ಭಾಗ್ಯ.


ನೀನು ಹಾಲೂ ಮತ್ತು ಜೇನೂ ಹರಿಯುವ ದೇಶದಿಂದ ಕರೆದುಕೊಂಡು ಬಂದು ನಮ್ಮನ್ನು ಮರುಭೂಮಿಯಲ್ಲಿ ಸಾಯಿಸುವುದು ನಿನಗೆ ಸಾಕಾಗಲಿಲ್ಲವೋ? ನೀನು ನಮ್ಮ ಮೇಲೆ ದೊರೆತನ ಮಾಡಬೇಕು ಎಂದು ಕೋರುತ್ತಿಯೋ?


ಇಸ್ರಾಯೇಲರ ದೇವರಾದ ಯೆಹೋವನು ತನ್ನ ಗುಡಾರದ ಸೇವಾಕಾರ್ಯವನ್ನು ಮಾಡುವುದಕ್ಕೂ, ಸರ್ವಸಮೂಹದವರಿಗೋಸ್ಕರ ಸೇವೆಯನ್ನು ಮಾಡುವುದಕ್ಕೂ ನಿಮ್ಮನ್ನು ಹತ್ತಿರ ಬರಮಾಡಿಕೊಂಡು, ಸಮೂಹದವರಿಂದ ನಿಮ್ಮನ್ನು ಪ್ರತ್ಯೇಕಿಸಿದ್ದು ನಿಮಗೆ ಅಲ್ಪವಾಗಿ ತೋರುತ್ತದೋ?


ಹೊಲಗದ್ದೆಗಳನ್ನು ದುರಾಶೆಯಿಂದ ಆಕ್ರಮಿಸಿಕೊಳ್ಳುತ್ತಾರೆ. ಮನೆಗಳನ್ನು ಲೋಭದಿಂದ ಅಪಹರಿಸುತ್ತಾರೆ. ಮನೆಯನ್ನೂ, ಮನೆಯವನನ್ನೂ ಮತ್ತು ಅವನ ಸ್ವತ್ತನ್ನೂ ತುಳಿದುಬಿಡುತ್ತಾರೆ.


“ನರಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನ ವಿಷಯವಾಗಿ ಶೋಕ ಗೀತೆಯನ್ನು ಹಾಡಿ ಅವನಿಗೆ ಹೀಗೆ ನುಡಿ, ‘ನೀನು ಜನಾಂಗಗಳಲ್ಲಿ ಸಿಂಹದ ಮರಿಗೆ ಸಮನಾಗಿರುವೆ ಮತ್ತು ಸಮುದ್ರಗಳಲ್ಲಿರುವ ತಿಮಿಂಗಿಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇದಿಸಿಕೊಂಡು ಬಂದು, ನೀರನ್ನು ನಿನ್ನ ಕಾಲುಗಳಿಂದ ಕಲಕಿ, ಜನಾಂಗಗಳ ಹೊಳೆಗಳನ್ನೂ ತುಳಿದು ಬದಿಮಾಡಿದೆ.’”


ಆದರೆ ನೀನು ನಡೆದ ದುರ್ಮಾರ್ಗವು ಅವರು ನಡೆದಂಥದಲ್ಲ, ನಿನ್ನ ಅಸಹ್ಯಕಾರ್ಯಗಳು ಅವರು ನಡೆಸಿದಂಥವುಗಳಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸರ್ವದಾ ಅವರಿಗಿಂತ ಬಹುಕೆಟ್ಟವಳಾಗಿ ನಡೆದುಕೊಂಡೆ.”


“ಇದಲ್ಲದೆ ನೀನು ನನಗೆ ಹೆತ್ತ ಗಂಡು ಮತ್ತು ಹೆಣ್ಣು ಮಕ್ಕಳನ್ನು ಹಿಡಿದು ಮೂರ್ತಿಗಳಿಗೆ ಆಹಾರವಾಗಲೆಂದು ಯಜ್ಞಮಾಡಿದೆ. ನಿನ್ನ ವ್ಯಭಿಚಾರವು ಅಲ್ಪಕಾರ್ಯವೆಂದು ಭಾವಿಸಿದಿಯೋ?


ಅದಕ್ಕೆ ಲೇಯಳು, “ನೀನು ನನ್ನ ಗಂಡನನ್ನು ತೆಗೆದುಕೊಂಡದ್ದು ಸಾಲದೋ? ನನ್ನ ಮಗನು ತಂದ ಕಾಮಜನಕ ಹಣ್ಣುಗಳನ್ನೂ ತೆಗೆದುಕೊಳ್ಳಬೇಕೆಂದು ಅಪೇಕ್ಷಿಸುತ್ತೀಯಾ?” ಎಂದು ಹೇಳಲು ರಾಹೇಲಳು, “ಒಳ್ಳೆಯದು, ನೀನು ನಿನ್ನ ಮಗನು ತಂದ ಹಣ್ಣುಗಳನ್ನು ನನಗೆ ಕೊಟ್ಟರೆ ಗಂಡನು ಈ ಹೊತ್ತು ರಾತ್ರಿ ನಿನ್ನಲ್ಲೇ ಇರಲಿ” ಎಂದಳು.


ದುಷ್ಟರಿಂದ ಸೋತ ಶಿಷ್ಟನು, ಹಾಳು ಬಾವಿ ಮತ್ತು ತುಳಿದಾಡಿದ ಒರತೆ.


ನೀವು ತುಳಿದು ಕಾಲಕಸ ಮಾಡಿದ್ದನ್ನು ನನ್ನ ಕುರಿಗಳು ಮೇಯಬೇಕಾಯಿತು; ನೀವು ಕಾಲಿನಿಂದ ಕಲಕಿ ಹೊಲಸು ಮಾಡಿದ್ದನ್ನು ಅವು ಕುಡಿಯಬೇಕಾಯಿತು.”


ಏಕೆಂದರೆ ನೀಚನು ನೀಚವಾಗಿ ಮಾತನಾಡುವನು. ಅವನ ಹೃದಯವು ಕೇಡನ್ನು ಕಲ್ಪಿಸಿ, ನಡೆಯದೆ ಇರುವುದನ್ನು ನಡಿಸಿ ಯೆಹೋವನಿಗೆ ವಿರುದ್ಧವಾಗಿ ಅಸತ್ಯವನ್ನಾಡಿ, ಹಸಿದವನ ಆಶೆಯನ್ನು ಬರಿದುಮಾಡಿ, ಬಾಯಾರಿದವನ ಪಾನವನ್ನು ತಪ್ಪಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು