ಯೆಹೆಜ್ಕೇಲನು 34:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 “‘ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ದೇಶದಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ನಾನು ಅವರೊಂದಿಗೆ ಶಾಂತಿಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ನಾಡಿನಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ದೇಶದಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 “ನಾನು ನನ್ನ ಕುರಿಗಳೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡುವೆನು. ಕೆಟ್ಟ ಕುರಿಗಳನ್ನು ನಾನು ದೇಶದೊಳಗಿಂದ ತೆಗೆದುಬಿಡುವೆನು. ಆಮೇಲೆ ನನ್ನ ಕುರಿಗಳು ಅಡವಿಯಲ್ಲಿ ಸುರಕ್ಷಿತವಾಗಿದ್ದು ಕಾಡುಗಳಲ್ಲಿ ಮಲಗಿಕೊಳ್ಳುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 “ ‘ಅವರ ಸಂಗಡ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ದುಷ್ಟಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು. ಆದ್ದರಿಂದ ಅವರು ನಿರ್ಭಯವಾಗಿ ಮರುಭೂಮಿಯಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು. ಅಧ್ಯಾಯವನ್ನು ನೋಡಿ |
ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.